ಗೋಣಿಕೊಪ್ಪಲು, ಮಾ.೧೯: ರೈತ ವಿರೋಧಿಯಾದ ಎಪಿಎಂಸಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮತ್ತು ಗೋಹತ್ಯೆ ನಿಷೇಧ ತಿದ್ದುಪಡಿ ಕಾಯ್ದೆಗಳ ರದ್ದತಿಗಾಗಿ, ವಿದ್ಯುತ್ ಖಾಸಗೀಕರಣ ಮಸೂದೆಯ ವಾಪಸಾತಿಗಾಗಿ, ಎಲ್ಲಾ ಅಗತ್ಯ ದವಸ ಧಾನ್ಯಗಳು ದೊರಕುವಂತ ಪಡಿತರ ವ್ಯವಸ್ಥೆಯ ವಿಸ್ತರಣ ಮತ್ತು ಕನಿಷ್ಟ ಬೆಂಬಲ ಬೆಲೆಯ ಕಾನೂನು ಜಾರಿಗಾಗಿ ಖಾಸಗಿ ಕೃಷಿ ಮಾರುಕಟ್ಟೆಗಳಿಗೆ ನೀಡಿರುವ ಪರವಾನಗಿಗಳ ರದ್ದತಿಗಾಗಿ ಆಗ್ರಹಿಸಿ ಕರ್ನಾಟಕ ರೈತ ಸಂಘದಿAದ ತಾ. ೨೧ರಂದು ಬೃಹತ್ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪೂಣಚ್ಚ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲೆಯ ಕೇಂದ್ರ ಕಚೆೆÃರಿ ಗೋಣಿಕೊಪ್ಪಲುವಿನಲ್ಲಿ ಆಯೋಜಿ ಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಚಲೋ ಹಾಗೂ ತಾ. ೨೧ರಿಂದ ೨೩ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ರೈತರ ಅಧಿವೇಶನಗಳು ನಡೆಯಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಪ್ರಗತಿಪರ ಸಂಘಟನೆ ಸೇರಿದಂತೆ ನೂರಾರು ಸಂಘಟನೆಗಳು ಈ ಅಧಿವೇಶನದಲ್ಲಿ ಪಾಲ್ಗೊಳ್ಳಲಿವೆÉ. ಕಾರ್ಯಕ್ರಮದಲ್ಲಿ ವಿವಿಧ ರಾಜ್ಯದ ರೈತ ಮುಖಂಡರು ಭಾಗವಹಿಸಲಿ ದ್ದಾರೆ,
ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ ಮಾತನಾಡಿ, ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಕೊಡಗಿನಿಂದ ೩೫೦ಕ್ಕೂ ಅಧಿಕ ರೈತರು ಭಾಗವಹಿಸಲಿದ್ದಾರೆ. ರೈತರ ಅಧಿವೇಶನದಲ್ಲಿ ಕೊಡಗು ಜಿಲ್ಲೆಯ ರೈತರ ಪ್ರಮುಖ ಬೆಳೆಯಾದ ಕರಿಮೆಣಸು ಹಾಗೂ ಕಾಫಿಗೆ ಎಂಎಸ್‌ಪಿ ನಿಗದಿಪಡಿಸಬೇಕು. ವನ್ಯ ಜೀವಿಗಳೊಂದಿಗೆ ಮಾನವನ ಸಂಘರ್ಷ ಪರಿಹಾರಕ್ಕೆ ಸರ್ಕಾರ ಶಾಶ್ವತ ಪರಿಹಾರ ಕೈಗೊಳ್ಳಬೇಕು. ಕಾಫಿ ಬೆಳೆಗಾರರಿಗೆ ಉಚಿತ ವಿದ್ಯುತ್ ಸೌಲಭ್ಯ ಒದಗಿಸಬೇಕು ಎಂಬಿತ್ಯಾದಿ ವಿಷಯಗಳ ಬಗ್ಗೆ ಪ್ರಸ್ತಾಪಿಸಲಾಗುವುದು ಎಂದರು. ಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಶ್ ಸುಬ್ಬಯ್ಯ, ಖಜಾಂಚಿ ಇಟ್ಟಿರ ಸಭಿತ ಭೀಮಯ್ಯ, ಪೊನ್ನಂಪೇಟೆ ಹೋಬಳಿ ಅಧ್ಯಕ್ಷ ಆಲೆಮಾಡ ಮಂಜುನಾಥ್, ಸೋಮವಾರಪೇಟೆ ರೈತ ಮುಖಂಡ ಲಕ್ಷö್ಮಣ್ ಉಪಸ್ಥಿತರಿದ್ದರು.
ಬೆಂಗಳೂರು ಚಲೋಗೆ ೧೦೦ ಮಂದಿ
ಸೋಮವಾರಪೇಟೆ : ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಆಗ್ರಹಿಸಿ ತಾ.೨೧ರಂದು ಸಂಯುಕ್ತ ಹೋರಾಟ ಸಮಿತಿ ರೂಪಿಸಿರುವ ಬೃಹತ್ ಬೆಂಗಳೂರು ಚಲೋ ಮತ್ತು ಪರ್ಯಾಯ ಜನಾಧಿವೇಶನ ಕಾರ್ಯಕ್ರಮಕ್ಕೆ ಸೋಮವಾರಪೇಟೆ ಯಿಂದ ನೂರು ಮಂದಿ ರೈತ ಹೋರಾಟಗಾರರು ಭಾಗವಹಿಸಲಿ ದ್ದಾರೆ ಎಂದು ಸಂಘದ ತಾಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.