ಕೂಡಿಗೆ, ಮಾ. ೨೦: ಮಾರ್ಚ್ ೨೮ ರಿಂದ ಏಪ್ರಿಲ್ ೧೧ ರ ವರೆಗೆ ನಡೆಯಲಿರುವ ಈ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಉತ್ತಮ ಶೈಕ್ಷಣಿಕ ಸಾಧನೆಗೆ ಶಿಕ್ಷಕರು ಮಕ್ಕಳಲ್ಲಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸದೊಂದಿಗೆ ಅವರಲ್ಲಿ ಕಲಿಕಾ ಪ್ರೇರೇಪಣೆ ಬೆಳೆಸಬೇಕು ಎಂದು ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಸಲಹೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಕೂಡಿಗೆ ಅಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿ ಯಾಗಿ ಏರ್ಪಡಿಸಿದ್ದ ತಾಲೂಕು ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಶೈಕ್ಷಣಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಕರು ಮಕ್ಕಳ ಶೈಕ್ಷಣಿಕ ಪ್ರಗತಿಯೊಂದಿಗೆ ಪರೀಕ್ಷಾ ಸಮಯದಲ್ಲಿ ಅವರ ಪ್ರತಿದಿನದ ಕಲಿಕೆಯೊಂದಿಗೆ, ಆರೋಗ್ಯ ರಕ್ಷಣೆ ಬಗ್ಗೆ ಕೂಡ ಹೆಚ್ಚಿನ ನಿಗಾ ವಹಿಸಬೇಕು ಎಂದರು.
ಮಕ್ಕಳಲ್ಲಿ ಸಹಜ ಮನಸ್ಥಿತಿಯಿಂದ ಪರೀಕ್ಷೆ ಬರೆಯಲು ಅವರಲ್ಲಿ ಆತ್ಮವಿಶ್ವಾಸ ತುಂಬಬೇಕು.

ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್.ಪಲ್ಲೇದ್, ಮುಖ್ಯೋಪಾಧ್ಯಾಯರ ಸಂಘದ ಪದಾಧಿಕಾರಿಗಳಾದ ಜಿ.ಎಂ. ಹೇಮಂತ್, ಎಂ.ವಿ.ಮAಜೇಶ್, ಎಸ್.ಎಸ್.ಎಲ್.ಸಿ. ಪರೀಕ್ಷೆಯ ತಾಲೂಕು ನೋಡಲ್ ಅಧಿಕಾರಿ ಕೆ.ಬಿ. ರಾಧಾಕೃಷ್ಣ, ಅಂಜೆಲಾ ವಿದ್ಯಾನಿಕೇತನ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೀಣಾ ವಿಜಯ್ ಕ್ಯಾಸ್ಟಲಿನ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾ ಧ್ಯಾಯ ಟಿ.ಜಿ. ಪ್ರೇಮಕುಮಾರ್, ಮುಖ್ಯೋಪಾಧ್ಯಾಯರುಗಳಾದ ಮೆಹಬೂಬ್ ಖಾನ್, ಬಿ.ಎನ್. ಪುಷ್ಪ, ಬಿ.ಆರ್.ಪಿ. ಎಸ್.ಎನ್. ಲೋಕೇಶ್ ಇತರರು ಇದ್ದರು.