ಬಿಪಿನ್ ರಾವತ್ ಅವರಿಗೆ ಮರಣೋತ್ತರ ಪದ್ಮವಿಭೂಷಣ್
ನವದೆಹಲಿ, ಮಾ. ೨೧: ದೇಶದ ಮೊದಲ ‘ಚೀಫ್ ಆಫ್ ದಿ ಡಿಫೆನ್ಸ್ ಸ್ಟಾಫ್’ ದಿವಂಗತ ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರ ಪದ್ಮವಿಭೂಷಣ್ ಪ್ರಶಸ್ತಿ ಮೂಲಕ ಗೌರವಿಸಲಾಗಿದ್ದು, ರಾವತ್ ಅವರ ಇಬ್ಬರು ಪುತ್ರಿಯರು ನವದೆಹಲಿಯಲ್ಲಿ ಇಂದು ರಾಷ್ಟçಪತಿ ರಾಮ್ನಾಥ್ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು. ಕಳೆದ ಡಿಸೆಂಬರ್ ೮ ರಂದು ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಇತರ ೧೧ ಮಂದಿ ಮರಣಹೊಂದಿದ್ದರು.
ಉಕ್ರೇನ್ನಿAದ ಬಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಕಲಿಕೆಗೆ ಅವಕಾಶ
ಬೆಂಗಳೂರು, ಮಾ. ೨೧: ಉಕ್ರೇನ್ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಸೋಮವಾರ ಕೈಗೊಂಡಿದೆ. ಇಂದು ವಿಧಾನಸೌಧದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್ ಅವರು, ಉಕ್ರೇನ್ ಹಾಗೂ ರಷ್ಯಾ ನಡುವೆ ನಿರಂತರವಾಗಿ ಯುದ್ಧ ನಡೆಯುತ್ತಿದೆ. ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ೭೦೦ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಬಗ್ಗೆ ಅವರೊಂದಿಗೆ ಚರ್ಚಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ಅದರಂತೆ ಚರ್ಚೆ ನಡೆಸಿದ್ದು, ತಾತ್ಕಾಲಿಕವಾಗಿ ಒಂದು ಅಭಿಪ್ರಾಯಕ್ಕೆ ಬರಲಾಗಿದೆ ಎಂದು ವಿವರಿಸಿದರು. ಮೊದಲ ವರ್ಷದಿಂದ ಆರಂಭವಾಗಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಇಲ್ಲಿದ್ದಾರೆ. ರಾಜ್ಯದಲ್ಲಿ ೬೦ ಮೆಡಿಕಲ್ ಕಾಲೇಜುಗಳಿವೆ. ಈ ವಿದ್ಯಾರ್ಥಿಗಳು ಈ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗವನ್ನು ಆಯಾ ವರ್ಷದಲ್ಲೇ ಮುಂದುವರಿಸುವAತೆ ಕ್ರಮ ವಹಿಸಲು ತೀರ್ಮಾನಿಸಲಾಗಿದೆ. ಈಗ ನಡೆಯುತ್ತಿರುವ ತರಬೇತಿಯನ್ನೇ ಮುಂದುವರಿಸಲಾಗುವುದು ಎಂದು ತಿಳಿಸಿದರು. ಸದ್ಯಕ್ಕೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುತ್ತಿಲ್ಲ. ಆದರೆ ಅವರ ಕಲಿಕೆ, ತರಬೇತಿಯನ್ನು ಇಲ್ಲಿ ಮುಂದುವರಿಸಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಉಚಿತವಾಗಿಯೇ ಶಿಕ್ಷಣ ಮುಂದುವರಿಸಬಹುದು ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು. ಸಮಿತಿಯಿಂದ ಕೇಂದ್ರ ಸರ್ಕಾರಕ್ಕೆ ಎಲ್ಲ ಬಗೆಯ ಮನವಿಗಳನ್ನು ಸಲ್ಲಿಸಲಾಗುವುದು. ಈ ವಿಚಾರದಲ್ಲಿ ಕೇಂದ್ರ ಸರ್ಕಾರವೇ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದರು.
ಮಣಿಪುರ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್
ಇAಫಾಲ್, ಮಾ. ೨೧: ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಎನ್ ಬಿರೇನ್ ಸಿಂಗ್ ಅವರು ಸೋಮವಾರ ಸತತ ಎರಡನೇ ಬಾರಿಗೆ ಮಣಿಪುರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜಭವನದಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಬಿರೇನ್ ಸಿಂಗ್ ಅವರಿಗೆ ರಾಜ್ಯಪಾಲ ಲಾ ಗಣೇಶನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಬಿರೇನ್ ಸಿಂಗ್ ಅವರೊಂದಿಗೆ ಐವರು ಶಾಸಕರು ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿರೇನ್ ಸಿಂಗ್ ಅವರು ೩೨ ಶಾಸಕರನ್ನು ಹೊಂದಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಕಿರಣ್ ರಿಜಿಜು ಅವರು ಭಾನುವಾರ ತಿಳಿಸಿದ್ದರು. ನಂತರ ಮಣಿಪುರ ರಾಜ್ಯಪಾಲರನ್ನು ಭೇಟಿ ಮಾಡಿ ನೂತನ ಸರ್ಕಾರ ರಚಿಸುವ ಹಕ್ಕು ಮಂಡಿಸಿದ್ದರು.
ಚೀನಾದಲ್ಲಿ ವಿಮಾನ ಪತನ
ಬೀಜಿಂಗ್, ಮಾ. ೨೧: ಚೀನಾದಲ್ಲಿ ೧೩೩ ಜನ ಪ್ರಯಾಣಿಸುತ್ತಿದ್ದ ವಿಮಾನವೊಂದು ದಕ್ಷಿಣ ಪ್ರಾಂತ್ಯದ ಗುವಾಂಗ್ಸಿಯಲ್ಲಿ ಸೋಮವಾರ ಪತನಗೊಂಡಿದ್ದು, ಪರ್ವತದ ಬದಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ ಚೀನಾ ಈಸ್ಟರ್ನ್ ಏರ್ಲೈನ್ಸ್ಗೆ ಸೇರಿದ ಬೋಯಿಂಗ್ ೭೩೭-೮೦೦ ವಿಮಾನ ಒU೫೭೩೫ ವಿಮಾನ ಟೆಂಗ್ ಕೌಂಟಿಯ ವುಝೌ ನಗರದ ಬಳಿ ಅಪಘಾತಕ್ಕೀಡಾಗಿದ್ದು, ಗುಡ್ಡ ಪ್ರದೇಶದಿಂದ ಭರ್ಜರಿ ಹೊಗೆ ಏಳುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಇದು ಸುಮಾರು ಆರು ವರ್ಷ ಹಳೆ ವಿಮಾನವಾಗಿದ್ದು, ಅಪಘಾತದಲ್ಲಿ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ. ಆದರೆ ತಕ್ಷಣಕ್ಕೆ ಮೃತಪಟ್ಟವರ ಮತ್ತು ಗಾಯಗೊಂಡವರ ಸಂಖ್ಯೆಯ ಬಗ್ಗೆ ಮಾಹಿತಿ ಇಲ್ಲ ಎಂದು ವರದಿ ಹೇಳಿದೆ. ಈ ವಿಮಾನ ಕನ್ಮಿಂಗ್ನಿAದ ಗುವಾಂಗ್ಸಿ ನಗರಕ್ಕೆ ತೆರಳುತ್ತಿತ್ತು. ಆದರೆ, ನಿಗದಿತ ಸಮಯಕ್ಕೆ ಗುವಾಂಗ್ಸಿ ನಗರಕ್ಕೆ ವಿಮಾನ ತಲುಪಿಲ್ಲ ಎಂದು ವರದಿಗಳು ಹೇಳಿವೆ. ಮಧ್ಯಾಹ್ನ ೧ ಗಂಟೆಗೆ ವಿಮಾನ ಪತನವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಸಚಿವÀ ನವಾಬ್ ಮಲಿಕ್ ನ್ಯಾಯಾಂಗ ಬಂಧನ ವಿಸ್ತರಣೆ
ಮುಂಬೈ, ಮಾ. ೨೧: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬAಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟç ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ ೪ರ ವರೆಗೆ ವಿಸ್ತರಿಸಲಾಗಿದೆ. ವಿಶೇಷ ಪಿಎಂಎಲ್ಎ ಕೋರ್ಟ್ ಎನ್ಸಿಪಿ ನಾಯಕ ನವಾಬ್ ಮಲಿಕ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ ೪ರ ವರೆಗೆ ವಿಸ್ತರಿಸಿದ್ದು, ಈ ಅವಧಿಯಲ್ಲಿ ಮಲಿಕ್ಗೆ ಬೆಡ್ ಮತ್ತು ಕುರ್ಚಿಯನ್ನು ಒದಗಿಸಲು ನ್ಯಾಯಾಲಯ ಅನುಮತಿ ನೀಡಿದೆ. ಆದರೆ, ಮನೆ ಊಟಕ್ಕಾಗಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಬಾಕಿ ಉಳಿಸಿಕೊಂಡಿದ್ದು, ಮುಂದಿನ ವಿಚಾರಣೆಯ ದಿನಾಂಕದAದು ಈ ಕುರಿತು ತೀರ್ಮಾನಿಸಲಿದೆ.
ಸಿಲಿಂಡರ್ ಸ್ಫೋಟ - ಇಬ್ಬರ ಸಾವು
ಉಡುಪಿ, ಮಾ. ೨೧: ಕಾಪು ತಾಲೂಕಿನ ಮಲ್ಲಾರು ಫಕೀರನ ಕಟ್ಟೆಯಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ. ಅಂಗಡಿಯ ಪಾಲುದಾರರಾದ ಚಂದ್ರನಗರದ ರಜಬ್ ಹಾಗೂ ಇನ್ನೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನೋರ್ವ ಪಾಲುದಾರ ಹಸನಬ್ಬ, ಬೆಳಪು ಗ್ರಾಪಂ ಸದಸ್ಯ ಫಹೀಮ್ ಬೆಳಪು ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿAದ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ.
ರಾಜ್ಯಸಭೆಗೆ ಐವರ ನಾಮನಿರ್ದೇಶನ
ಚಂಡೀಗಢ, ಮಾ. ೨೧: ಪಂಜಾಬ್ನ ಆಮ್ ಆದ್ಮಿ ಪಕ್ಷವು ರಾಜ್ಯದಿಂದ ಐವರು ರಾಜ್ಯಸಭಾ ಸದಸ್ಯರನ್ನು ನಾಮನಿರ್ದೇಶನ ಮಾಡಿದೆ. ಆಪ್ನಿಂದ ನಾಮನಿರ್ದೇಶನಗೊಂಡವರಲ್ಲಿ ಖ್ಯಾತ ಬೌಲರ್ ಹರ್ಭಜನ್ ಸಿಂಗ್ ಕೂಡ ಸೇರಿದ್ದಾರೆ ಎನ್ನುವುದು ವಿಶೇಷ. ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಪ್ ೯೨ ಸ್ಥಾನ ಗಳಿಸಿ ಜಯಭೇರಿ ಬಾರಿಸಿತ್ತು. ಪಂಜಾಬ್ನ ಏಳು ರಾಜ್ಯಸಭಾ ಸ್ಥಾನಗಳ ಪೈಕಿ ಐದು ಸ್ಥಾನಗಳಿಗೆ ಮೇ ೩೧ ರಂದು ಚುನಾವಣೆ ನಡೆಯಲಿದೆ. ಕ್ರಿಕೆಟಿಗ ಹರ್ಭಜನ್ ಸಿಂಗ್ ಸೇರಿದಂತೆ ಡಾ. ಸಂದೀಪ್ ಪಟ್ನಾಯಕ್, ಶಾಸಕ ರಾಘವ್ ಚಡ್ಡಾ, ಪ್ರೊಫೆಸರ್ ಅಶೋಕ್ ಮಿತ್ತಲ್, ಕೃಷ್ಣ ಪ್ರಾಣ್ ಆಪ್ನಿಂದ ನಾಮನಿರ್ದೇಶನಗೊಂಡವರು.