*ಗೋಣಿಕೊಪ್ಪ, ಮಾ. ೨೧: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದೆAಬ ದೂರದೃಷ್ಠಿಯಲ್ಲಿ ಪ್ರಧಾನ ಮಂತ್ರಿ ಮೋದಿ ಅವರು ದೇಶದಲ್ಲಿ ೨ ಲಕ್ಷ ೬೨ ಸಾವಿರ ಪಂಚಾಯಿತಿ ವ್ಯಾಪ್ತಿಗಳಿಗೆ ಜಲ್ ಜೀವನ್ ಯೋಜನೆಯಡಿ ಪ್ರತಿ ಮನೆಗಳಿಗೆ ನಲ್ಲಿ ಅಳವಡಿಸಿ ಕುಡಿಯುವ ನೀರು ಒದಗಿಸುವ ಕಾರ್ಯ ಪ್ರಗತಿಯಲ್ಲಿ ಸಾಗಿದೆ. ದೇಶದಲ್ಲಿಯೇ ಪ್ರಥಮವಾಗಿ ವೀರಾಜಪೇಟೆ ತಾಲೂಕು ಯೋಜನೆಯನ್ನು ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಕೊಡಗು - ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದರು.
ಹುದಿಕೇರಿ, ತಿತಿಮತಿ, ಕಾನೂರು ಗ್ರಾಮ ಪಂಚಾಯಿತಿಗಳಲ್ಲಿ ಕೊಡಗಿನಲ್ಲಿ ಪ್ರಥಮವಾಗಿ ಅನುಷ್ಠಾನಗೊಂಡ ಜಲ್‌ಜೀವನ್ ಯೋಜನೆಯನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಿ ಮಾತನಾಡಿದರು. ಮೋದಿ ಸರ್ಕಾರದಲ್ಲಿ ಗ್ರಾಮೀಣ ಭಾಗಗಳು ಹಂತಹAತವಾಗಿ ಅಭಿವೃದ್ಧಿ ಕಂಡುಕೊಳ್ಳುತ್ತಿದೆ. ಗ್ರಾಮೀಣ ಭಾಗದ ಏಳಿಗೆಗಾಗಿ ಹಲವಾರು ಯೋಜನೆಗಳನ್ನು ರೂಪಿಸುವ ಮೂಲಕ ಕೇಂದ್ರ ಸರ್ಕಾರ ತನ್ನ ಆಡಳಿತದ ಪ್ರಾಮಾಣಿಕ ನಿಷ್ಠೆಯಿಂದ ಮೆರೆಯುತ್ತಿದೆ ಎಂದು ಶ್ಲಾಘಿಸಿದರು.
ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೊದಲ ಹಂತವಾಗಿ ೨೪೬ ಮನೆಗಳಿಗೆ ೮೬.೯೬ ಲಕ್ಷದಲ್ಲಿ ಜಲ್‌ಜೀವನ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. ತಿತಿಮತಿ, ನೊಖ್ಯ, ದೇವಮಚ್ಚಿಯಲ್ಲಿ ೩೬೧ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕವನ್ನು ಮೊದಲ ಹಂತದಲ್ಲಿ ಒದಗಿಸಿದ್ದು, ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ೬೧.೭೬ ಲಕ್ಷದಲ್ಲಿ ೩೫೨ ಮನೆಗಳಿಗೆ ಮೊದಲ ಹಂತವಾಗಿ ಜಲ್‌ಜೀವನ್ ಯೋಜನೆಯಡಿ ಕುಡಿಯುವ ನೀರಿನ ವ್ಯವಸ್ಥೆಯನ್ನು ನೀಡಲಾಗಿದೆ. ಕೊಡಗಿನಲ್ಲಿ ಪ್ರಥಮವಾಗಿ ವೀರಾಜಪೇಟೆ ಕ್ಷೇತ್ರದಲ್ಲಿ ಕೇಂದ್ರ ಸರ್ಕಾರದ ಜಲ್‌ಜೀವನ್ ಯೋಜನೆ ಅನುಷ್ಠಾನಗೊಂಡು ಸಾರ್ವಜನಿಕ ಸೇವೆಗೆ ಸಮರ್ಪಣೆಯಾಗುತ್ತಿದೆ.
ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ತಾಲೂಕಿನ ೩೧ ಕಾಮಗಾರಿಗಳು ಸುಮಾರು ೨೦ ಕೋಟಿ ಅನುದಾನದಲ್ಲಿ ನಡೆಯುತ್ತಿದೆ. ತ್ವರಿತವಾಗಿ ೫ ಕಾಮಗಾರಿಗಳು ನಡೆದಿವೆ. ಎಲ್ಲರ ಸಹಕಾರದೊಂದಿಗೆ ಪೂರ್ಣ ಕಾಮಗಾರಿಗಳು ಸೇವೆಗೆ ಸಮರ್ಪಣೆಯಾದರೆ ರಾಜ್ಯದಲ್ಲಿಯೇ ಜಲ್‌ಜೀವನ್ ಯೋಜನೆ ಅನುಷ್ಠಾನ ಗೊಂಡ ಮೊದಲ ತಾಲೂಕು ಎಂಬ ಗೌರವಕ್ಕೆ ಪಾತ್ರರಾಗಬಹುದಾಗಿದೆ ಎಂದು ಹೇಳಿದರು.
ಈ ವರ್ಷ ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ಗ್ರಾಮ ರಸ್ತೆಗಳ ಅಭಿವೃದ್ದಿಗೆ ೨೨೦ ಲಕ್ಷ ಅನುದಾನ ನೀಡಲಾಗಿದ್ದು, ಕ್ಷೇತ್ರದಲ್ಲಿ ಶೇ. ೫೦ರಷ್ಟು ಕಾಮಗಾರಿಗಳು ಪ್ರಗತಿಯನ್ನು ಕಂಡಿವೆ. ಅಲ್ಲದೇ ರಸ್ತೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ಯಿಂದಲೂ ಹೆಚ್ಚಿನ ಅನುದಾನ ಬಿಡುಗಡೆಯಾಗಿದ್ದು, ಪ್ರತಿ ಕಾಮಗಾರಿಗಳು ಶೀಘ್ರಗತಿಯಲ್ಲಿ ನಡೆಸಲಾಗುವುದು ಎಂದು ಮಾಹಿತಿ ನೀಡಿ ಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ೫ ಕೋಟಿ ಅನುದಾನ ಅಭಿವೃದ್ಧಿಗಾಗಿ ನೀಡಲಾಗಿದೆ ಎಂದು ಗ್ರಾಮಸ್ಥರಿಗೆ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಮಂಡೇಪAಡ ಸುಜಾ ಕುಶಾಲಪ್ಪ, ರಾಜ್ಯ ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ತಾಲೂಕು ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೊಣಿಯಂಡ ಅಪ್ಪಣ್ಣ, ಜಿಲ್ಲಾ ದಿಶಾ ಸಮಿತಿ ಸದಸ್ಯೆ ಮಾಪಂಗಡ ಯಮುನಾಚಂಗಪ್ಪ, ಜಲ್‌ಜೀವನ್ ಯೋಜನೆಯ ಹಿರಿಯ ಇಂಜಿನಿಯರ್ ಯೋಗೇಶ್ ಗೌಡ, ಜಿ.ಪಂ. ಇಂಜಿನಿಯರ್ ಮಹಾದೇವ್, ಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಕ್ಕೇರ ಚಂದ್ರಪ್ರಕಾಶ್, ಗ್ರಾ. ಪಂ. ಸದಸ್ಯರುಗಳು, ಗ್ರಾಮದ ಪ್ರಮುಖರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಜರಿದ್ದರು.