ಸೋಮವಾರಪೇಟೆ, ಮಾ. ೨೧: ಇಲ್ಲಿಗೆ ಸಮೀಪದ ತಪೋವನ ಕ್ಷೇತ್ರ ಮನೆಹಳ್ಳಿ ಮಠದ ಆವರಣದಲ್ಲಿ ಸಮಾಜ ಸೇವಕರು ಹಾಗೂ ದಾನಿಗಳಾದ ಕೃಷ್ಣೇಗೌಡ ಅವರನ್ನು ಸನ್ಮಾನಿಸಲಾಯಿತು.
ಈ ಸಂದÀರ್ಭ ಕ್ಷೇತ್ರದ ಮಠಾಧಿಪತಿಗಳಾದ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಜಿಲ್ಲಾ ಕೃಷಿ ಉಪನಿರ್ದೇಶಕರಾದ ಮುತ್ತುರಾಜ್, ವಿಜ್ಞಾನಿಗಳಾದ ಬಸವಣ್ಣ, ತೋಟಗಾರಿಕೆ ಸಹಾಯಕ ನಿರ್ದೇಶಕ ಡಾ.ಮಂಜುನಾಥ್, ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್ ಪ್ರಮುಖರಾದ ನಾರಾಯಣ ಸ್ವಾಮಿ, ಪುನೀತ್ ಹಾಗೂ ಲಿತೀಶ್ ಮತ್ತಿತರರು ಹಾಜರಿದ್ದರು.