ಮಡಿಕೇರಿ, ಮಾ. ೨೧: ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ಅರಣ್ಯ ಹಾಗೂ ಜಲ ಸಂರಕ್ಷಣೆಯೊAದಿಗೆ ಪ್ರಾಣಿ-ಪಕ್ಷಿಗಳ ಸಂಕುಲ ಸೇರಿದಂತೆ ಜೀವಿ ವೈವಿಧ್ಯ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಸೋಮವಾರ ಕರೆ ನೀಡಿದರು.

ಕೊಡಗು ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ವಿಶ್ವ ಅರಣ್ಯ ದಿನ ಹಾಗೂ ವಿಶ್ವ ಜಲ ದಿನಾಚರಣೆ ೨೦೨೨ರ ಸಂದರ್ಭದಲ್ಲಿ ಪರಿಸರ ಮಾಹಿತಿಯ ಭಿತ್ತಿಪತ್ರ ಬಿಡುಗಡೆಗೊಳಿಸಿ ಪರಿಸರ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು.

ಪ್ರತಿಯೊಬ್ಬರೂ ನೆಲ-ಜಲ, ಅರಣ್ಯ, ಪರಿಸರ, ವನ್ಯಜೀವಿಗಳು ಸೇರಿದಂತೆ ಜೀವ ವೈವಿಧ್ಯವನ್ನು ಸಂರಕ್ಷಣೆ ಮಾಡುವುದರೊಂದಿಗೆ ನಮ್ಮ ಸುತ್ತಲಿನ ಪರಿಸರದಲ್ಲಿ ಮರ-ಗಿಡಗಳ ಸಂರಕ್ಷಣೆಯೊAದಿಗೆ ಜಲ ಸಂರಕ್ಷಣೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳು,ಮುಖ್ಯೋಪಾಧ್ಯಾಯರಿಗೆ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದರು.

ಕಣ್ಮರೆಯಾಗುತ್ತಿರುವ ಗುಬ್ಬಚ್ಚಿ ಸೇರಿದಂತೆ ಪಕ್ಷಿ ಸಂಕುಲ ಸಂರಕ್ಷಿಸಲು ಶಿಕ್ಷಕರು ಮಕ್ಕಳಿಗೆ ಅರಿವು ಮೂಡಿಸುವುದರೊಂದಿಗೆ ಅವರಿಗೆ ತಿಳುವಳಿಕೆ ನೀಡಬೇಕು. ನಮ್ಮ ಸುತ್ತಲಿನ ಪರಿಸರದಲ್ಲಿ ಬೇಸಿಗೆ ಅವಧಿಯಲ್ಲಿ ಪಕ್ಷಿಗಳಿಗೆ ನೀರು ಮತ್ತು ಕಾಳುಗಳನ್ನು ನೀಡುವ ಮೂಲಕ ಅವುಗಳ ಸಂತತಿಯನ್ನು ವೃದ್ಧಿಸಬೇಕು. ಮನೆಯಂಗಳ, ಮೇಲ್ಛಾವಣಿ ಮತ್ತು ತಾರಸಿ ಮನೆಗಳ ಮೇಲೆ ಪಕ್ಷಿಗಳಿಗೆ ಪೂರಕವಾದ ವಾತಾವರಣ ಕಲ್ಪಿಸುವ ಮೂಲಕ ಅವುಗಳನ್ನು ರಕ್ಷಿಸಬೇಕಿದೆ ಎಂದÀÄ ಕರೆ ನೀಡಿದರು.

ವಿಶ್ವ ಅರಣ್ಯ ದಿನ ಹಾಗೂ ವಿಶ್ವ ಜಲ ದಿನದ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ರಾಷ್ಟಿçÃಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಪರಿಸರ ಕಾರ್ಯಕ್ರಮಗಳ ಸಂಘಟಕ ಟಿ.ಜಿ. ಪ್ರೇಮಕುಮಾರ್ ಅವರು ಶಾಲೆಗಳಲ್ಲಿ ಇಕೋ ಕ್ಲಬ್ ವತಿಯಿಂದ ಮಕ್ಕಳಿಗೆ ಪರಿಸರ ಸ್ನೇಹಿ ಚಟುವಟಿಕೆಗಳ ಮೂಲಕ ಅವರಲ್ಲಿ ಪರಿಸರ ಪ್ರಜ್ಞೆ ಮೂಡಿಸಲಾಗುತ್ತಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ ಪರಿಸರ ಮಾಹಿತಿಯುಳ್ಳ ಘೋಷಣಾ ಫಲಕಗಳನ್ನು ಬಿಡುಗಡೆ ಗೊಳಿಸಿದರು. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ಸಮಗ್ರ ಶಿಕ್ಷಣ ಕರ್ನಾಟಕದ ಜಿಲ್ಲಾ ಉಪ ಯೋಜನಾ ಸಮನ್ವಾಯಾಧಿಕಾರಿ ಕೆ. ಕೃಷ್ಣಪ್ಪ, ಚಾಮರಾಜನಗರ ಡಯಟ್ ಪ್ರಾಂಶುಪಾಲ ಎಚ್.ಕೆ. ಪಾಂಡು, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಕೆ. ಮಂಜುನಾಥ್, ಶ್ರೀಶೈಲ ಬೀಳಗಿ, ಕೆ.ವಿ. ಸುರೇಶ್, ಸಿಪಿಐ ಮೇದಪ್ಪ, ನಗರಸಭೆ ಆಯುಕ್ತ ರಾಮದಾಸ್, ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಸದಸ್ಯ ಎಂ.ಎನ್. ವೆಂಕಟನಾಯಕ್, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಅಧ್ಯಕ್ಷ ಸಿ.ಟಿ. ಸೋಮಶೇಖರ್, ಜಿಲ್ಲೆಯ ವಿವಿಧ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಇದ್ದರು.