ಮಡಿಕೇರಿ, ಮಾ. ೨೧: ಡಿಜಿಟಲ್ ಗ್ರಂಥಾಲಯ ಸ್ಥಾಪನೆಯಲ್ಲಿ ಕೊಡಗು ಜಿಲ್ಲೆ ಮಾಡಿರುವ ಸಾಧನೆ ಕುರಿತಾದ ಸಿ.ಡಿ.ಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದರು.
ಬೆಂಗಳೂರಿನ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಡಿ ಬಿಡುಗಡೆಗೊಳಿಸಲಾಯಿತು.
ರಾಜ್ಯದಲ್ಲಿಯೇ ಜಿಲ್ಲೆಯ ಗ್ರಾಮ ಪಂಚಾಯ್ತಿಗಳಲ್ಲಿ ಹೆಚ್ಚಿನ ಸಂಖ್ಯೆಯ ಡಿಜಿಟಲ್ ಲೈಬ್ರರಿ ಸ್ಥಾಪನೆ ಮಾಡಿ ರಾಜ್ಯಕ್ಕೆ ಮಾದರಿಯಾದ ಹಿನ್ನೆಲೆ ಸಾಧನೆಯನ್ನು ಬಿಂಬಿಸುವ ದೃಶ್ಯಾವಳಿಯ ಸಿಡಿಯನ್ನು ಲೋಕಾರ್ಪಣೆಗೊಳಿಸಿ ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಸಚಿವರುಗಳು, ಕೊಡಗು ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಉಪ ಕಾರ್ಯದರ್ಶಿ ಲಕ್ಷ್ಮಿ ಸೋಮವಾರಪೇಟೆ ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಜಯಣ್ಣ, ಮಡಿಕೇರಿ ಕಾರ್ಯನಿರ್ವಾಹಣಾಧಿಕಾರಿ ಶೇಖರ್ ಇದ್ದರು.