ಮಡಿಕೇರಿ, ಮಾ. ೨೧: ಕೊಡಗು ಜಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ ತಾ. ೨೩ರಂದು ನಡೆಯಲಿದೆ ಎಂದು ಸಂಘದ ಗೌರವಾಧ್ಯಕ್ಷ ಅಪ್ಪಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಮೈತ್ರಿ ಭವನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಎ.ಕೆ. ಸುರೇಶ್ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ಆಗಮಿಸಲಿದ್ದಾರೆ ಎಂದು ಅವರು ತಿಳಿಸಿದರು.

ಗೋಷ್ಠಿಯಲ್ಲಿ ಸಂಘದ ಖಜಾಂಚಿ ಭೀಮಯ್ಯ, ಕಾರ್ಯದರ್ಶಿ ಅಚ್ಚುತ ನಾಯಕ್, ನಿರ್ದೇಶಕರುಗಳಾದ ಕಾವೇರಪ್ಪ, ಚೀಯಣ್ಣ ಹಾಗೂ ಲಿಂಗಪ್ಪ ಉಪಸ್ಥಿತರಿದ್ದರು.