ಸೋಮವಾರಪೇಟೆ, ಮಾ. ೨೦: ಪ್ರಸ್ತುತ ಕಾಫಿ ತೋಟಗಳಲ್ಲಿ ನೀರು ಹಾಯಿಸಿ ಕಾಫಿ ಹೂ ಅರಳಿಸುವ ಕಾರ್ಯ ನಡೆಯುತ್ತಿದ್ದು, ಕಾಫಿ ಬೆಳೆಗಾರ ವಿದ್ಯುತ್ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ದರೆ ಕಚೇರಿಗೆ ಮುತ್ತಿಗೆ ಹಾಕ ಲಾಗುವುದು ಎಂದು ಕರ್ನಾಟಕ ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಎಂ.ದಿನೇಶ್ ಎಚ್ಚರಿಸಿದರು.
ಸೋಮವಾರಪೇಟೆ ಸೆಸ್ಕ್ ಉಪವಿಭಾಗ ಕಚೇರಿಯಲ್ಲಿ ನಡೆದ ವಿಭಾಗದ ಗ್ರಾಹಕರ ಕುಂದು ಕೊರತೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಕಬ್ಬು, ತೆಂಗು, ಹೊಗೆಸೊಪ್ಪು, ಅಡಿಕೆ ಕೃಷಿಕರಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಕೊಡಗಿನಲ್ಲಿ ರೈತರೆ ಕಾಫಿ ಬೆಳೆಯುತ್ತಿದ್ದಾರೆ. ಅವರಿಗೂ ಉಚಿತ ವಿದ್ಯುತ್ ನೀಡಬೇಕು. ಸರ್ಕಾರ ಮಲತಾಯಿ ಧೋರಣೆ ನಿಲ್ಲಿಸಬೇಕು. ಸೆಸ್ಕ್ ನವರು ವಿದ್ಯುತ್ ಕಡಿತಗೊಳಿಸುವುದನ್ನು ನಿಲ್ಲಿಸಬೇಕು ಅಡಿಕೆ ಕೃಷಿಕರಿಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಕೊಡಗಿನಲ್ಲಿ ರೈತರೆ ಕಾಫಿ ಬೆಳೆಯುತ್ತಿದ್ದಾರೆ. ಅವರಿಗೂ ಉಚಿತ ವಿದ್ಯುತ್ ನೀಡಬೇಕು. ಸರ್ಕಾರ ಮಲತಾಯಿ ಧೋರಣೆ ನಿಲ್ಲಿಸಬೇಕು. ಸೆಸ್ಕ್ ನವರು ವಿದ್ಯುತ್ ಕಡಿತಗೊಳಿಸುವುದನ್ನು ನಿಲ್ಲಿಸಬೇಕು ವಿದ್ಯುತ್ ನೀಡುತ್ತಾರೆ. ರೈತರಿಗೆ ವಿದ್ಯುತ್ ಕೊಟ್ಟರೆ ಕೃಷಿ ಉತ್ಪನ್ನಗಳ ಉತ್ಪಾದನೆ ಹೆಚ್ಚಾಗುತ್ತದೆ ಎಂದು ಸಂಘದ ಸಂಚಾಲಕ ಲಕ್ಷö್ಮಣ್ ಹೇಳಿದರು.
ಕೊಡಗು ಜಿಲ್ಲೆಯ ಸಣ್ಣ ಕಾಫಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಕಾಫಿ ಬೆಳೆಗಾರರಿಗೆ ಉತ್ತೇಜನ ನೀಡುವ ಹಿನ್ನೆಲೆಯಲ್ಲಿ ಉಚಿತ ವಿದ್ಯುತ್ ನೀಡಬೇಕು. ಈ ಬಗೆಗಿನ ರೈತರ ಹೋರಾಟಕ್ಕೆ ಜಯಕರ್ನಾಟಕ ಸಂಘಟನೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಂಘಟನೆಯ ತಾಲ್ಲೂಕು ಅಧ್ಯಕ್ಷ ಸಿ.ಬಿ.ಸುರೇಶ್‌ಶೆಟ್ಟಿ ಹೇಳಿದರು.
ಕಾಫಿ ತೋಟಗಳಲ್ಲಿ ಹಾದು ಹೋಗಿರುವ ವಿದ್ಯುತ್ ಮಾರ್ಗವನ್ನು ರಸ್ತೆ ಬದಿಯಲ್ಲಿ ಅಳವಡಿಸುವಂತೆ ಶಿವಪ್ಪ, ರಾಜ್‌ಶೇಖರ್ ಆಗ್ರಹಿಸಿದರು. ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಆಗದಂತೆ ಕೆಲ ಯೋಜನೆಗಳನ್ನು ರೂಪಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಗ್ರಾಹಕರ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಪ್ರತಿ ತಿಂಗಳ ಮೂರನೇ ಶನಿವಾರ ಕಚೇರಿಯಲ್ಲಿ ಗ್ರಾಹಕರ ಸಭೆ ಇರುತ್ತದೆ. ಸಮಸ್ಯೆಗಳಿದ್ದರೆ ಬಂದು ತಿಳಿಸಿದರೆ ಬಗೆಹರಿಸಲಾಗವುದು ಎಂದು ಸೆಸ್ಕ್ ಎಇಇ ಧನಂಜಯ್ ಹೇಳಿದರು.