ಸೋಮವಾರಪೇಟೆ, ಮಾ. ೨೦: ರಾಜ್ಯದಾದ್ಯಂತ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಬಡವರ ಹೊಟ್ಟೆ ತಣಿಸುತ್ತಿರುವ ಸರ್ಕಾರದ ಯೋಜನೆಯೊಂದು ಸೋಮವಾರಪೇಟೆಯಲ್ಲಿ ಹಳ್ಳ ಹಿಡಿದಿದ್ದು, ೨೦೧೭ ರಿಂದ ಕಾಯುತ್ತಿದ್ದರೂ ಈವರೆಗೆ ಕಾರ್ಯಗತಗೊಂಡಿಲ್ಲ.

ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಿ.ಕೆ. ಸುಬ್ಬಯ್ಯ ರಸ್ತೆಗೆ ಹೊಂದಿ ಕೊಂಡಿರುವ ಮಾರ್ಕೆಟ್ ಏರಿಯಾದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆಂದು ಒಂದೆರಡು ಲಕ್ಷ ವ್ಯಯ ಮಾಡಿ ಮಣ್ಣು ಅಗೆದು ತಳಪಾಯ ನಿರ್ಮಿಸಿದ್ದನ್ನು ಹೊರತುಪಡಿಸಿದರೆ ಇತರ ಕಾಮಗಾರಿ ಕೈಗೊಳ್ಳದ ಹಿನ್ನೆಲೆ ಇಂದಿರಾ ಕ್ಯಾಂಟೀನ್ ಈ ಭಾಗದ ಬಡವರ ಪಾಲಿಗೆ ಕನ್ನಡಿಯೊಳಗಿನ ಗಂಟಿನAತಾಗಿದೆ!

ಜೆಡಿಎಸ್-ಕಾAಗ್ರೆಸ್ ಸಮ್ಮಿಶ್ರ ಸರ್ಕಾರಕ್ಕಿಂತಲೂ ಮುಂಚಿನ ಸಾಲಿನಲ್ಲಿ (೨೦೧೭) ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯಾದ್ಯಂತ ಇಂದಿರಾ ಕ್ಯಾಂಟೀನ್ ಯೋಜನೆಯನ್ನು ಜಾರಿಗೆ ತಂದಿದ್ದು, ಅದರಂತೆ ಬಹುತೇಕ ಕಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಕಾರ್ಯ ನಿರ್ವಹಿಸುತ್ತಿದೆ. ಆದರೆ ಸೋಮವಾರಪೇಟೆ ಪಟ್ಟಣದಲ್ಲಿ ಮಾತ್ರ ಈ ಕ್ಯಾಂಟೀನ್‌ನ ಕಟ್ಟಡ ಕಾಮಗಾರಿಗೆ ಇನ್ನೂ ಕಾಲ ಕೂಡಿ ಬಂದಿಲ್ಲ.

ಇದೇ ಇಂದಿರಾ ಕ್ಯಾಂಟೀನ್ ಯೋಜನೆಯ ಮೂಲಕ ಕೊರೊನಾ ಸಂಕಷ್ಟದ ಸಮಯದಲ್ಲಿ ಬಡವರಿಗೆ ಊಟ ಒದಗಿಸಲು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಆದೇಶ ಹೊರಡಿಸಿದ್ದರು. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದಿಗೂ ಬಡವರ ಹೊಟ್ಟೆ ತುಂಬಿಸುತ್ತಿರುವ ಇಂದಿರಾ ಕ್ಯಾಂಟೀನ್, ಸೋಮವಾರಪೇಟೆಯ ಬಡವರ ಪಾಲಿಗೆ ಮಾತ್ರ ಗಗನ ಕುಸುಮವಾಗಿದೆ.

ಇಲ್ಲಿನ ಮಾರ್ಕೆಟ್ ಏರಿಯಾದ ಸಿ.ಕೆ. ಸುಬ್ಬಯ್ಯ ರಸ್ತೆಗೆ ಒತ್ತಿಕೊಂಡAತಿರುವ ಪ.ಪಂ. ವಾಣಿಜ್ಯ ಸಂಕೀರ್ಣದ ಮುಂಭಾಗ ಸುಮಾರು ೮.೫ ಸೆಂಟ್ಸ್ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಅದರಂತೆ ಕ್ಯಾಂಟೀನ್‌ನ ತಳಪಾಯದ ಕಾಮಗಾರಿ ಮುಕ್ತಾಯಗೊಂಡಿದೆ.

ತಳಪಾಯ ಕಾಮಗಾರಿ ಮುಕ್ತಾಯಗೊಂಡು ವರ್ಷಗಳೇ ಕಳೆದರೂ ಸಹ ಇಂದಿಗೂ ಕಟ್ಟಡದ ಕಾಮಗಾರಿ ಪ್ರಾರಂಭವಾಗಿಲ್ಲ. ಇಂದಿರಾ ಕ್ಯಾಂಟೀನ್‌ಗೆ ಪಟ್ಟಣ ಪಂಚಾಯಿತಿಯಿAದ ೮.೫ ಸೆಂಟ್ಸ್ ಜಾಗವನ್ನು ನೀಡಲಾಗಿದ್ದು, ಕಾಮಗಾರಿ ಮಾತ್ರ ನಿಂತ ನೀರಾಗಿದೆ.

ರಾಜ್ಯಾದ್ಯಂತ ಓರ್ವರೇ ಏಜೆನ್ಸಿ ಪಡೆದಿರುವುದರಿಂದ ಕಟ್ಟಡ ನಿರ್ಮಾಣ ವಿಳಂಬವಾಗುತ್ತಿದೆ. ಒಟ್ಟು ರೂ. ೯ ಲಕ್ಷ ವೆಚ್ಚದಲ್ಲಿ ಕ್ಯಾಂಟೀನ್ ಕಟ್ಟಡ ಕಾಮಗಾರಿ ನಡೆಯಲಿದೆ. ಈಗಾಗಲೇ ಪ್ಲಾಟ್ ಫಾರಂ ಕಾಮಗಾರಿ ಪೂರ್ಣ ಗೊಂಡಿದ್ದು, ಇನ್ನು ಮೋಲ್ಡ್ಗಳನ್ನು ತಂದು ಅಳವಡಿಸಬೇಕಿದೆ. ಕಾಮಗಾರಿ ವಿಳಂಬವಾಗಿರುವ ಬಗ್ಗೆ ಜಿಲ್ಲಾಧಿಕಾರಿಗಳ ಕಚೇರಿಗೂ ಮಾಹಿತಿ ನೀಡಲಾಗಿದ್ದು, ಬೆಂಗಳೂರಿನಲ್ಲಿರುವ ಡೈರೆಕ್ಟರ್ ಕಚೇರಿಗೆ ವರದಿ ಮಾಡಲಾಗಿದೆ. ಆದರೂ ಈವರೆಗೆ ಯಾವುದೇ ಸ್ಪಂದನ ಸಿಕ್ಕಿಲ್ಲ.

ಸರ್ಕಾರದ ಬಹು ನಿರೀಕ್ಷಿತ ಯೋಜನೆಯಾದ ಇಂದಿರಾ ಕ್ಯಾಂಟೀನ್ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ, ಸಾರ್ವಜನಿಕರ ಅನುಕೂಲಕ್ಕೆ ಒದಗಿಸಬೇಕು. ಈಗಾಗಲೇ ಕಾಮಗಾರಿ ವಿಳಂಬ ವಾಗಿದ್ದು, ಇನ್ನಾದರೂ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಮುಂದಾಗಬೇಕು. ಸಂಬAಧಿಸಿದ ಗುತ್ತಿಗೆದಾರರ

(ಮೊದಲ ಪುಟದಿಂದ) ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಇಂದಿರಾಗಾAಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಹೆಚ್.ಎ. ನಾಗರಾಜ್ ಒತ್ತಾಯಿಸಿದ್ದಾರೆ.

ಸದ್ಯಕ್ಕೆ ಸಿ.ಕೆ. ಸುಬ್ಬಯ್ಯ ರಸ್ತೆಯಿಂದ ಕ್ಯಾಂಟೀನ್‌ಗೆ ಗುರುತಿಸಿರುವ ನಿವೇಶನಕ್ಕೆ ತೆರಳಲು ಮೆಟ್ಟಿಲುಗಳ ನಿರ್ಮಾಣ, ತಳಪಾಯ ಕಾಮಗಾರಿ ಮಾತ್ರ ನಡೆದಿದ್ದು, ಶೇ.೯೦ರಷ್ಟು ಕಾಮಗಾರಿ ಬಾಕಿ ಉಳಿದಿವೆ. ಇಂದಿರಾ ಕ್ಯಾಂಟೀನ್‌ಗೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗ ನೀಡುವಂತೆ ಆದೇಶ ಬಂದ ಹಿನ್ನೆಲೆ ಅದಕ್ಕೆ ನಿವೇಶನ ಒದಗಿಸಿದ್ದೇವೆ. ಉಳಿದಂತೆ ಕಟ್ಟಡ ನಿರ್ಮಾಣವು ಗುತ್ತಿಗೆದಾರನದ್ದಾಗಿದೆ. ವಿಳಂಬದ ಬಗ್ಗೆ ಈಗಾಗಲೇ ನೋಟೀಸ್ ನೀಡಿದ್ದೇವೆ. ಜಿಲ್ಲಾಧಿಕಾರಿಗಳ ಕಚೇರಿಗೂ ಮಾಹಿತಿ ಒದಗಿಸಲಾಗಿದೆ ಎಂದು ಪ.ಪಂ. ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಾರೆ ಇತರೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ಮೂಲಕ ಕಡಿಮೆ ವೆಚ್ಚದಲ್ಲಿ ಉಪಹಾರ ಲಭಿಸುತ್ತಿದ್ದು, ಹಲವಷ್ಟು ಬಡ ಮಂದಿಗೆ, ಕೂಲಿ ಕಾರ್ಮಿಕರಿಗೆ ಅನುಕೂಲವಾಗಿದೆ. ಆದರೆ ಪಟ್ಟಣ ವ್ಯಾಪ್ತಿಯಲ್ಲಿ ಯೋಜನೆ ನೆನೆಗುದಿಗೆ ಬಿದ್ದಿದ್ದು, ತಕ್ಷಣ ಈ ಬಗ್ಗೆ ಸಂಬAಧಿಸಿದವರು ಗಮನ ಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.