ತ.ನಾಡಿನ ವಿರುದ್ಧ ಕರ್ನಾಟಕದಿಂದ ಖಂಡನಾ ನಿರ್ಣಯ
ಬೆಂಗಳೂರು, ಮಾ. ೨೨: ಮೇಕೆದಾಟು ಯೋಜನೆ ವಿರುದ್ಧ ಸೋಮವಾರ ತಮಿಳುನಾಡು ಸರ್ಕಾರ ನಿರ್ಣಯ ಅಂಗೀಕರಿಸಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕ ಸರ್ಕಾರ, ತಮಿಳುನಾಡಿನ ನಿಲುವನ್ನು ಖಂಡಿಸಿ ನಿರ್ಣಯ ಅಂಗೀಕರಿಸಲು ನಿರ್ಧರಿಸಿದೆ. ಇಂದು ಕರ್ನಾಟಕ ವಿಧಾನಸಭೆಯಲ್ಲಿ ಸದಸ್ಯರು ಪಕ್ಷಾತೀತವಾಗಿ ಇದಕ್ಕೆ ಒಪ್ಪಿಗೆ ಸೂಚಿಸಿದರು ಮತ್ತು ಮಂಗಳವಾರ ಸಂಜೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿದ ನಂತರ ರಾಜ್ಯ ಸರ್ಕಾರ ಬುಧವಾರ ಖಂಡನಾ ನಿರ್ಣಯವನ್ನು ಅಂಗೀಕರಿ ಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಕಾವೇರಿಗೆ ಸಂಬAಧಿಸಿದAತೆ ಕರ್ನಾಟಕ ಯಾವುದೇ ಯೋಜನೆಯನ್ನು ಕೈಗೆತ್ತಿಕೊಂಡರೂ ತಮಿಳುನಾಡು ವಿರೋಧಿಸುತ್ತದೆ ಎಂದು ಸಿಎಂ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡು ತನ್ನ ಪಾಲಿ ನಲ್ಲದ ಹೆಚ್ಚುವರಿ ನೀರನ್ನು ಬಳಸಿಕೊಳ್ಳುತ್ತಿದೆ ಮತ್ತು ಯಾವುದೇ ಅನುಮತಿ ಯಿಲ್ಲದೆ ತಮಿಳುನಾಡಿನ ದಕ್ಷಿಣಕ್ಕೆ ಜಲಾಶಯದ ಕಾಮಗಾರಿಯನ್ನು ಕೈಗೆತ್ತಿ ಕೊಳ್ಳುತ್ತಿದೆ. ಇದು ಕಾನೂನು ಬಾಹಿರವಾಗಿದೆ. ಇದರ ವಿರುದ್ಧವೂ ನಾವು ನಿರ್ಣಯ ಅಂಗೀಕರಿಸುತ್ತೇವೆ. ನಾವು ಕಾನೂನು ತಜ್ಞರೊಂದಿಗೆ ಚರ್ಚಿಸಿ ತಮಿಳುನಾಡು ವಿರುದ್ಧ ನಿರ್ಣಯವನ್ನು ಅಂಗೀಕರಿಸುತ್ತೇವೆ. ಉಭಯ ಸದನಗಳಲ್ಲಿ ಬುಧವಾರ ಸರ್ಕಾರದ ನಿರ್ಧಾರ ತೆಗೆದುಕೊಳ್ಳಲಿದೆ' ಎಂದರು.
ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್, ಅಜಾಂ ಖಾನ್ ರಾಜೀನಾಮೆ
ಲಖನೌ(ಉತ್ತರಪ್ರದೇಶ), ಮಾ. ೨೨: ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೋರಖ್ಪುರ ನಗರ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾದ ಯೋಗಿ ಆದಿತ್ಯನಾಥ್ ಅವರು ಯು.ಪಿ. ವಿಧಾನ ಪರಿಷತ್ ಅಧ್ಯಕ್ಷರನ್ನು ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದೇ ವೇಳೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಅಜಾಂ ಖಾನ್ ಸಹ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ಹಾಲ್ನಿಂದ ಅಖಿಲೇಶ್ ಹಾಗೂ ರಾಮಪುರ ವಿಧಾನಸಭೆ ಕ್ಷೇತ್ರದಿಂದ ಅಜಾಂ ಖಾನ್ ಗೆಲುವು ಸಾಧಿಸಿದ್ದರು. ಉತ್ತರಪ್ರದೇಶದ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ತಮ್ಮ ಪಕ್ಷವನ್ನು ಗೆಲ್ಲಿಸುವಲ್ಲಿ ಸೋತಿದ್ದ ಅಖಿಲೇಶ್ ಯಾದವ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಲೋಕಸಭಾ ಸಭಾಪತಿ ಓಂ ಬಿರ್ಲಾಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಉತ್ತರಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ೧೧೧ ಸೀಟ್ ಗೆದ್ದು ೨ನೇ ಪಕ್ಷವಾಗಿರುವ ಸಮಾಜವಾದಿ ಪಕ್ಷದಿಂದ ಅಖಿಲೇಶ್ ಯಾದವ್ ವಿರೋಧ ಪಕ್ಷದ ನಾಯಕರಾಗಿ ಕೂರಲಿದ್ದಾರೆ. ೨ನೇ ಬಾರಿಗೆ ಯೋಗಿ ಆದಿತ್ಯನಾಥ್ ಎದುರು ಸೋತ ಬಳಿಕ ಅಖಿಲೇಶ್ ಯಾದವ್ ೨೦೨೭ರ ಉತ್ತರ ಪ್ರದೇಶ ಚುನಾವಣೆ ಮೇಲೆ ಕಣ್ಣಿಟ್ಟಿದ್ದು ಈಗಿನಿಂದಲೆ ರಾಮನ ನೆಲದಲ್ಲಿ ಬಿಜೆಪಿ ಸೇರಿದಂತೆ ಯೋಗಿ ಆದಿತ್ಯನಾಥ್ರನ್ನ ಎದುರಿಸಲು ಮುಂದಾಗಿದ್ದಾರೆ.
ಬಸ್-ಕಾರಿನ ನಡುವೆ ಡಿಕ್ಕಿ-ಐವರು ವಿದ್ಯಾರ್ಥಿಗಳ ಸಾವು
ಹಾಸನ, ಮಾ. ೨೨: ಹಾಸನ ಜಿಲ್ಲೆ ಬೇಲೂರು ಸಮೀಪ ಮಂಗಳವಾರ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಐವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಬೇಲೂರು ತಾಲೂಕಿನ ಸಂಕೇನಹಳ್ಳಿ ತಿರುವಿನಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೋರ್ವ ವಿದ್ಯಾರ್ಥಿ ಆಸ್ಪತ್ರೆಗೆ ಸಾಗಿಸೋ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ. ಮೃತÀ ವಿದ್ಯಾರ್ಥಿಗಳು ಬೇಲೂರಿನ ವಿದ್ಯಾ ವಿಕಾಸ ಕಾಲೇಜಿನ ಪಿ.ಯು. ಕಾಲೇಜು ವಿದ್ಯಾರ್ಥಿಗಳಾಗಿದ್ದು, ಇವರು ಬೇಲೂರು ಪಟ್ಟಣದ ನಿವಾಸಿಗಳು. ಇವರೆಲ್ಲ ಕಾಲೇಜು ಮುಗಿಸಿ ಕಾರಿನಲ್ಲಿ ಹಾಸನದತ್ತ ಹೊರಟಿದ್ದರು. ಈ ವೇಳೆ ಚಿಕ್ಕಮಗಳೂರಿನತ್ತ ಹೊರಟಿದ್ದ ಸಾರಿಗೆ ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಮೊಹಮ್ಮದ್ ಜಲಾನಿ, ಅಕ್ಮಲ್ ಖಾನ್, ಕೈಫ್ ಸೇರಿ ಐವರು ಸಾವನ್ನಪ್ಪಿದ್ದಾರೆ. ಇನ್ನು ಬಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ.
ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ
ವಿಜಯಪುರ, ಮಾ. ೨೨: ಜಿಲ್ಲೆಯಲ್ಲಿ ಮತ್ತೇ ಭೂಕಂಪನದ ಅನುಭವ ಉಂಟಾಗಿದೆ. ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ೧೦ ಕಿ.ಮೀ. ಆಳದಲ್ಲಿ ೩.೫ ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್ಎನ್ಡಿಎಂಸಿ)ದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಜಯಪುರ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಕಂಪನವಾಗಿದೆ. ಬೆಳಿಗ್ಗೆ ೧೧.೨೨ಕ್ಕೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರು ಆತಂಕಗೊAಡಿದ್ದಾರೆ. ಭೂಕಂಪನದಿAದ ಯಾವುದೇ ಹಾನಿಗಳು ವರದಿಯಾಗಿಲ್ಲ. ಭೂಕಂಪದ ಬಗ್ಗೆ ಜಿಲ್ಲಾಡಳಿತ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ. ವಿಜಯಪುರದಲ್ಲಿ ಪದೇಪದೇ ಭೂಮಿ ಕಂಪಿಸುತ್ತಿರುವುದರಿAದ ಜನರಲ್ಲಿ ಆತಂಕವೂ ಹೆಚ್ಚಾಗಿದೆ. ಕೆಲ ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾದರೆ, ಕೆಲ ಬಾರಿ ಮಾಪನದಲ್ಲಿ ದಾಖಲಾಗಿಲ್ಲ. ಇಲ್ಲಿಯವರೆಗೂ ಹಲವಾರು ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸಿದೆ.
ಪುನೀತ್ಗೆ ಮರಣೋತ್ತರ ಗೌರವ ಡಾಕ್ಟರೇಟ್
ಮೈಸೂರು, ಮಾ. ೨೨: ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ನೀಡಿ ಮೈಸೂರು ವಿಶ್ವವಿದ್ಯಾನಿಲಯ ಇಂದು ಗೌರವಿಸಿತು. ಕ್ರಾಫರ್ಡ್ ಹಾಲ್ನಲ್ಲಿ ನಡೆದ ೧೦೨ನೇ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮೂವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಪುನೀತ್ ರಾಜ್ ಕುಮಾರ್ (ಮರಣೋತ್ತರ) ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ. ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.
ಮಕ್ಕಳ ಎದುರೆ ಪತ್ನಿಯ ಕತ್ತು ಕೊಯ್ದು ಹತ್ಯೆ
ಬೆಂಗಳೂರು, ಮಾ. ೨೨: ಮದ್ಯದ ಅಮಲಿನಲ್ಲಿದ್ದ ೩೬ ವರ್ಷದ ವ್ಯಕ್ತಿಯೋರ್ವ ಮಕ್ಕಳ ಎದುರೇ ಪತ್ನಿಯ ಕತ್ತು ಕೊಯ್ದು ಹತ್ಯೆಗೈದು, ನಂತರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಸೋಮವಾರ ಮುಂಜಾನೆ ಅತ್ತಿಬೆಲೆಯಲ್ಲಿ ನಡೆದಿದೆ. ಆರೋಪಿ ಸಂಪತ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಹತ್ಯೆಯಾದ ಮಹಿಳೆಯನ್ನು ಲಾವಣ್ಯ (೩೦) ಎಂದು ಗುರ್ತಿಸಲಾಗಿದೆ. ಸಂಪತ್ ಕುಮಾರ್ ಅಬ್ಬನಪಾಳ್ಯದ ನಿವಾಸಿಯಾಗಿದ್ದು, ಜಿಗಣಿಯಲ್ಲಿರುವ ಕಾರ್ಖಾನೆ ಯೊಂದರಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ. ಮದ್ಯದ ಅಮಲಿನಲ್ಲಿದ್ದ ಸಂಪತ್ ಕುಮಾರ್ ಬೆಳಗಿನ ಜಾವ ೫ ಗಂಟೆ ಸುಮಾರಿಗೆ ಪತ್ನಿಯೊಂದಿಗೆ ಜಗಳಕ್ಕಿಳಿದಿದ್ದಾನೆ. ಮಾತಿನ ಚಕಮಕಿ ವೇಳೆ ಅಡುಗೆ ಮನೆಯಲ್ಲಿದ್ದ ಚಾಕು ತಂದು ಪತ್ನಿಯ ಕುತ್ತಿಗೆ ಸೀಳಿಸಿದ್ದಾನೆ. ಬಳಿಕ ಅದೇ ಚೂರಿಯಿಂದ ತನ್ನ ಕತ್ತನ್ನೂ ಕೊಯ್ದು ಕೊಂಡಿದ್ದಾನೆ. ಘಟನೆ ವೇಳೆ ಲಾವಣ್ಯ ಅವರನ್ನು ರಕ್ಷಣೆ ಮಾಡಲು ಬಂದಿದ್ದ ಅವರ ಪುತ್ರನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ಬಳಿಕ ನೆರೆಮನೆ ಯವರು ಸ್ಥಳಕ್ಕೆ ಧಾವಿಸಿದ್ದು, ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ
ಬೆAಗಳೂರು, ಮಾ. ೨೨: ಹಿಜಾಬ್ ಸಂಬAಧ ಹೈಕೋರ್ಟ್ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಬಂದ್ಗೆ ಕರೆ ನೀಡಿದ್ದವು. ಹೀಗಾಗಿ ಕಾಪು ಮಾರಿ ಪೂಜೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ ಸಂಘಟನೆಗಳು ಒತ್ತಾಯ ಮಾಡಿವೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಮಾರಿಗುಡಿ ಹರಾಜಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಿಲ್ಲ. ಹಿಂದೂ ದೇಗುಲಗಳಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ವಿವಿಧ ದೇಗುಲಗಳ ಮುಂದೆ ಬೇಡಿಕೆ ಇಡಲಾಗಿದೆ. ಮಂಗಳೂರಿನ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮಧ್ಯೆ ಶಿವಮೊಗ್ಗದ ಮಾರಿಕಾಂಬ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿ ಹಾಕಲು ನಿರ್ಬಂಧಿಸಲಾಗಿದೆ. ಶಿವಮೊಗ್ಗದಲ್ಲಿ ಇಂದಿನಿAದ ೫ ದಿನಗಳ ಕಾಲ ಮಾರಿಕಾಂಬ ಜಾತ್ರೆ ನಡೆಯುತ್ತಿದ್ದು ಜಾತ್ರೆಯಲ್ಲಿ ಅಂಗಡಿ ಹಾಕಲು ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧಿಸಲಾಗಿದೆ ಎನ್ನಲಾಗಿದೆ.
 
						