ಗೋಣಿಕೊಪ್ಪಲು, ಮಾ.೨೧: ಕನ್ನಡ ಭಾಷೆಯ ಮೇಲೆ ತಾತ್ಸರ ಮನೋಭಾವ ಸಲ್ಲದು ಎಂದು ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಎಸ್.ಎನ್.ಪ್ರಶಾಂತ್ ತಿಳಿಸಿದರು. ಗೋಣಿಕೊಪ್ಪಲುವಿನ ಕಾಮತ್ ನವಮಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ಸಾಹಿತ್ಯ ಪರಿಷತ್ ಪೊನ್ನಂಪೇಟೆ ತಾಲೂಕು ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು ಕರ್ನಾಟಕದಲ್ಲಿ ಹಲವು ಭಾಷೆಗಳನ್ನು ಮಾತನಾಡುವವರಿದ್ದಾರೆ. ಕನ್ನಡ ಭಾಷೆಗೆ ಮೊದಲ ಆಧ್ಯತೆ ನೀಡುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಈ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ಹಲವು ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಕನ್ನಡದ ಉಳಿವಿಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ, ಕನ್ನಡ ಭಾಷೆ ಪುರಾತನ ಭಾಷೆ, ಈ ಭಾಷೆಗೆ ಪ್ರಾಶಸ್ತö್ಯ ಸಿಗಬೇಕು. ಮಹಾನಗರಗಳಲ್ಲಿ ಕನ್ನಡ ಭಾಷೆಯ ಅಸ್ತಿತ್ವಕ್ಕೆ ಧÀಕ್ಕೆ ಎದುರಾಗುವ ಲಕ್ಷಣಗಳು ಗೋಚರಿಸುತ್ತಿವೆ. ಕನ್ನಡಿಗರೆಲ್ಲರೂ ಸಂಕಲ್ಪ ಮಾಡುವ ಮೂಲಕ ನಮ್ಮ ಭಾಷೆಯನ್ನು ಉಳಿಸಿ ಬೆಳೆಸೋಣ ಎಂದರು.

ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧನೆ ಮಾಡಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಕನ್ನಡ ಸಾಹಿತ್ಯ ಪರಿಷತ್‌ಗೆ ೧೦೭ ವರ್ಷಗಳ ಇತಿಹಾಸವಿದೆ. ಕನ್ನಡಕ್ಕಾಗಿ ದುಡಿದ ದಿಗ್ಗಜರನ್ನು ಸದಾ ನೆನಪಿಸಿಕೊಳ್ಳುವ ಸಲುವಾಗಿ ಜಿಲ್ಲೆಯ ೫ ತಾಲೂಕುಗಳಲ್ಲಿ ಸಮಿತಿಗಳನ್ನು ರಚಿಸುವ ಮೂಲಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಇದರಿಂದ ಕನ್ನಡದ ಬೆಳವಣಿಗೆಗೆ ಅನುಕೂಲವಾಗಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೇವಲ ಅಧಿಕಾರಕ್ಕಾಗಿ ಮಾತ್ರ ಸೀಮಿತಗೊಳ್ಳದೆ ಜವಾಬ್ದಾರಿ ವಹಿಸಿಕೊಂಡ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಉತ್ತಮ ಕನ್ನಡಪರ ಕೆಲಸಗಳನ್ನು ಮಾಡಬೇಕು.

ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ಹತ್ತು ಸಾವಿರ ಸದಸ್ಯರನ್ನು ನೊಂದಾವಣೆ ಮಾಡುವಗುರಿ ಹೊಂದಲಾಗಿದೆ. ಪ್ರತಿ ತಾಲೂಕಿನಿಂದ ತಲಾ ಎರಡು ಸಾವಿರ ಸದಸ್ಯರನ್ನು ನೊಂದಾವಣೆ ಮಾಡಲು ಸಮಿತಿಯ ಸದಸ್ಯರು ಕಾರ್ಯಕ್ರಮ ರೂಪಿಸಬೇಕು, ಶಿಕ್ಷಕರನ್ನು ಹೆಚ್ಚಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು. ಇದರಿಂದ ಕನ್ನಡದ ಬೆಳವಣಿಗೆಗೆ ಸಹಕಾರ ಆಗಲಿದೆ ಎಂದು ಕರೆ ನೀಡಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ.ಕೇಶವ್‌ಕಾಮತ್ ಅಧ್ಯಕ್ಷತೆಯಲ್ಲಿ ನಡೆz Àಕಾರ್ಯಕ್ರಮದಲ್ಲಿ ಪೊನ್ನಂಪೇಟೆ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಸಾಲಿನ ಅಧ್ಯಕ್ಷರಾಗಿ ಕೋಳೇರ ದಯಾಚಂಗಪ್ಪನವರಿಗೆ ನಿಕಟ ಪೂರ್ವ ಅಧ್ಯಕ್ಷರಾದ ಡಾ.ಕೆ.ಎಸ್. ಚಂದ್ರಶೇಖರ್‌ರವರು ಕನ್ನಡ ಧ್ವಜವನ್ನು ಹಸ್ತಾಂತರ ಮಾಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಹಿರಿಯ ವೈದ್ಯ ಡಾ.ಕೆ.ಕೆ.ಶಿವಪ್ಪ, ಗಡಿಭಾಗದ ಭಾಷಿಕರಿಂದ ಕನ್ನಡದ ಮೇಲೆ ನಿರಂತರ ಒತ್ತಡಗಳು ನಡೆಯುತ್ತಲೇ ಬಂದಿವೆ ನಮ್ಮ ಭಾಷೆಯ ಮೇಲೆ ವಿಶೇಷ ಪ್ರೇಮ ಆತ್ಮಾಭಿಮಾನ ವಿರಬೇಕು. ಬೇರೆ ಭಾಷೆಯ ಜನರಿಗೆ ನಮ್ಮ ಕನ್ನಡ ಭಾಷೆಯನ್ನು ಕಲಿಸುವತ್ತ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದರು.

ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರಚೇತನ್, ಕೊಡಗು ಜಿಲ್ಲಾ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ. ಮುನೀರ್‌ಅಹಮ್ಮದ್, ಗೌರವ ಕಾರ್ಯದರ್ಶಿಗಳಾದ ಪಿ.ರೇವತಿ ರಮೇಶ್, ಗೌರವ ಕೋಶಾಧಿಕಾರಿಗಳಾದ ಮುಂಡುವAಡ ಬಿ.ಜೋಯಪ್ಪ, ಮಡಿಕೇರಿ ತಾಲೂಕು ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಅಂಬೇಕಲ್ ನವೀನ್, ಸೋಮವಾರಪೇಟೆ ತಾಲೂಕು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್.ಡಿ.ವಿಜೇತ್, ಕುಶಾಲನಗರ ತಾಲೂಕು ಅಧ್ಯಕ್ಷÀ ಕೆ.ಎಸ್.ಮೂರ್ತಿ, ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ರಾಜೇಶ್ ಪದ್ಮನಾಭ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಶೀಲಾ ಬೋಪಣ್ಣ ಕಾರ್ಯಕ್ರಮ ನಿರೂಪಿಸಿದರು. ಬಿ.ಎನ್.ಪ್ರಕಾಶ್ ಸ್ವಾಗತಿಸಿದರು. ಎಸ್.ಟಿ.ಗಿರೀಶ್ ನಾಡಗೀತೆ,ಕನ್ನಡ ಗೀತೆಗಳನ್ನು ಪ್ರಸ್ತುತ ಪಡಿಸಿದರು. ತಾಲೂಕಿನ ವಿವಿಧ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿದ್ದರು.