ಕಡಂಗ, ಮಾ. ೨೩: ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ರಕ್ತದ ಅವಶ್ಯಕತೆ ಇದ್ದ ಹಿನ್ನೆಲೆ ಬ್ಲಡ್ ಫೌಂಡೇಶನ್ ಕರ್ನಾಟಕ ಸಂಸ್ಥೆಯ ಕರೆಗೆ ತಕ್ಷಣ ಸ್ಪಂದಿಸಿದ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ರಾಮಪ್ಪ ಅವರು ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.