ಮಡಿಕೇರಿ, ಮಾ. ೨೩: ಅಪ್ಪಂಗಳದಲ್ಲಿನ ಐ.ಸಿ.ಎ.ಆರ್-ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ಪ್ರಾದೇಶಿಕ ಕೇಂದ್ರದಲ್ಲಿ ಕೋಜಿಕೋಡಿನ ಅಡಿಕೆ ಮತ್ತು ಸಂಬಾರ ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ ಪ್ರಾಯೋಜಿತÀ “ಸಂಬಾರ ಬೆಳೆಗಳ ಸುಧಾರಿತ ಉತ್ಪಾದನಾ ತಂತ್ರÀಜ್ಞಾನಗಳ (ಕಾಳುಮೆಣಸು, ಏಲಕ್ಕಿ ಮತ್ತು ಶುಂಠಿ)” ಬಗ್ಗೆ ಒಂದು ದಿನದ ರೈತರ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಚೆಟ್ಟಳ್ಳಿಯ ಸಿ.ಸಿ.ಆರ್.ಐ. ಉಪಕೇಂದ್ರದ ಜಂಟಿ ನಿರ್ದೇಶಕ (ಸಂಶೋಧನೆ) ಡಾ. ಜೆ.ಎಸ್. ನಾಗರಾಜ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೊಡಗಿನಲ್ಲಿ ಕಾಫಿ ಮತ್ತು ಕಾಳುಮೆಣಸಿನ ಮಿಶ್ರ ಬೆಳೆಯ ಪ್ರಾಮುಖ್ಯತೆಯ ಬಗ್ಗೆ ತಿಳಿಸಿದರು.
ಪ್ರಗತಿಪರ ರೈತರಾದ ಹಟ್ಟಿಹೊಳೆ ನಿವಾಸಿ ಅನಿತಾ ನಂದ ಅವರು, ಕಾಳುಮೆಣಸಿನÀ ಕೃಷಿಯಲ್ಲಿ ತಮ್ಮ ಅನುಭವ ಹಂಚಿಕೊAಡರು. ಸಂಬಾರ ಮಂಡಳಿಯ ಸಹಾಯಕ ನಿರ್ದೇಶಕ ಎಸ್.ಎಸ್. ಬಿಜು, ಅವರು ಸಂಬಾರ ಮಂಡಳಿಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಅಪ್ಪಂಗಳ ಐ.ಸಿ.ಎ.ಆರ್-ಐ.ಐ.ಎಸ್.ಆರ್ನ ಮುಖ್ಯಸ್ಥ ಡಾ. ಎಸ್.ಜೆ. ಅಂಕೇಗೌಡ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅಧ್ಯಕ್ಷೀಯ ಭಾಷಣ ಮಾಡಿದರು. ಈ ಸಂದರ್ಭ ತರಬೇತಿ ಕಾರ್ಯಾಗಾರದ ಉಪನ್ಯಾಸಗಳ ಇ-ಕೈಪಿಡಿ ಹಾಗೂ ವಿಸ್ತರಣಾ ಫೋಲ್ಡರ್ ಅನ್ನು ಬಿಡುಗಡೆ ಮಾಡಲಾಯಿತು.
ತರಬೇತಿ ಕಾರ್ಯಕ್ರಮದಲ್ಲಿ ಕಾಳುಮೆಣಸು, ಏಲಕ್ಕಿ ಮತ್ತು ಶುಂಠಿಯ ಆಧುನಿಕ ಉತ್ಪಾದನೆ ಮತ್ತು ತಂತ್ರÀಜ್ಞಾನಗಳ ಬಗ್ಗೆ ಒತ್ತು ನೀಡಲಾಯಿತು. ಸಂಬಾರ ಬೆಳೆಗಳ ಇಳುವರಿ ಮತ್ತು ಗುಣಮಟ್ಟವನ್ನು ವೃದ್ಧಿಸಲು ಸುಧಾರಿತ ತಳಿಗಳ ಪಾತ್ರ, ಗುಣಮಟ್ಟದ ಸಸ್ಯಾಭಿವೃದ್ಧಿಯ ವಿಧಾನ, ಸಂಬಾರ ಬೆಳೆಗಳ ಉತ್ಪಾದನೆಯಲ್ಲಿ ಕೃಷಿಕತೆ ಮತ್ತು ಶಾರೀರಿಕ ತಂತ್ರಜ್ಞಾನಗಳು, ಸಂಬಾರ ಬೆಳೆಗಳ ಕೃಷಿಯಲ್ಲಿ ಜೈವಿಕ ಒತ್ತಡಗಳು ಮತ್ತು ಅವುಗಳ ನಿರ್ವಹಣೆ ಬಗ್ಗೆ ಐ.ಸಿ.ಎ.ಆರ್-ಐ.ಐ.ಎಸ್.ಆರ್. ಅಪ್ಪಂಗಳದÀ ಪ್ರಾದೇಶಿಕ ಕೇಂದ್ರದ ವಿಜ್ಞಾನಿಗಳಿಂದ ಮಾಹಿತಿ ನೀಡಲಾಯಿತು. ಈ ತರಬೇತಿ ಕಾರ್ಯಕ್ರಮದಲ್ಲಿ ಐ.ಸಿ.ಎ.ಆರ್-ಐ.ಐ.ಎಸ್.ಆರ್. ಅಭಿವೃದ್ಧಿಪಡಿಸಿದ ತಂತ್ರÀಜ್ಞಾನಗಳ ಪ್ರದರ್ಶನ ಮಳಿಗೆಯನ್ನು ಆಯೋಜಿಸಲಾಗಿತ್ತು. ರಾಜ್ಯದ ವಿವಿಧ ಭಾಗಗಳಿಂದ ೧೩೦ಕ್ಕೂ ಹೆಚ್ಚು ರೈತರು ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
 
						