ಪೊನ್ನಂಪೇಟೆ, ಮಾ. ೨೩: ವಿದ್ಯಾರ್ಥಿಗಳು ಗಮನವಿಟ್ಟು ಅಧ್ಯಯನ ಮಾಡಿದರೆ ಉತ್ತಮ ಸಾಧನೆ ಮಾಡಬಹುದು ಎಂದು ಸಾಹಿತಿ ಡಾ. ಜೆ. ಸೋಮಣ್ಣ ಹೇಳಿದರು.

ಪೊನ್ನಂಪೇಟೆ ಅಪ್ಪಚ್ಚಕವಿ ವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ೧೦ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸಾಂಸ್ಕೃತಿಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದಿಸೆಯಲ್ಲಿ ಸಮಯ ಎನ್ನುವಂತಹದ್ದು ಬಹಳ ಮುಖ್ಯವಾಗಿದೆ. ಜೀವನದಲ್ಲಿ ನಾವು ಏನನ್ನೂ ಬೇಕಾದರೂ ಗಳಿಸಬಹುದು. ಆದರೆ ಕಳೆದುಕೊಂಡ ಸಮಯವನ್ನು ಮತ್ತೆ ಗಳಿಸಲಾಗದು. ಸಮಯದ ಮಹತ್ವ ಅರಿತುಕೊಂಡು ಎಚ್ಚರಿಕೆಯಿಂದ ಅಧ್ಯಯನ ಮಾಡಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಎಂ. ದಿನೇಶ್ ಚಿಟ್ಟಿಯಪ್ಪ ಮಾತನಾಡಿ, ೧೦ನೇ ತರಗತಿ ಅವಧಿ ವಿದ್ಯಾರ್ಥಿಗಳಿಗೆ ಸವಾಲಿನ ದ್ದಾಗಿರುತ್ತದೆ. ಈ ಸಮಯದಲ್ಲಿ ಓದಿನತ್ತ ಹೆಚ್ಚು ಗಮನಹರಿಸಿದರೆ ಉತ್ತಮ ಫಲ ದೊರಕಲಿದೆ ಎಂದು ನುಡಿದರು.

ಶಾಲಾ ಆಡಳಿತ ಮಂಡಳಿ ಸದಸ್ಯರಾದ ಕಾಳಿಮಾಡ ಮೋಟಯ್ಯ ಮಾತನಾಡಿ, ಓದಿನ ಸಮಯದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಸಂಪರ್ಕದಿAದ ದೂರವಿರಬೇಕು. ಕಷ್ಟ ಎನಿಸುವ ವಿಷಯಗಳನ್ನು ಬೆಳಗಿನ ಹೊತ್ತು ಅಧ್ಯಯನ ಮಾಡಬೇಕು ಎಂದು ಹೇಳಿದರು. ಆಡಳಿತ ಮಂಡಳಿ ಕಾರ್ಯದರ್ಶಿ ಅರಸು ನಂಜಪ್ಪ, ಮುಖ್ಯ ಶಿಕ್ಷಕಿ ಮಲ್ಚೀರ ನೀತಾ ಸೇರಿದಂತೆ ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.