ಮಡಿಕೇರಿ, ಮಾ. ೨೩: ತಾ. ೨೮ ರಿಂದ ಏಪ್ರಿಲ್ ೧೧ ರವರೆಗೆ ನಡೆಯುವ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ಪೂರ್ವ ಸಿದ್ಧತೆ ಸಂಬAಧಿಸಿದAತೆ ನಡೆದ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ಅಗತ್ಯ ಮುನ್ನೆಚ್ಚರ ವಹಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯು ಕಾಲ ಕಾಲಕ್ಕೆ ಹೊರಡಿಸುವ ಆದೇಶಗಳನ್ನು ಚಾಚೂತಪ್ಪದೇ ಪಾಲಿಸಬೇಕು. ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ. ಅಯ್ಯಪ್ಪ ಮಾತನಾಡಿ, ಪರೀಕ್ಷಾ ಸಂದರ್ಭದಲ್ಲಿ ಪರೀಕ್ಷೆ ಕೇಂದ್ರ ಮತ್ತು ಇತರ ಸಂದರ್ಭದಲ್ಲಿ ಪೊಲೀಸರ ನಿಯೋಜನೆ ಸಂಬAಧಿಸಿದAತೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಮನವಿ ಪತ್ರ ಸಲ್ಲಿಸುವಂತೆ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ವೇದಮೂರ್ತಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ೩೭ ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ. ಈ ಸಂಬAಧ ಎಲ್ಲಾ ಹಂತದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದರು.
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು ೬,೭೨೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ ೩,೩೦೬ ಬಾಲಕರು ಹಾಗೂ ೩,೪೧೬ ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಮಡಿಕೇರಿ ತಾಲೂಕಿನಲ್ಲಿ ೧೯೩೯ ವಿದ್ಯಾರ್ಥಿಗಳು (೯೫೦ ಬಾಲಕರು, ೯೮೯ ಬಾಲಕಿಯರು), ಸೋಮವಾರಪೇಟೆ ತಾಲೂಕಿನಲ್ಲಿ ೨,೭೦೮ ವಿದ್ಯಾರ್ಥಿಗಳು (೧೩೪೭ ಬಾಲಕರು, ೧೩೬೧ ಬಾಲಕಿಯರು), ಹಾಗೆಯೇ ವೀರಾಜಪೇಟೆ ತಾಲೂಕಿನಲ್ಲಿ ೨೦೭೫ ವಿದ್ಯಾರ್ಥಿಗಳು (೧೦೦೯ ಬಾಲಕರು, ೧೦೬೬ ಬಾಲಕಿಯರು) ಪರೀಕ್ಷೆ ಬರೆಯಲಿದ್ದಾರೆ ಎಂದು ವೇದಮೂರ್ತಿ ಅವರು ಮಾಹಿತಿ ನೀಡಿದರು.
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ಸಂಬAಧ ವೀಕ್ಷಕರು ಹಾಗೂ ಚಾಮರಾಜನಗರ ಡಯಟ್ ಪ್ರಾಂಶುಪಾಲ ಹೆಚ್.ಕೆ. ಪಾಂಡು, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಂಜುನಾಥ್, ಕೆ.ವಿ. ಸುರೇಶ್, ಶ್ರೀಶೈಲ ಬೀಳಗಿ, ಜಿಲ್ಲಾ ನೋಡಲ್ ಅಧಿಕಾರಿ ಕೃಷ್ಣಪ್ಪ, ಜಿಲ್ಲಾ ಖಜಾನಾಧಿಕಾರಿ ಪದ್ಮಜಾ, ಪೌರಾಯುಕ್ತ ರಾಮದಾಸ್, ಸಿಪಿಐ ಮೇದಪ್ಪ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ, ಪರೀಕ್ಷೆ ಕೇಂದ್ರಗಳಿಗೆ ನಿಯೋಜಿಸಿರುವ ಮುಖ್ಯ ಪರೀಕ್ಷೆ ಅಧೀಕ್ಷಕರು, ಅಭಿಯೋಜಕರು, ಮಾರ್ಗ ಅಧಿಕಾರಿಗಳು, ತಾಲೂಕು ನೋಡಲ್ ಅಧಿಕಾರಿಗಳು ಇತರರು ಪಾಲ್ಗೊಂಡಿದ್ದರು.
 
						