ಕುಶಾಲನಗರ, ಮಾ. ೨೩: ಪಟ್ಟಣ ಪಂಚಾಯಿತಿ ಈ ಸಾಲಿನ ಬಜೆಟ್‌ನಲ್ಲಿ ಕಾವೇರಿ ನದಿ ಸಂರಕ್ಷಣೆಗಾಗಿ ವಿಶೇಷ ಅನುದಾನ ಮೀಸಲಿರಿಸುವ ಬಗ್ಗೆ ಅಧ್ಯಕ್ಷರ ಜೊತೆ ಚರ್ಚಿಸಲಾಗುವುದು ಎಂದು ಪಟ್ಟಣ ಪಂಚಾಯಿತಿ ಸದಸ್ಯರಾದ ವಿ.ಎಸ್. ಆನಂದಕುಮಾರ್ ತಿಳಿಸಿದ್ದಾರೆ. ಕುಶಾಲನಗರದ ಅಯ್ಯಪ್ಪ ಸ್ವಾಮಿ ದೇವಾಲಯದ ಬಳಿ ಕಾವೇರಿ ಮಹಾ ಆರತಿ ಬಳಗದ ವತಿಯಿಂದ ಹುಣ್ಣಿಮೆ ಅಂಗವಾಗಿ ನಡೆದ ೧೨೯ನೇ ತಿಂಗಳ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಮೂರ್ತಿ, ನಾಡಿನ ಭಾಷೆಯ ಜೊತೆಗೆ ನದಿ ಮತ್ತು ಜಲಮೂಲಗಳ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.

ಅರ್ಚಕರಾದ ಕೃಷ್ಣಮೂರ್ತಿ ಭಟ್ ಅರ್ಚನೆ ಅಷ್ಟೋತ್ತರ ನಂತರ ನದಿಗೆ ಆರತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ರಾಜ್ಯ ಸಂಚಾಲಕರಾದ ಎಂ.ಎನ್. ಚಂದ್ರಮೋಹನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧಿಕಾರಿ ಮಂಡುವAಡ ಜೋಯಪ್ಪ, ಕುಶಾಲನಗರ ತಾಲೂಕು ಪ್ರಧಾನ ಕಾರ್ಯದರ್ಶಿ ನಾಗರಾಜ್, ಉಮೇಶ್, ಎಂ.ಎಸ್. ಮಹೇಂದ್ರ ಜಿಲ್ಲಾ ಪರಿಸರ ಸಂರಕ್ಷಣಾ ಬಳಗದ ಸಂಚಾಲಕರಾದ ಟಿ.ಜಿ. ಪ್ರೇಮ್‌ಕುಮಾರ್, ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ಮಹಿಳಾ ಭಜನಾ ಮಂಡಳಿಯ ಪದ್ಮಾ ಪುರುಷೋತ್ತಮ್, ರಮಾ ವಿಜಯೇಂದ್ರ, ಕಾವೇರಿ ರಿವರ್ ಸೇವಾ ಟ್ರಸ್ಟ್ ಪ್ರಮುಖರಾದ ಮಂಡೇಪAಡ ಬೋಸ್ ಮೊಣ್ಣಪ್ಪ, ಡಿ.ಆರ್. ಸೋಮಶೇಖರ್, ಶಿವಾನಂದನ್, ಅಣ್ಣಯ್ಯ, ನರೇಂದ್ರ ಮತ್ತಿತರರಿದ್ದರು.