ಸೋಮವಾರಪೇಟೆ, ಮಾ. ೨೪: ಮಹಿಳೆಯೋರ್ವರು ತನ್ನ ಮನೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಜನತಾಕಾಲೋನಿಯಲ್ಲಿ ನಡೆದಿದೆ.
ಜನತಾ ಕಾಲೋನಿ ನಿವಾಸಿ ದಿ. ಭಗವಾನ್ ಅವರ ಪತ್ನಿ ನಾಗು(೬೦) ಎಂಬವರೇ ಆತ್ಮಹತ್ಯೆಗೆ ಶರಣಾದವರಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ನಿನ್ನೆ ದಿನ ಮನೆ ಮಂದಿ ಕೆಲಸಕ್ಕೆ ಹೋಗಿದ್ದ ಸಂದರ್ಭ ಮನೆಯ ಕೋಣೆಯೊಳಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು ಈರ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.