ಗೋಣಿಕೊಪ್ಪಲು, ಮಾ. ೨೪: ಬ್ರಿಟಿಷರ ವಿರುದ್ಧ ಹೋರಾಟದಲ್ಲಿ ನೇಣಿಗೆ ಕೊರಳೊಡ್ಡಿದ ಸ್ವಾತಂತ್ರö್ಯ ಹೋರಾಟಗಾರರಾದ ಭಗತ್‌ಸಿಂಗ್, ರಾಜ್‌ಗುರು ಹಾಗೂ ಸುಖ್‌ದೇವ್ ಅವರ ಸ್ಮರಣೆ ಅಂಗವಾಗಿ ಬಿಜೆಪಿ ತಾಲೂಕು ಯುವ ಮೋರ್ಚಾದ ಅಧ್ಯಕ್ಷ ಸೋಮೆಯಂಡ ಕವನ್ ಕಾರ್ಯಪ್ಪ ಮುಂದಾಳತ್ವದಲ್ಲಿ ಪಂಜಿನ ಮೆರವಣಿಗೆ ನಡೆಯಿತು.
ಹರಿಶ್ಚಂದ್ರಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಬಿಜೆಪಿ ವೀರಾಜಪೇಟೆ ಮಂಡಲ ಅಧ್ಯಕ್ಷ ನೆಲ್ಲೀರ ಚಲನ್ ಕುಮಾರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಚಲನ್ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದವರಲ್ಲಿ ಭಗತ್‌ಸಿಂಗ್, ರಾಜ್‌ಗುರು ಹಾಗೂ ಸುಖ್‌ದೇವ್ ಮುಂಚೂಣಿಯಲ್ಲಿದ್ದಾರೆ. ಇವರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಆದ್ದರಿಂದ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದರು.
ನೂರಾರು ಸಂಖ್ಯೆಯಲ್ಲಿದ್ದ ಯುವಕರು ಪಂಜನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿ ನಂತರ ನಗರದ ಮುಖ್ಯರಸ್ತೆಯ ಮೂಲಕ ಬಸ್ ನಿಲ್ದಾಣದಲ್ಲಿ ಸಮಾಗಮಗೊಂಡರು. ರಸ್ತೆಯ ಉದ್ದಕ್ಕೂ ಭಾರತ್ ಮಾತಾ ಕೀ ಜೈ ಘೋಷಣೆಗಳನ್ನು ಕೂಗಿದರು. ಮಹಿಳೆಯರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಪಕ್ಷದ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ, ಘೋಷಣೆಗಳನ್ನು ಕೂಗಿದರು.
ಸಭೆಯನ್ನು ಉದ್ದೇಶಿಸಿ ಸಂಘ ಪರಿವಾರದ ಪ್ರಮುಖರಾದ ಟಿ.ಸಿ. ಚಂದ್ರನ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಗುಮ್ಮಟ್ಟೀರ ಕಿಲನ್ ಗಣಪತಿ, ಮಾಜಿ ಜಿ.ಪಂ. ಸದಸ್ಯ ಸಿ.ಕೆ. ಬೋಪಣ್ಣ, ಗೋಣಿಕೊಪ್ಪ ಶಕ್ತಿ ಕೇಂದ್ರದ ಪ್ರಮುಖ್ ಸುರೇಶ್‌ರೈ, ಮಹಾಶಕ್ತಿ ಕೇಂದ್ರದ ಪ್ರಮುಖ್ ಕುಲ್ಲಚಂಡ ಚಿಣ್ಣಪ್ಪ, ಬಿಜೆಪಿ ಒಬಿಸಿ ಅಧ್ಯಕ್ಷ ಕೆ. ರಾಜೇಶ್ ಬಿಜೆಪಿ ಮಹಿಳಾ ಮೋರ್ಚಾದ ಯಮುನಾ ಚಂಗಪ್ಪ, ಪಕ್ಷದ ಪ್ರಮುಖರಾದ ಹಕೀಮ್, ಗೀತಾ, ಜ್ಯೋತಿ, ನವೀನ್, ಚೈತ್ರ, ಆದೇಂಗಡ ವಿನು ಚಂಗಪ್ಪ, ಸುಬ್ರಮಣಿ, ಶ್ರೀನಿ, ಕುಪ್ಪಂಡಗಿರಿ ಪೂವಣ್ಣ, ಮುಕ್ಕಾಟೀರ ಬೋಪಣ್ಣ ಸೇರಿದಂತೆ ತಾಲೂಕಿನ ವಿವಿಧ ಭಾಗದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಿಜೆಪಿ ಯುವ ಮೋರ್ಚಾದ ತಾಲೂಕು ಅಧ್ಯಕ್ಷ ಕವನ್ ಕಾರ್ಯಪ್ಪ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಬಿ.ಸಿ. ಭರತ್ ವಂದಿಸಿದರು.