ಮಡಿಕೇರಿ, ಮಾ. ೨೩: ಮಡಿಕೇರಿ ತಾಲೂಕಿನ ವಿವಧ ಕಡೆಗಳಲ್ಲಿ ನಿರ್ಮಾಣವಾಗಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ರಸ್ತೆ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆಯನ್ನು ಸಂಸದ ಪ್ರತಾಪ್ ಸಿಂಹ, ಹಾಗೂ ಶಾಸಕ ಕೆ.ಜಿ. ಬೋಪಯ್ಯ ಅವರುಗಳು ಜನಪ್ರತಿನಿಧಿಗಳೊಂದಿಗೆ ಸೇರಿ ನೆರವೇರಿಸಿದರು. ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಪ್ಪಂಗಳದಲ್ಲಿ ನಿರ್ಮಿಸಲಾಗಿರುವ ಸಮುದಾಯ ಭವನ, ಬೆಟ್ಟಗೇರಿ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅಂಗನವಾಡಿ, ಗ್ರಂಥಾಲಯ ಹಾಗೂ ಶಾಲಾ ಕೊಠಡಿಗಳನ್ನು ಉದ್ಘಾಟನೆ ಮಾಡಲಾಯಿತು. ಬೆಟ್ಟತ್ತೂರು ಹಾಗೂ ರ‍್ವತೊಕ್ಕಲು ಸಂಪರ್ಕ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ದಾನಿಗೆ ಸನ್ಮಾನ
ಇದೇ ಸಂದರ್ಭದಲ್ಲಿ ಅಪ್ಪಂಗಳದಲ್ಲಿ ಸಮುದಾಯ ಭವನ ನಿರ್ಮಿಸಲು ಜಾಗ ದಾನ ನೀಡಿದ ದಿ. ಕಲ್ಲೆಂಬಿ ಸಿ. ಸೋಮಯ್ಯ ಅವರ ಪತ್ನಿ ಕಾವೇರಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಪಶ್ಚಿಮಘಟ್ಟ ಸಂರಕ್ಷಣೆ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾ¯ಪ್ಪ, ಮೂಡ ಅಧ್ಯಕ್ಷ ರಮೇಶ್ ಹೊಳ್ಳ, ಬೆಟ್ಟಗೇರಿ ಗ್ರಾ.ಪಂ. ಅಧ್ಯಕ್ಷ ನಾಪಂಡ ರ‍್ಯಾಲಿ ಮಾದಯ್ಯ, ಉಪಾಧ್ಯಕ್ಷ ಬಿ.ಕೃಷ್ಣಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಕಾಂಗಿರ ಅಶ್ವಿನ್, ಜಿ.ಪಂ. ಮಾಜಿ ಉಪಾಧ್ಯಕ್ಷೆ ಅಲ್ಲಾರಂಡ ಬೀನಾ ಬೊಳ್ಳಮ್ಮ, ತಾ.ಪಂ. ಮಾಜಿ ಸದಸ್ಯೆ ತುಂತಜ್ಜಿ ಕುಮುದ ರಶ್ಮಿ, ಪ್ರಮುಖರಾದ ತಳೂರು ಕಿಶೋರ್ ಕುಮಾರ್, ಬೆಪ್ಪುರನ ಮೇದಪ್ಪ, ಕೋಡಿ ಮೋಟಯ್ಯ, ತಳೂರು ದಿನೇಶ್, ಕಡ್ಯದ ಜಯ, ಶಾಸಕರ ಆಪ್ತ ಕಾರ್ಯದರ್ಶಿ ಮಲ್ಲಂಡ ಮಧು ದೇವಯ್ಯ, ಅಧಿಕಾರಿಗಳು, ಗುತ್ತಿಗೆದಾರರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
 
						