ಮಡಿಕೇರಿ, ಮಾ ೨೪: ಯುನೈಟೆಡ್ ಕೊಡವ ಆರ್ಗನೈಸೇಷನ್ (ಯುಕೊ) ಸಂಘಟನೆಯ ನಿಯೋಗವೊಂದು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೊಡವ ಅಭಿವೃದ್ಧಿ ನಿಗಮ ರಚನೆ ಕುರಿತಾಗಿ ಚರ್ಚಿಸಿ ಮನವಿ ಸಲ್ಲಿಸಿತು. ಶಾಸಕರುಗಳಾದ ಕೆೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ಅವರುಗಳ ನೇತೃತ್ವದಲ್ಲಿ ಯುಕೊ ಸಂಚಾಲಕ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಮತ್ತಿತರರು ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿ ಗಳೊಂದಿಗೆ ಸಮಾಲೋಚನೆ ನಡೆಸಿದರು.

ಘೋಷಿತ ಅನುದಾನವನ್ನು ಕೊಡವ ಅಭಿವೃದ್ಧಿ ನಿಗಮದ ಮೂಲಕವೇ ಹಂಚಲು ಅನುವು ಮಾಡಿಕೊಡುವಂತೆ ಮನವಿ ಮಾಡಲಾಯಿತು.

ಕೊಡವರು ಭೌಗೋಳಿಕ ವಾಗಿಯೂ ಜನಸಂಖ್ಯೆಯಲ್ಲಿಯೂ, ಸಂಸ್ಕೃತಿ ಮತ್ತು ಪರಂಪರೆಯ ನಿಟ್ಟಿನಲ್ಲಿಯೂ ವಿಭಿನ್ನವಾಗಿ ಗುರುತಿಸಿ ಕೊಂಡಿರುವಾಗ, ಬೇರೆ ಸಾಮಾನ್ಯ ಮಾನದಂಡಗಳ ತಳಹದಿಯಲ್ಲಿ ಕೊಡವ ಜನಾಂಗ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಆದ್ದರಿಂದ ಘೋಷಿತ ಅನುದಾನವನ್ನು ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಕ್ಕೆ ತರುವುದು ಅನಿವಾರ್ಯ ಹಾಗೂ ಕೇವಲ

(ಮೊದಲ ಪುಟದಿಂದ) ಒಂದು ವರ್ಷದ ಅನುದಾನದಿಂದ ಕೊಡವ ಜನಾಂಗದ ಸಮಗ್ರ ಅಭಿವೃದ್ಧಿ ಅಸಾಧ್ಯ, ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಮೂಲಕ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ಕೊಡವ ಅಭಿವೃದ್ಧಿಯ ಹೆಸರಿನಲ್ಲಿ ಸರ್ಕಾರದ ಹಣ ಪೋಲಾಗುವುದು ಬೇಡ ಎಂದು ಪ್ರಮುಖರು ಮನವರಿಕೆ ಮಾಡಿದರು.

ಇದುವರೆಗೆ ದೇವರಾಜ ಅರಸು ಅಭಿವೃದ್ಧಿ ನಿಗಮದಲ್ಲೇ ಇದ್ದ ಒಕ್ಕಲಿಗ, ಲಿಂಗಾಯತ, ಮರಾಠ ಸಮುದಾಯ ಗಳಿಗೆ ಪ್ರತ್ಯೇಕ ನಿಗಮ ಸ್ಥಾಪನೆ ಯಾಗಿರುವಾಗ ಒಕ್ಕಲಿಗರೊಂದಿಗೆ ೩ಎ ಅಡಿಯಲ್ಲಿಯೇ ಕೊಡವರೂ ಗುರುತಿಸಿಕೊಂಡಿರುವಾಗ ನಮ್ಮನ್ನೂ ಪರಿಗಣಿಸಬೇಕು ಎಂದರು. ಮನವಿ ಸ್ವೀಕರಿಸಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಬೇಡಿಕೆಯನ್ನು ಆದ್ಯತೆಯೊಂದಿಗೆ ಪರಿಗಣಿಸಿ ಪ್ರತ್ಯೇಕ ಕೊಡವರ ಅಭಿವೃದ್ಧಿಗಾಗಿಯೇ ೧೦ ಕೋಟಿ ರೂಪಾಯಿ ನೀಡಲಾಗಿದೆ. ಕೊಡವರ ಬಗ್ಗೆ ವಿಶೇಷ ಅಭಿಮಾನ ಮತ್ತು ಗೌರವ ಇದೆ. ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಂತೆ ಮತ್ತೊಮ್ಮೆ ಪರಿಶೀಲಿಸಿ ನಿರ್ಧಾರ ಕೈಗೊಳ್ಳುವುದಾಗಿ ಶಾಸಕರು ಹಾಗೂ ಉಸ್ತುವಾರಿ ಸಚಿವರ ಸಭೆ ಕರೆದು ಚರ್ಚಿಸುವುದಾಗಿ ಭರವಸೆ ನೀಡಿದರು.

ವಿಧಾನ ಸೌಧದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ನಿಯೋಗವು ಭೆÉÃಟಿ ಮಾಡಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಂತೆ ಬೆಂಬಲಿಸುವAತೆ ಕೋರ ಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಯಡಿಯೂರಪ್ಪ, ಮುಖ್ಯಮಂತ್ರಿಗಳೊAದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು.

ನಿಯೋಗದಲ್ಲಿ ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ನೆಲ್ಲಮಕ್ಕಡ ಮಾದಯ್ಯ, ಚೆಪ್ಪುಡಿರ ಸುಜು ಕರುಂಬಯ್ಯ, ಕಾಟಿಮಾಡ ಗಿರಿ ಅಯ್ಯಪ್ಪ, ಮಾದೇಟಿರ ತಿಮ್ಮಯ್ಯ, ನಂದೇಟಿರ ರವಿ ಸುಬ್ಬಯ್ಯ, ಅಪ್ಪಾರಂಡ ವೇಣು ಪೊನ್ನಪ್ಪ, ಅಮ್ಮತ್ತಿ ಕೊಡವ ಸಮಾಜ ಉಪಾಧ್ಯಕ್ಷ ಕಾವಡಿಚಂಡ ದೀಪಕ್ ಉತ್ತಯ್ಯ, ಕೊಡಗು ಜಿ.ಪಂ. ಮಾಜಿ ಉಪಾಧ್ಯಕ್ಷೆ ಅಲ್ಲಾರಂಡ ಬೀನಾ ಬೊಳ್ಳಮ್ಮ, ಕಾನೂರು ಗ್ರಾ.ಪಂ. ಮಾಜಿ ಸದಸ್ಯೆ ಸುಳ್ಳಿಮಾಡ ಶಿಲ್ಪಾ ಅಪ್ಪಣ್ಣ, ಪುದಿಯೊಕ್ಕಡ ದಿನೇಶ್, ಅಪ್ಪಚ್ಚೀರ ನಂದ, ಕಳ್ಳಿಚಂಡ ರತ್ನ ಪೂವಯ್ಯ, ಮಚ್ಚಾಮಾಡ ರಮೇಶ್, ತೀತಿಮಾಡ ಬೋಸ್ ಅಯ್ಯಪ್ಪ, ಚಿರಿಯಪಂಡ ವಿಶ್ವನಾಥ್, ಮದ್ರಿರ ಪ್ರಿನ್ಸ್ ಮಹೇಶ್, ಅವರೆಮಾದಂಡ ರಮೇಶ್ ಚಂಗಪ್ಪ, ನಂದೇಟಿರ ಕವಿತಾ ಸುಬ್ಬಯ್ಯ, ಪೂವಮ್ಮ ಸುಬ್ಬಯ್ಯ, ದೇಚಮ್ಮ ಸುಬ್ಬಯ್ಯ, ಕಳ್ಳಿಚಂಡ ದೀನಾ ಉತ್ತಪ್ಪ, ಬೊಳ್ಳಚೆಟ್ಟಿರ ಮೈನಾ ಪ್ರಕಾಶ್, ಮೇವಡ ಲತಾ ನಂಜುAಡ, ಕುಂಜಿಲAಡ ಗ್ರೇಸಿ ಪೂಣಚ್ಚ, ಪಾಂಡAಡ ಸ್ವಾತಿ ಗಣೇಶ್ ಪಾಲ್ಗೊಂಡಿದ್ದರು.