ಸೋಮವಾರಪೇಟೆ, ಮಾ. ೨೩: ಕಳೆದ ಎರಡು ವರ್ಷಗಳಿಂದ ತಾಲೂಕಿನ ಆಲೂರುಸಿದ್ಧಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಕಣಗಾಲು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದ್ದು, ಕೂಡಲೇ ಸಮಸ್ಯೆ ಪರಿಹರಿಸದಿದ್ದಲ್ಲಿ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಮೂಲಭೂತ ಅವಶ್ಯವಾಗಿರುವ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಈಗಾಗಲೇ ಹಲವು ಬಾರಿ ಪಂಚಾಯಿತಿಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಯೋಜನ ವಾಗಿಲ್ಲ ಎಂದು ಆರೋಪಿಸಿರುವ ಸ್ಥಳೀಯರು, ಸಮಸ್ಯೆ ಸರಿಪಡಿಸದಿದ್ದರೆ ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಪ್ರಾರಂಭವಾದಾಗಿನಿAದಲೂ ಗ್ರಾಮದ ದೇಶ್ಮುಖ್ ಎಂಬುವರ ಹೊಲದ ಕೊಳವೆ ಬಾವಿಯಿಂದ ನೀರನ್ನು ಪಡೆಯುತ್ತಿದ್ದು, ಇದೀಗ ಬೇಸಿಗೆ ಕಾಲವಾಗಿರುವುದರಿಂದ ಅವರಿಗೂ ನೀರಿನ ಸಮಸ್ಯೆ ಉದ್ಬವವಾಗಿದೆ. ಆದ್ದರಿಂದ ಈ ತಿಂಗಳ ಅಂತ್ಯದೊಳಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಹಿಂದೆ ಅನೇಕ ಬಾರಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದು, ಕೇವಲ ಭರವಸೆ ಮಾತ್ರ ಸಿಕ್ಕಿದೆ;ಆದರೆ ಈವರೆಗೆ ನೀರು ಸಿಕ್ಕಿಲ್ಲ. ಕೊಳವೆ ಬಾವಿ ಸರಿಪಡಿಸುತ್ತೇವೆಂದು ಹೇಳಿ ವರ್ಷಗಳೇ ಕಳೆದಿವೆ ಎಂದು ಗ್ರಾಮಸ್ಥರಾದ ರವಿನಂದನ್ ಆರೋಪಿಸಿದರು. ಈ ಸಂಬAಧಿತ ಮನವಿಯನ್ನು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹರೀಶ್ಗೆ ಸಲ್ಲಿಸಿರುವ ಗ್ರಾಮಸ್ಥರು, ಈ ತಿಂಗಳ ಒಳಗಾಗಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದರು. ಈ ಸಂದರ್ಭ ಜೋಯಪ್ಪ, ಕೆ.ಸಿ. ಸೂರ್ಯ, ರಮೇಶ್, ಚಂದ್ರಶೇಖರ, ಶಾರದ ಸೇರಿದಂತೆ ಇತರರು ಉಪಸ್ಥಿತರಿದ್ದರು.
 
						