ಸೋಮವಾರಪೇಟೆ, ಮಾ.೨೩: ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿರುವ ಕೆ.ವಿ. ಸುರೇಶ್ ಅವರನ್ನು ಇಲ್ಲಿನ ಸೃಷ್ಟಿಯ ಚಿಗುರು ಕವಿಬಳಗದ ವತಿಯಿಂದ ಸನ್ಮಾನಿಸಿ, ಸ್ವಾಗತಿಸಲಾಯಿತು.
ಅಂತೆಯೇ ಕೂಡಿಗೆ ಡಯಟ್ ಪ್ರಾಂಶುಪಾಲ ರಂಗನಾಥಸ್ವಾಮಿ ಅವರನ್ನು ಗೌರವಿಸಲಾಯಿತು. ಈ ಸಂದರ್ಭ ಬಿಇಓ ಕೆ.ವಿ.ಸುರೇಶ್ ಮಾತನಾಡಿ, ಕನ್ನಡ ನಾಡು, ನುಡಿ, ಸಾಹಿತ್ಯ, ಸಂಗೀತ ಕ್ಷೇತ್ರದ ಬೆಳವಣಿಗೆಗೆ ಸಂಘಟನೆಗಳು ಶ್ರಮಿಸಬೇಕು. ಗ್ರಾಮೀಣ ಮಟ್ಟದಲ್ಲಿ ಸಾಹಿತ್ಯ ಬೆಳವಣಿಗೆಗೆ ಪೂರಕವಾಗಿ ಸ್ಪಂದಿಸಬೇಕು ಎಂದರು.
ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸುವ ಕೆಲಸ ಆಗಬೇಕು. ಸಾಹಿತ್ಯ ಕ್ಷೇತ್ರದಲ್ಲಿ ಸೃಜನಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಅದನ್ನು ಉಳಿಸಿ ಬೆಳೆಸಬೇಕು ಎಂದು ಸಲಹೆ ನೀಡಿದರಲ್ಲದೆ, ಸೃಷ್ಟಿಯ ಚಿಗುರು ಕವಿಬಳಗದ ಸಾಹಿತ್ಯಪರ ಕಾರ್ಯಕ್ರಮಗಳಿಗೆ ಸಹಕಾರ ನೀಡುವುದಾಗಿ ತಿಳಿಸಿದರು.
ಶ್ರಮಿಸಬೇಕು. ಗ್ರಾಮೀಣ ಮಟ್ಟದಲ್ಲಿ ಸಾಹಿತ್ಯ ಬೆಳವಣಿಗೆಗೆ ಪೂರಕವಾಗಿ ಸ್ಪಂದಿಸಬೇಕು ಎಂದರು.