ಪೊನ್ನAಪೇಟೆ, ಮಾ. ೨೩: ಗೋಣಿಕೊಪ್ಪಲು ಕಾವೇರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಮಾರೋಪ ಸಮಾರಂಭವು ತಾ. ೨೬ ರಂದು ಕಾವೇರಿ ಕಾಲೇಜು ಆವರಣದಲ್ಲಿ ನಡೆಯಲಿದೆ. ಕಾವೇರಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಸಿ.ಕೆ. ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲಚೀರ ಎ. ಅಯ್ಯಪ್ಪ ಮತ್ತು ಕೃಷಿ ಅಧಿಕಾರಿ ರಾಮ್ ಕುಮಾರ್ ಭಾಗವಹಿಸಲಿದ್ದು, ಕಾವೇರಿ ಎಜುಕೇಶನ್ ಸೊಸೈಟಿ ಕಾರ್ಯದರ್ಶಿ ಕೆ.ಜಿ. ಉತ್ತಪ್ಪ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸಂದರ್ಭ ಗೋಣಿಕೊಪ್ಪಲು ಲೋಪಮುದ್ರ ಮೆಡಿಕಲ್ ಸೆಂಟರ್‌ನ ಮುಖ್ಯಸ್ಥ ಡಾ. ಎಂ.ಎA. ಅಮೃತ್ ನಾಣಯ್ಯ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಾಂಶುಪಾಲ ಎಸ್.ಎಸ್. ಮಾದಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.