ಮಡಿಕೇರಿ, ಮಾ. ೨೪: ಮಡಿಕೇರಿ ತಾಲೂಕು ಸವಿತಾ ಸಮಾಜದಿಂದ ಏಪ್ರಿಲ್ ೪, ೫ರಂದು ಜಿಲ್ಲಾ ಮಟ್ಟದ ಕ್ರೀಡೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ತಾಲೂಕು ಅಧ್ಯಕ್ಷ ಎಂ.ಟಿ. ಮಧು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಪಂದ್ಯಾಟ ಆಯೋಜಿಸಲಾಗಿದ್ದು, ಕ್ರೀಡೋತ್ಸವ ಉದ್ಘಾಟನೆ ಸಮಾರಂಭವೂ ಏಪ್ರಿಲ್ ೪ರಂದು ಮಡಿಕೇರಿ ತಾಲೂಕು ಸವಿತಾ ಸಮಾಜದ ಕ್ರೀಡಾ ಅಧ್ಯಕ್ಷ ಮಧು ಚೆಟ್ಟಿಮಾನಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ, ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷ ಕೆ.ಎಸ್. ದೊರೇಶ್, ಮಡಿಕೇರಿ ತಾಲೂಕು ಅಧ್ಯಕ್ಷ ಎಂ.ಟಿ. ಮಧು, ಮಹಿಳಾ ಘಟಕದ ಅಧ್ಯಕ್ಷೆ ಸುಂದರಮ್ಮ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ತಾಲೂಕು ಸವಿತಾ ಸಮಾಜದ ಕ್ರೀಡಾ ಸಮಿತಿ ಅಧ್ಯಕ್ಷ ಮಧು ಚೆಟ್ಟಿಮಾನಿ ಮಾತನಾಡಿ, ಲೀಗ್ ಮಾದರಿಯಲ್ಲಿ ಸೂಪರ್-೯ ಕ್ರಿಕೆಟ್ ಪಂದ್ಯಾವಳಿಯನ್ನು ನಡೆÀಸಲಾಗುತ್ತದೆ. ತಾ. ೨೮ ರೊಳಗೆ ತಂಡಗಳು ಹೆಸರು ನೋಂದಾಯಿಸಿಕೊಳ್ಳಬೇಕೆAದು ಹೇಳಿದರು.

ಕ್ರೀಡೋತ್ಸವದಲ್ಲಿ ಪಾಲ್ಗೊಂಡ ವರಿಗೆ ೫ ವರ್ಷದೊಳಗಿನ ಮಕ್ಕಳಿಗೆ ಕಾಳು ಹೆಕ್ಕುವುದು, ಒಂದು ಎರಡನೇ ತರಗತಿ ಮಕ್ಕಳಿಗೆ ಕಪ್ಪೆ ಜಿಗಿತ, ಮೂರು ಹಾಗೂ ನಾಲ್ಕನೇ ತರಗತಿ ಮಕ್ಕಳಿಗೆ ೫೦ ಮೀಟರ್ ಓಟ. ೫,೬,೭ನೇ ತರಗತಿ ಮಕ್ಕಳಿಗೆ ಮಕ್ಕಳಿಗೆ ೧೦೦ ಮೀಟರ್ ಓಟ, ೮ ರಿಂದ ೧೦ನೇ ತರಗತಿ ಮಕ್ಕಳಿಗೆ ೨೦೦ ಮೀಟರ್ ಓಟ, ೫೦ ವರ್ಷ ಮೇಲ್ಪಟ್ಟ ಪುರುಷ, ಮಹಿಳೆಯರಿಗೆ ಬಾಂಬ್ ಇನ್ ದಿ ಸಿಟಿ, ಹಗ್ಗಜಗ್ಗಾಟ, ಮಹಿಳೆಯರಿಗೆ ಸಂಗೀತ ಕುರ್ಚಿ ಹಾಗೂ ತಾ. ೨೯ರಂದು ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಆಯೋಜಿಸಿದ್ದು ಅಂದೇ ಬೆಳಿಗ್ಗೆ ನೋಂದಾಯಿಸಿಕೊಳ್ಳಬಹುದು ಎಂದು ಹೇಳಿದರು.

ಸಮಾಜದ ಜಿಲ್ಲಾ ಉಪಾಧ್ಯಕ್ಷ ಚರಣ್ ಮಾತನಾಡಿ, ಕ್ರೀಡಾಕೂಟವು ಕೊಡಗು ಜಿಲ್ಲೆಗೆ ಸೀಮಿತವಾಗಿದ್ದು, ಭಾಗವಹಿಸುವವರು ಆಧಾರ್ ಹಾಗೂ ಜಾತಿ ಸೂಚಕ ಪ್ರಮಾಣಪತ್ರವನ್ನು ತರಬೇಕು ಎಂದು ಹೇಳಿದರು.

ತಾಲೂಕು ಕಾರ್ಯದರ್ಶಿ ಅವಿನಾಶ್ ಬೊಟ್ಲಪ್ಪ ಮಾತನಾಡಿ, ಏಪ್ರಿಲ್ ೫ ರಂದು ಸಂಜೆ ಕ್ರೀಡಾ ಕೂಟದ ಸಮಾರೋಪ ಸಮಾರಂಭ ನಡೆಯುತ್ತಿದ್ದು, ಮುಖ್ಯ ಅತಿಥಿಗಳಾಗಿ ಶಾಸಕ ಕೆ.ಜಿ. ಬೋಪಯ್ಯ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಪ್ರೆಸ್‌ಕ್ಲಬ್ ಅಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಚಿತ್ತಾರ ವಾಹಿನಿ ನಿರ್ದೇಶಕಿ ಬಿ.ಆರ್. ಸವಿತಾ ರೈ, ಸವಿತಾ ಸಮಾಜದ ರಾಜ್ಯಾಧ್ಯಕ್ಷ ಸಂಪತ್ ಕುಮಾರ್, ರಾಜ್ಯ ಕಾರ್ಯಾಧ್ಯಕ್ಷ ಕಿರಣ್ ಕುಮಾರ್, ಜಿಲ್ಲಾಧ್ಯಕ್ಷ ಕೆ.ಎಸ್. ದೊರೇಶ್, ತಾಲೂಕು ಕ್ರೀಡಾ ಅಧ್ಯಕ್ಷ ಮಧು ಚೆಟ್ಟಿಮಾನಿ, ಮಡಿಕೇರಿ ತಾಲೂಕು ಸವಿತಾ ಸಮಾಜದ ಮಹಿಳಾಧ್ಯಕ್ಷೆ ಸುಂದರಮ್ಮ ಭಾಗವಹಿಸಲಿರುವುದಾಗಿ ತಿಳಿಸಿದರು.

ಸಮಾಜದ ಜಿಲ್ಲಾಧ್ಯಕ್ಷ ಕೆ.ಎಸ್. ದೊರೇಶ್ ಮಾತನಾಡಿ, ಸಂಘಟನೆಗೆ ಒತ್ತು ಕೊಟ್ಟು, ಎಲ್ಲರನ್ನು ಒಗ್ಗೂಡಿಸುವ ಸಲುವಾಗಿ ಕ್ರೀಡಾಕೂಟ ಆಯೋಜಿಸಲಾಗಿದೆ ಸಮಾಜದ ಪ್ರತಿಯೊಬ್ಬರೂ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.

ಮಹಿಳಾ ಅಧ್ಯಕ್ಷೆ ಸುಂದರಮ್ಮ ಮಾತನಾಡಿ, ಸಮಾಜದ ಜನರು ಒಟ್ಟು ಸೇರುವ ಸಲುವಾಗಿ ಕ್ರೀಡೋತ್ಸವ ಆಯೋಜಿಸಲಾಗಿದೆ ಎಂದರು.