ಮಡಿಕೇರಿ, ಮಾ. ೨೪: ಕೂಡಿಗೆ ಸೈನಿಕ ಶಾಲೆಯಲ್ಲಿ ಸ್ಥಳೀಯರಿಗೂ ಅವಕಾಶ ಸಿಗುವಂತಾಗಬೇಕೆAದು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಆಗ್ರಹಿಸಿದ್ದಾರೆ.
ಪತ್ರಿಕಾಭವನದಲ್ಲಿ ಪತ್ತಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಕೂಡಿಗೆ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಲು ಹೊರಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತಿದ್ದು, ಸ್ಥಳೀಯವಾಗಿ ಇರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವಕಾಶ ಸಿಗುತ್ತಿಲ್ಲ. ಈ ಹಿಂದೆ ಈ ಸಂಬAಧ ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಚಿವರನ್ನು ಭೇಟಿ ಮಾಡಿ ಸೈನಿಕ ಶಾಲೆಯಲ್ಲಿ ಸ್ಥಳೀಯ ಮಕ್ಕಳಿಗೆ ಶೇ. ೨೫ರಷ್ಟು ಮೀಸಲಾತಿ ಒದಗಿಸಬೇಕೆಂದು ಮನವಿ ಸಲ್ಲಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗಿಲ್ಲ. ಡಿ ಗ್ರೂಪ್ ನೌಕರರ ನೇಮಕಾತಿಯಲ್ಲೂ ಸ್ಥಳೀಯರನ್ನು ಪರಿಗಣಿಸುತ್ತಿಲ್ಲ. ಆದ್ದರಿಂದ ಈ ಬಗ್ಗೆ ಶಾಸಕರು, ಸಂಸದರು ಗಮನ ಹರಿಸಬೇಕು. ಸ್ಥಳೀಯರಿಗೂ ಸೈನಿಕ ಶಾಲೆಯಲ್ಲಿ ಮನ್ನಣೆ ಸಿಗುವಂತೆ ಮಾಡುವಲ್ಲಿ ಪ್ರಯತ್ನಿಸಬೇಕು ಎಂದು ಚಂದ್ರಕಲಾ ಒತ್ತಾಯಿಸಿದರು.
ಗೋಷ್ಠಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಸ್ ಪ್ರವೀಣ್, ಡಿಸಿಸಿ ಸದಸ್ಯರುಗಳಾದ ಗೀತಾ ಧರ್ಮಪ್ಪ, ಫಿಲೋಮಿನಾ ಉಪಸ್ಥಿತರಿದ್ದರು.