ಪೊನ್ನಂಪೇಟೆ. ಮಾ. ೨೫: ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಸರ್ಗ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಜೋಡು ಬೀಟಿ ಅಂಗನವಾಡಿ ಕೇಂದ್ರದ ಉದ್ಘಾಟನೆಯನ್ನು ಸಂಸದ ಪ್ರತಾಪ್ ಸಿಂಹ, ಶಾಸಕ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಅವರ ಸಮ್ಮುಖದಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಾ ವೆಂಕಟೇಶ್ ಹಾಗೂ ಉಪಾಧ್ಯಕ್ಷೆ ಬೊಟ್ಟಂಗಡ ದಶಮಿ ಸದಾ ನೆರವೇರಿಸಿದರು.
ಈ ಸಂದÀರ್ಭ ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಬಿ. ಗಿರೀಶ್ ಗಣಪತಿ, ರಾಜ್ಯ ಕೃಷಿ ಮೋರ್ಚಾ ಸದಸ್ಯೆ ಯಮುನಾ ಚಂಗಪ್ಪ, ಪೊನ್ನಂಪೇಟೆ ಗ್ರಾ.ಪಂ. ಸದಸ್ಯರಾದ ಮೂಕಳೇರ ಸುಮಿತ, ಮೂಕಳೇರ ಮಧುಕುಮಾರ್, ರಾಮಕೃಷ್ಣ, ಆಲಿರ ರಶೀದ್, ಮಂಜುಳ ಮಣಿಕಂಠ, ಪಿಡಿಓ ಪುಟ್ಟರಾಜು, ಸಿಡಿಪಿಓ ರಾಜೇಶ್, ಅಂಗನವಾಡಿ ಶಿಕ್ಷಕಿ ಫಮೀದ ಇನ್ನಿತರರು ಹಾಜರಿದ್ದರು. ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಒಟ್ಟು ರೂ. ೮ ಲಕ್ಷ ವೆಚ್ಚವಾಗಿದ್ದು, ನರೇಗಾ ಯೋಜನೆ ಅಡಿಯಲ್ಲಿ ಪೊನ್ನಂಪೇಟೆ ಗ್ರಾಮ ಪಂಚಾಯಿತಿ ವತಿಯಿಂದ ರೂ. ೫ ಲಕ್ಷ ಹಾಗೂ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ೩ ಲಕ್ಷ ನೀಡಲಾಗಿದೆ.