ಸೋಮವಾರಪೇಟೆ, ಮಾ. ೨೪: ಇಲ್ಲಿನ ಭುವನ ಮಂದಾರ ರೈತ ಉತ್ಪಾದಕರ ಸಂಸ್ಥೆಯ ಸರ್ವ ಸದಸ್ಯರ ಸಭೆ ತಾ. ೨೮ರಂದು ಬೆಳಿಗ್ಗೆ ೧೧ಕ್ಕೆ ಸಫಾಲಿ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಎಚ್.ಪಿ. ತೃಪ್ತಿ ತಿಳಿಸಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಎಸ್.ಎಂ. ಡಿಸಿಲ್ವ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಡಿಕೇರಿ ನಬಾರ್ಡ್ ಸಂಸ್ಥೆಯ ಡಿ.ಡಿ.ಎಂ. ರಮೇಶ್ ಬಾಬು, ಓಡಿಪಿ ಸಂಸ್ಥೆಯ ನಿರ್ದೇಶಕರಾದ ಅಲೆಕ್ಸ್ ಪ್ರಶಾಂತ್ ಸಿಕ್ವೇರಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.