ಮಡಿಕೇರಿ, ಮಾ. ೨೬: ಕೊಡಗು ಜಿಲ್ಲಾ ಪಂಚಾಯತ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಪಂಚಾಯತ್ ರಾಜ್ ಇಲಾಖೆ ನೌಕರರ ಸಂಘ, ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಾರ್ಷಿಕ ಕ್ರೀಡಾಕೂಟಕ್ಕೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಂವರ್ ಸಿಂಗ್ ಮೀನಾ ಕ್ರೀಡಾಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಸದಾ ಒತ್ತಡದಲ್ಲಿರುವ ಸರಕಾರಿ ನೌಕರರು ಈ ರೀತಿಯ ಕ್ರೀಡಾ ಚಟುವಟಿಕೆಗಳಿಂದ ಮನೋಲ್ಲಾಸ ಮೂಡುತ್ತದೆ. ಜೊತೆಗೆ ಮತ್ತಷ್ಟು ಉತ್ಸಾಹದಿಂದ ಕೆಲಸ ನಿರ್ವಹಿಸಬಹುದು. ಒಗ್ಗಟ್ಟು ಮೂಡಿ ತಂಡವಾಗಿ ಕಾರ್ಯನಿರ್ವಹಿಸಲು ಕ್ರೀಡಾಕೂಟಗಳು ಸಹಕಾರಿಯಾಗಿವೆ. ಕ್ರೀಡಾಕೂಟದಲ್ಲಿ ಬಹುಮಾನಕ್ಕಿಂತ ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ. ಸೋಲು, ಗೆಲುವಿನ ಲೆಕ್ಕಾಚಾರವಿಲ್ಲದೆ ಮನೋಲ್ಲಾಸಕ್ಕೆ ಕ್ರೀಡೆಯಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ಜಿ.ಪಂ. ಉಪಕಾರ್ಯದರ್ಶಿ ಲಕ್ಷಿö್ಮ ಮಾತನಾಡಿ, ಪಂಚಾಯತ್ ರಾಜ್ ದಿನದ ಅಂಗವಾಗಿ ಜಿ.ಪಂ. ವ್ಯಾಪ್ತಿಯ ಇಲಾಖೆಗಳ ಸಿಬ್ಬಂದಿಗಳಿ ಗಾಗಿ ಕ್ರೀಡಾಕೂಟ ಆಯೋಜಿಸ ಲಾಗಿದೆ. ಕ್ರೀಡೆಗಳಲ್ಲಿ ತೊಡಗಿಸಿ ಕೊಳ್ಳುವುದರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ವೃದ್ಧಿಯಾಗಿ ಸಮತೋಲನದ ಬದುಕು ಸಾಗಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
(ಮೊದಲ ಪುಟದಿಂದ) ಕ್ರೀಡಾಕೂಟದ ಅಂಗವಾಗಿ ಮಹಿಳೆ ಹಾಗೂ ಪುರುಷರ ವಿಭಾಗದಲ್ಲಿ ಓಟ, ಉದ್ದ, ಎತ್ತರ ಜಿಗಿತ, ಪುರುಷರಿಗೆ ವಾಲಿಬಾಲ್, ಕ್ರಿಕೆಟ್ ಪಂದ್ಯಾಟ ನಡೆಯಿತು. ಪಂದ್ಯಾವಳಿಯಲ್ಲಿ ನೂರಾರೂ ಸಿಬ್ಬಂದಿಗಳು ಭಾಗವಹಿಸಿ ಸಂತಸಪಟ್ಟರು. ತಾ. ೨೭ ರಂದು (ಇಂದು) ಕ್ರಿಕೆಟ್ ಪಂದ್ಯಾಟ ನಡೆಯಲಿದೆ.
ಕಾರ್ಯಕ್ರಮದಲ್ಲಿ ವೀರಾಜಪೇಟೆ ತಾಲೂಕು ಕಾರ್ಯ ನಿರ್ವಾಹಣಾಧಿಕಾರಿ ಕೊಣಿಯಂಡ ಅಪ್ಪಣ್ಣ, ಮಡಿಕೇರಿ ಕಾರ್ಯನಿರ್ವಹಣಾಧಿಕಾರಿ ಶೇಖರ್, ಸೋಮವಾರಪೇಟೆ ಕಾರ್ಯ ನಿರ್ನಹಣಾಧಿಕಾರಿ ಜಯಣ್ಣ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವೀಶ್, ಜಿ.ಪಂ. ಸಹಾಯಕ ಕಾರ್ಯದರ್ಶಿ ಜೀವನ್, ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್ ಸೇರಿದಂತೆ ಇನ್ನಿತರರು ಹಾಜರಿದ್ದರು.