ಸೋಮವಾರಪೇಟೆ, ಮಾ. ೨೬: ಇಲ್ಲಿನ ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾರದ ಪೂಜೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ೬ ರಿಂದ ೯ನೇ ತರಗತಿಯ ಮಕ್ಕಳಿಗೆ ವಾರಕ್ಕೊಮ್ಮೆ ಸಂಸ್ಕೃತ ಪಾಠವನ್ನು ಬೋಧಿಸುತ್ತಿರುವ ನಿವೃತ್ತ ಶಿಕ್ಷಕ ಚಂದ್ರಹಾಸ್‌ಭಟ್, ರಾಜ್ಯ ಮಟ್ಟದ ಕರಾಟೆ (ವುಶು) ಸ್ಪರ್ಧೆಯಲ್ಲಿ ಭಾಗವಹಿಸಿ ೨ ಚಿನ್ನದ ಪದಕಗಳನ್ನು ಪಡೆದು ರಾಷ್ಟç ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಶಾಲೆಯ ವಿದ್ಯಾರ್ಥಿನಿ ಹೆಚ್.ಆರ್. ವೃಂದಾ, ರಾಜ್ಯ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ಉತ್ತಮ ಸಾಧನೆ ಮಾಡಿದ ಎ.ಪಿ. ಬೋಪಣ್ಣ ಅವರುಗಳನ್ನು ಶಾಲಾ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿಕ್ಷಕರು ಸನ್ಮಾನಿಸಿದರು.