ಸೋಮವಾರಪೇಟೆ, ಮಾ. ೨೬: ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಸೂಕ್ಷö್ಮ ಪರಿಸರ ವಲಯಕ್ಕೆ ಸಂಬAಧಿಸಿದAತೆ ಹಲವಷ್ಟು ಗೊಂದಲಗಳಿದ್ದು, ಗ್ರಾಮಸ್ಥರು ಆತಂಕದಲ್ಲಿದ್ದಾರೆ. ತಕ್ಷಣ ಸೂಕ್ಷö್ಮ ಪರಿಸರ ವಲಯಕ್ಕೆ ಸೇರಿದ ಜಾಗದ ಗಡಿಯನ್ನು ಗುರುತಿಸಿ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಕೊತ್ನಳ್ಳಿ, ಕುಮಾರಳ್ಳಿ, ಮಲ್ಲಳ್ಳಿ, ಹೆಗ್ಗಡಮನೆ ಗ್ರಾಮಸ್ಥರು ತಹಶೀಲ್ದಾರ್‌ರನ್ನು ಒತ್ತಾಯಿಸಿದರು.

ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಗೋವಿಂದರಾಜು ಅವರ ನೇತೃತ್ವದಲ್ಲಿ ನಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಕೃಷಿಕರ ಸಭೆಯಲ್ಲಿ, ಮಾತನಾಡಿದ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಸಾರ್ವಜನಿಕರು ತಕ್ಷಣ ಗಡಿ ಗುರುತಿಸಿ, ಸಿ ಮತ್ತು ಡಿ ಭೂಮಿಯ ಮಾಲೀಕರಿಗೆ ಹಕ್ಕುಪತ್ರಗಳನ್ನು ನೀಡುವಂತೆ ಆಗ್ರಹಿಸಿದರು.

ಹೋಬಳಿ ವ್ಯಾಪ್ತಿಯಲ್ಲಿ ಕೆಲ ಪ್ರಭಾವಿಗಳಿಗೆ ಸಿ ಮತ್ತು ಡಿ ಭೂಮಿಗೆ ಹಕ್ಕುಪತ್ರಗಳು ಸಿಕ್ಕಿವೆ. ಬಡ ರೈತರ ಅರ್ಜಿಗಳು ತಾಲೂಕು ಕಚೇರಿಯಲ್ಲಿ ಕೊಳೆಯುತ್ತಿವೆ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು.

ಕೆಲವು ಕಡೆಗಳಲ್ಲಿ ಸಿ ಮತ್ತು ಡಿ ಜಾಗಕ್ಕೆ ಹಕ್ಕುಪತ್ರ ನೀಡಲು ತಾಂತ್ರಿಕ ಸಮಸ್ಯೆಗಳಿಂದ ವಿಳಂಬವಾಗುತ್ತಿದೆ. ಸಮಸ್ಯೆ ಬಗೆಹರಿದ ನಂತರ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡಲಾ ಗುವುದು ಎಂದು ತಹಶೀಲ್ದಾರ್ ಗೋವಿಂದರಾಜು ಭರವಸೆ ನೀಡಿದರು. ಅರಣ್ಯ ಇಲಾಖೆ ಗಡಿ ಗುರುತು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಈ ಸಂದರ್ಭ ಕುಮಾರಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಉದಯಕುಮಾರ್, ಕೊತ್ನಳ್ಳಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಗೋಪಾಲ್, ಪ್ರಮುಖರಾದ ಬಿ.ಪಿ. ಅನಿಲ್‌ಕುಮಾರ್, ಕೆ.ಟಿ. ಪರಮೇಶ್, ಕಿರಣ್, ಬೆಟ್ಟದಳ್ಳಿ ಗ್ರಾಮ ಪಂಚಾಯಿತಿ ರೈತ ಹೋರಾಟ ಸಮಿತಿ ಅಧ್ಯಕ್ಷ ಎಂ.ಜೆ. ವೆಂಕಟೇಶ್, ತ್ರಿಶೂಲ್, ಡಾಲಿ, ತಮ್ಮಯ್ಯ, ದೇಶ್‌ರಾಜ್, ಪ್ರದೀಪ್ ಇದ್ದರು.