*ಗೋಣಿಕೊಪ್ಪ, ಮಾ. ೨೫: ಪೊನ್ನಂಪೇಟೆ ತಾಲೂಕಿನ ಬಾಳೆಲೆ, ಪೊನ್ನಂಪೇಟೆ, ಟಿ.ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೂತನ ಅಂಗನವಾಡಿ ಕಟ್ಟಡವನ್ನು ಮಕ್ಕಳ ಸೇವೆಗಾಗಿ ರಾಜ್ಯ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷ, ಶಾಸಕ ಕೆ.ಜಿ. ಬೋಪಯ್ಯ ಅವರು ಲೋಕಾರ್ಪಣೆಗೊಳಿಸಿದರು.

ತಲಾ ೮ ಲಕ್ಷದಂತೆ ೨೪ ಲಕ್ಷ ಅನುದಾನದಲ್ಲಿ ಕಟ್ಟಡ ನಿರ್ಮಾಣವಾಗಿದ್ದು, ಮಕ್ಕಳ ಅನುಕೂಲಕ್ಕಾಗಿ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳೊಂದಿಗೆ ಕಟ್ಟಡ ಕಾಮಗಾರಿ ನಡೆದಿದೆ ಎಂದು ಶಾಸಕರು ಈ ಸಂದರ್ಭ ಮಾಹಿತಿ ನೀಡಿದರು.

ಮೈಸೂರು, ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಮಂಡೆಪAಡ ಸುಜಾಕುಶಾಲಪ್ಪ, ಪಶ್ಚಿಮಘಟ್ಟಗಳ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ, ಬಗರ್‌ಹುಕುಂ ಸಾಗುವಳಿ ಸಕ್ರಮೀಕರಣ ತಾಲೂಕು ಅಧ್ಯಕ್ಷ ಕಾಡ್ಯಮಾಡ ಗಿರೀಶ್‌ಗಣಪತಿ, ಜಿಲ್ಲಾ ದಿಶಾ ಸಮಿತಿ ಸದಸ್ಯೆ ಮಾಪಂಗಡ ಯಮುನಾ ಚಂಗಪ್ಪ, ಮೂಡ ಅಧ್ಯಕ್ಷ ರಮೇಶ್ ಹೊಳ್ಳ, ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕೊಣಿಯಂಡ ಅಪ್ಪಣ್ಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಹಾಗೂ ಪೊನ್ನಂಪೇಟೆ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷ ಗಿರಿಜಾ ವೆಂಕಟೇಶ್, ಉಪಾಧ್ಯಕ್ಷ ಬೊಟ್ಟಂಗಡ ದಶಮಿ ದೇಚಮ್ಮ, ಸದಸ್ಯರಾದ ಮೂಕಳೇರ ಮಧು, ರಾಮಕೃಷ್ಣ, ತಾಲೂಕು ಅಂಗನವಾಡಿ ಕಾರ್ಯಕರ್ತರ ಸಂಘದ ಅಧ್ಯಕ್ಷೆ ಸುಮಿತ್ರಾ, ಟಿ. ಶೆಟ್ಟಿಗೇರಿ ಗ್ರಾ.ಪಂ. ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಕೆ.ಯು. ಗ್ರೇಸಿ ದೇವಮಾಜಿ, ಉಪಾಧ್ಯಕ್ಷ ಹೆಚ್.ಕೆ. ರಾಮು, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಕವಿತಾ ಪ್ರದೀಪ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕುಂಞAಗಡ ಅರುಣ್ ಭೀಮಯ್ಯ, ಗ್ರಾ.ಪಂ. ಸದಸ್ಯರುಗಳು, ಗ್ರಾಮದ ಪ್ರಮುಖರು ಮತ್ತು ಬಾಳೆಲೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷ ಪೋಡಮಾಡ ಸುಖೇಶ್, ಉಪಾಧ್ಯಕ್ಷೆ ಕೊಕ್ಕೆಂಗಡ ಸ್ಮಿತಾಪೊನ್ನಪ್ಪ, ಸದಸ್ಯರುಗಳು ಹಾಗೂ ಬಾಳೆಲೆ ವಿಜಯಲಕ್ಷಿ÷್ಮ ಪದವಿಪೂರ್ವ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಹಾಜರಿದ್ದರು.