ವೀರಾಜಪೇಟೆ, ಮಾ. ೨೫: ಭಾರತ ಉಳಿಸಿ ಜನತೆಯನ್ನು ರಕ್ಷಿಸಿ ಎಂದು ಕೇಂದ್ರ ಕಾರ್ಮಿಕ ಸಂಘಟನೆೆಗಳು ತಾ. ೨೮ ಮತ್ತು ೨೯ ರಂದು ದೇಶ ವ್ಯಾಪ್ತಿ ಕರೆ ನೀಡಿರುವ ಸಾರ್ವತ್ರಿಕ ಮುಷ್ಕರಕ್ಕೆ ಜಿಲ್ಲೆಯ ಸಿ.ಐ.ಟಿ.ಯು ಸಂಘಟನೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ತಾ. ೨೮ ರಂದು ತಾಲೂಕು ಮಟ್ಟದಲ್ಲಿ, ತಾ. ೨೯ ರಂದು ಜಿಲ್ಲಾಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಿಐಟಿಯುನ ಪ್ರಧಾನ ಕಾರ್ಯದರ್ಶಿ ಎ.ಸಿ. ಸಾಬು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿಯನ್ನು ಖಂಡಿಸಿ ಕೋವಿಡ್ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸಿದ ಲಾಕ್‌ಡೌನ್ ದುಡಿಯುವ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದವು. ಆ ಸಂದರ್ಭದಲ್ಲಿ ನೀಡಿದ ಪರಿಹಾರ ಪ್ಯಾಕೇಜ್‌ಗಳು ಬಡಜನರಿಗೆ ತಲುಪದೆ ಕಾರ್ಪೊರೇಟ್ ಹಾಗೂ ಬಂಡವಾಳ ಶಾಹಿಗಳಿಗೆ ಸೇರಿದ ದಿನ ಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮುಷ್ಕರ ಕೈಗೊಳ್ಳಲಾಗಿದೆ ಎಂದರು. ಲೋಕಸಭೆಯಲ್ಲಿ ರೈತ ವಿರೋಧಿ ಮೂರು ಕೃಷಿ ಕಾಯ್ದೆ ಸೇರಿದಂತೆ ಅಸ್ತಿತ್ವದಲ್ಲಿದ್ದ ೨೯ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿದೆ. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಬದಲಾಗಿ ಅವರಿಗೆ ಬೇಕಾದ ರೀತಿಯಲ್ಲಿ ಮಂಡಳಿಗಳನ್ನು ದುರ್ಬಲಗೊಳಿಸಿದೆ ಎಂದು ಆರೋಪಿಸಿದರು. ಸಿಐಟಿಯುನ ಜಿಲ್ಲಾಧ್ಯಕ್ಷ ಮಹಾದೇವ್ ಮಾತನಾಡಿ, ಜಿಲ್ಲಾ ಉಪಧ್ಯಕ್ಷ ಭರತ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿದರು.
 
						