ಸಿದ್ದಾಪುರ, ಮಾ. ೨೫: ವೀರಾಜಪೇಟೆ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ಗೋಣಿಕೊಪ್ಪದÀ ದುರ್ಗಾಬೋಜಿ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ಕವಿತಾ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶರೀನ್ ಸುಬ್ಬಯ್ಯ, ರಾಜ್ಯ ಶಿಸ್ತು ಸಮಿತಿಯ ಸದಸ್ಯೆ ರೀನಾ ಪ್ರಕಾಶ್, ರಾಜ್ಯ ರೈತ ಮೋರ್ಚಾ ಸದಸ್ಯೆ ಯಮುನಾ ಚಂಗಪ್ಪ, ನಿಕಟಪೂರ್ವ ಅಧ್ಯಕ್ಷೆ ಸುಮಿ ಸುಬ್ಬಯ್ಯ, ರೀನಾ ಸುನಿಲ್ ಇನ್ನಿತರರು ಹಾಜರಿದ್ದರು. ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಗುತ್ತಿಗೆದಾರರಾದ ಲಕ್ಷಿö್ಮ ಹಾಗೂ ಕೆ.ಡಿ.ಪಿ ನಾಮನಿರ್ದೇಶಕರಾಗಿ ಆಯ್ಕೆಗೊಂಡ ಕವಿತಾ ಬೋಜಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ರತಿ ಅಚ್ಚಪ್ಪ ಸ್ವಾಗತಿಸಿ, ಶಿಲ್ಪ ಅಪ್ಪಣ್ಣ ನಿರೂಪಿಸಿ, ವಶ್ಮ ಮನಿಸ್ ವಂದಿಸಿದರು.