ಮಡಿಕೇರಿ, ಮಾ. ೨೬: ನಗರದ ಸರಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯೊಂದಿಗೆ ದತ್ತಿನಿಧಿ ವಿತರಿಸಲಾಯಿತು.
ಕಾರ್ಯಕ್ರಮವನ್ನು ದಾನಿ ಚೆಯ್ಯಂಡ ಸತ್ಯ ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಆರ್.ಪಿ. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಯ್ಯಂಡ ಸತ್ಯ ಹಾಗೂ ಹೆಚ್.ಎ. ಹಂಸ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭ ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತç ವಿತರಿಸಲಾಯಿತು. ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಮುಖರಾದ ಬೇಬಿ ಮ್ಯಾಥ್ಯು, ಶಾಲಾ ಉಪ ಪ್ರಾಂಶುಪಾಲೆ ಪಿ.ಕೆ. ನಳಿನಿ, ಶಾಲಾ ಉಪಾಧ್ಯಕ್ಷರು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ನ ಆಯುಕ್ತ ಜಿಮ್ಮಿ ಸಿಕ್ವೇರ, ಎಸ್‌ಡಿಎಂಸಿ ಆಡಳಿತ ಮಂಡಳಿ ಪೂವಣ್ಣ, ಶಾಮ್, ರೀನಾ ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.