ನಾಪೋಕ್ಲು, ಮಾ. ೨೬: ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವತಿಯಿಂದ ನೇತಾಜಿ ಪ್ರೌಢಶಾಲೆಯ ಸಭಾಂಗಣದಲ್ಲಿ ಮಕ್ಕಳ ಗ್ರಾಮ ಸಭೆಯನ್ನು ಏರ್ಪಡಿಸಲಾಗಿತ್ತು.

ಮಕ್ಕಳ ಗ್ರಾಮಸಭೆಗೆ ಬಲ್ಲಮಾವಟಿ ಗ್ರಾಮ ಪಂಚಾಯಿತಿಗೆ ಒಳಪಟ್ಟ ಬಲ್ಲಮಾವಟಿ, ನೆಲಜಿ ಹಾಗೂ ದೊಡ್ಡಪುಲಿಕೋಟು ಗ್ರಾಮಗಳ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿ ದ್ದರು. ಪ್ರೌಢಶಾಲೆಯ ವಿದ್ಯಾರ್ಥಿನಿ ಸುನಿರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. ಮಕ್ಕಳ ಹಕ್ಕುಗಳ ಬಗ್ಗೆ ಸಭೆಯಲ್ಲಿ ತಿಳಿಸಲಾಯಿತು. ಬದುಕುವ ಹಕ್ಕು, ರಕ್ಷಣೆಯ ಹಕ್ಕು, ಅವಕಾಶ ಮತ್ತು ವಿಕಾಸ ಹೊಂದುವ ಹಕ್ಕು ಹಾಗೂ ಭಾಗವಹಿಸುವ ಹಕ್ಕುಗಳನ್ನು ಮಕ್ಕಳು ಹೊಂದಿದ್ದು ಈ ಬಗ್ಗೆ ಜಾಗೃತಿಯ ಕರೆ ನೀಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಮಣವಟ್ಟೀರ ಹರೀಶ್ ಕುಶಾಲಪ್ಪ, ಉಪಾಧ್ಯಕ್ಷೆ ಬಾಳೆಯಡ ದೀನಾ ಮಾಯಮ್ಮ, ಸದಸ್ಯರಾದ ಚೋಕಿರ ಬಾಬಿ ಭೀಮಯ್ಯ, ಮಚ್ಚುರ ರವೀಂದ್ರ, ಮುಕ್ಕಾಟಿರ ಸುತನ್ ಸುಬ್ಬಯ್ಯ ಪಾಲ್ಗೊಂಡಿದ್ದರು. ಪಿಡಿಒ ಪೂಣಚ್ಚ ಸ್ವಾಗತಿಸಿ, ವಂದಿಸಿದರು.