ಮಡಿಕೇರಿ, ಮಾ.೨೫: ಕೊಡಗು ಜಿಲ್ಲೆಯಲ್ಲಿ ರಾಷ್ಟಿçÃಯ ಹೈನು ಅಭಿವೃದ್ದಿ ಹಾಗೂ ಹಾಸನ ಹಾಲು ಒಕ್ಕೂಟದ ವತಿಯಿಂದ ಕೊಡಗು ಜಿಲ್ಲಾ ಜೇನು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವ ನಿಟ್ಟಿನಲ್ಲಿ ತಾ. ೨೯ ರಂದು ಬೆಳಗ್ಗೆ ೧೧ ಗಂಟೆಗೆ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಂಗಣದಲ್ಲಿ ಗ್ರಾಮ ಸಭೆ ನಡೆಯಲಿದೆ.

ಜಿಲ್ಲೆಯ ಆಸಕ್ತ ಜೇನು ಕೃಷಿಕರು ಸಭೆಯಲ್ಲಿ ಹಾಜರಿದ್ದು ಸಂಘ ರಚನೆಗೆ ಸಂಬAಧಿಸಿದAತೆ ಸಲಹೆ, ಮಾರ್ಗದರ್ಶನ ನೀಡಬಹುದಾಗಿದೆ ಎಂದು ಹಾಸನ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕರಾದ ಕೆ. ಜಯಪ್ರಕಾಶ್ ಅವರು ತಿಳಿಸಿದ್ದಾರೆ.