ಮಡಿಕೇರಿ, ಮಾ. ೨೫: ನಗರಸಭೆಯ ನಡಿಗೆ ವಾರ್ಡ್ ಕಡೆಗೆ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ನಗರಸಭಾ ತಂಡ ಅಧ್ಯಕ್ಷೆ ಅನಿತಾ ಪೂವಯ್ಯ ನೇತೃತ್ವದಲ್ಲಿ ೨ನೇ ವಾರ್ಡ್ಗೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿತು.

ನೀರಿನ ಸಮಸ್ಯೆ, ರಸ್ತೆ, ಚರಂಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ ತಂಡ ಅಗತ್ಯವಾಗಿ ಆಗಬೇಕಾಗಿರುವ ಕೆಲಸಗಳ ಬಗ್ಗೆ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿತು. ಈ ಸಂದರ್ಭ ನಗರಸಭಾ ಆಯುಕ್ತ ರಾಮದಾಸ್, ಸದಸ್ಯರುಗಳಾದ ಮಹೇಶ್ ಜೈನಿ, ಚಿತ್ರಾವತಿ ಮತ್ತಿತರರಿದ್ದರು.