ಸೋಮವಾರಪೇಟೆ, ಮಾ. ೨೬: ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ ನೇ ಜನ್ಮದಿನ ಹಾಗೂ ಬಾಬು ಜಗಜೀವನ್‌ರಾಮ್ ಅವರ ೧೧೫ನೇ ಜನ್ಮ ದಿನಾಚರಣೆ ಆಯೋಜಿಸುವ ಸಲುವಾಗಿ ತಾಲೂಕು ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ತಹಶೀಲ್ದಾರ್ ಗೋವಿಂದರಾಜು ವಹಿಸಿದ್ದರು. ಏ. ೫ರಂದು ಜಗಜೀವನ್‌ರಾಮ್ ಜನ್ಮ ದಿನಾಚರಣೆಯನ್ನು ತಾಲೂಕು ಸ್ತಿçà ಶಕ್ತಿ ಭವನದಲ್ಲಿ ಆಚರಿಸಲು ತೀರ್ಮಾನಿಸಲಾಯಿತು. ಏ.೧೪ರಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಿಸಲಾಗುವುದು. ಕಳೆದ ೨೦೧೮ ರಿಂದಲೂ ಕೋವಿಡ್ ಮತ್ತು ಹವಾಮಾನ ವೈಪರೀತ್ಯದಿಂದಾಗಿ ಇಬ್ಬರ ಜನ್ಮ ದಿನಾಚರಣೆಯನ್ನು ಸಾಂಕೇತಿಕವಾಗಿ ಆಚರಿಸಲಾಗಿತ್ತು. ಈ ಬಾರಿ ಸರ್ಕಾರ ಅದ್ಧೂರಿಯಾಗಿ ಆಚರಿಸುವಂತೆ ನಿರ್ದೇಶನ ನೀಡಿದೆ ಎಂದು ತಹಶೀಲ್ದಾರ್ ತಿಳಿಸಿದರು. ಏ. ೧೪ರಂದು ಬೆಳಿಗ್ಗೆ ಇಲ್ಲಿನ ಜೇಸಿ ವೇದಿಕೆ ಎದುರಿನಿಂದ ಮೆರವಣಿಗೆಯಲ್ಲಿ ಸಾಗಿ ಬಾಣಾವರ ರಸ್ತೆಯಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಸಭಾ ಕಾರ್ಯಕ್ರಮ ಆಚರಿಸಲು ಸಭೆ ತೀರ್ಮಾನಿಸಿತು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.