ಮಡಿಕೇರಿ, ಮಾ.೨೬: ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ೧೫ ಸಾವಿರ ಪದವೀಧರ ಶಿಕ್ಷಕ (೬ ರಿಂದ ೮ ನೇ ತರಗತಿ) ವೃಂದದ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಏಪ್ರಿಲ್ ೨೨ ಕೊನೆಯ ದಿನವಾಗಿದೆ. ವಯೋಮಿತಿ, ವಿದ್ಯಾರ್ಹತೆ, ವೇತನ ಶ್ರೇಣಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗಿರುವ ಮಾಹಿತಿಗಳಿಗೆ hಣಣಠಿ://sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ವೆಬ್‌ಸೈಟ್ ವೀಕ್ಷಿಸಬಹುದಾಗಿದೆ. ಈ ಹುದ್ದೆಗಳ ನೇಮಕಾತಿ ಪರೀಕ್ಷೆಗಳಿಗೆ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್(ರಿ) ಹಾಸನ ಶಾಖೆಯ ವತಿಯಿಂದ ರಿಯಾಯಿತಿ ದರದಲ್ಲಿ ನುರಿತ ವಿಷಯ ತಜ್ಞರಿಂದ ಆಫ್‌ಲೈನ್ ತರಬೇತಿ ಪ್ರಾರಂಭಿಸುತ್ತಿದ್ದು ಆಸಕ್ತರು ೮೬೬೦೨೧೭೭೩೯/ ೦೮೧೭೨೨೪೫೧೩೫ ಕ್ಕೆ ಕರೆ/ವಾಟ್ಸಾಪ್ ಮಾಡಿ ಹೆಸರು ನೋದಾಯಿಸಿಕೊಳ್ಳಬಹುದು ಎಂದು ಹಾಸನ ಶಾಖೆಯ ಕೃಷಿ ಸರ್ವೋದಯ ಫೌಂಡೇಶನ್‌ನ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.