ಕಡಂಗ, ಮಾ. ೨೮: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ ಎಸ್‌ಎಸ್‌ಎಫ್ ಮಡಿಕೇರಿ ಡಿವಿಷನ್ ಸಮಾಲೋಚನಾ ಸಭೆ ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಜರುಗಿತು. ಎಸ್‌ಎಸ್‌ಎಫ್ ರಾಷ್ಟೀಯ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ಸಂವಿಧಾನದ ವಿಚಾರದ ಕುರಿತು ಸಂದೇಶ ಭಾಷಣ ಮಾಡಿದರು.
ರಾಜ್ಯ ಎಸ್‌ಎಸ್‌ಎಫ್‌ನ ದಅವ ಕಾರ್ಯದರ್ಶಿ ಮೌಲಾನಾ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಸಂವಿಧಾನ, ಧರ್ಮ, ರಾಜಕೀಯ ಎಂಬ ವಿಷಯದಲ್ಲಿ ಮಾತನಾಡುತ್ತಾ, ಭಾರತ ವೈವಿಧ್ಯತೆಯಲ್ಲಿ ಏಕತೆ ಸಂದೇಶವು ಸಾರಿದೆ. ದೇಶದಲ್ಲಿ ಹಲವಾರು ಸಮಸ್ಯೆಗಳಿವೆ. ಅದೆಷ್ಟೋ ಜನರು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ, ಅವರ ಸಮಸ್ಯೆಗಳನ್ನು ಪರಿಹರಿಸುವುದನ್ನು ಬಿಟ್ಟು ರಾಜಕೀಯ ಲಾಭಕ್ಕಾಗಿ ಯುವಸಮೂಹದೆಡೆಯಲ್ಲಿ ವಿಷಬೀಜವನ್ನು ಬಿತ್ತುವ ಪ್ರಯತ್ನಗಳು ನಡೆಯುತ್ತಿವೆ. ರಾಜಕೀಯ ಪಕ್ಷಗಳು ದೇಶದ ಸಮಸ್ಯೆಯನ್ನು ಪರಿಹರಿಸಲು ಹೆಚ್ಚು ಗಮನವನ್ನು ನೀಡುವಂತವರಾಗಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮದ ಧ್ವಜಾರೋಹಣವನ್ನು ಕೊಡಗು ಜಿಲ್ಲಾ ನಾಯಿಬ್ ಖಾಝಿ ಶಾದುಲಿ ಫೈಝಿ ನೆರವೇರಿಸಿದರು. ಡಿವಿಷನ್ ಅಧ್ಯಕ್ಷ ನಝೀರ್ ಸಖಾಫಿ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ದುಆ ನೇತೃತ್ವವನ್ನು ಎಸ್‌ಎಸ್‌ಎಫ್ ಮಾಜಿ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಅವರು ವಹಿಸಿದ್ದರು. ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಫೀಳ್ ಸಅದಿ ಉಸ್ತಾದ್ ಉದ್ಘಾಟಿಸಿದರು.
ಎಸ್‌ಎಸ್‌ಎಫ್ ರಾಜ್ಯ ಕಾರ್ಯದರ್ಶಿ ಮುಬಷಿರ್ ಅಹ್ಸನಿ ಕಾಮಿಲ್ ಸಖಾಫಿ, ಕೊಡಗು ಜಿಲ್ಲಾಧ್ಯಕ್ಷ ಶಾಫಿ ಸಅದಿ ಸೋಮವಾರಪೇಟೆ ಪ್ರಾಸ್ತಾವಿಕ ಭಾಷಣ ನಡೆಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮರ್ಕಝ್ ವಿದ್ಯಾ ಸಂಸ್ಥೆಯ ನಿರ್ದೇಶಕ ಮೊಇದೀನ್ ಕುಟ್ಟಿ ಹಾಜಿ, ಕರ್ನಾಟಕ ಮುಸ್ಲಿಂ ಜಮಾಅತ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಕುಂಜಿಲ, ಜಿಲ್ಲಾ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅಬ್ದುಲ್ ರಹ್ಮಾನ್ ನಾಪೋಕ್ಲು, ನಾಪೋಕ್ಲು ಗ್ರಾಂ.ಪ ಮಾಜಿ ಅಧ್ಯಕ್ಷ ಇಸ್ಮಾಯಿಲ್, ನಾಪೋಕ್ಲು ಜಮಾಅತ್ ಅಧ್ಯಕ್ಷ ಸಲೀಂ ಹಾರಿಸ್, ಜೆ.ಡಿ.ಎಸ್. ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿ ಮನ್ಸೂರ್ ಅಲಿ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಕರ್ನಾಟಕ ಮುಸ್ಲಿಂ ಜಮಾಅತ್ ಮಡಿಕೇರಿ ತಾಲೂಕು ಅಧ್ಯಕ್ಷ ಅಬೂಬಕರ್ ಹಾಜಿ, ಪ್ರಧಾನ ಕಾರ್ಯದರ್ಶಿ ಲಿಂಬ್ರ ಅದ್ದು ಹಾಜಿ, ನಾಯಕರಾದ ಅರಫಾತ್ ಎಸ್‌ಎಸ್‌ಎಫ್ ರಾಜ್ಯ ಕ್ಯಾಂಪಸ್ ಕಾರ್ಯದರ್ಶಿ ಶರೀಫ್ ರಾಜ್ಯ ನಾಯಕ ಅಝೀಝ್ ಸಖಾಫಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹೀಮ್, ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಸೌದಿ ಅರೇಬಿಯಾ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಝುಹ್ರಿ ಸೇರಿದಂತೆ ಇತರರು ಹಾಜರಿದ್ದರು.