ಸಿದ್ದಾಪುರ, ಮಾ. ೨೮: ಬೈಕ್ ಅಪಘಾತ ವಾಗಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ

ವಾಲ್ನೂರು ಗ್ರಾಮದ ಬಾಳೆಗುಂಡಿ ಎಂಬಲ್ಲಿ ಸಂಭವಿಸಿದೆ. ಮರಗೋಡು ಸಮೀಪದ ಐಕೊಳ ಗ್ರಾಮದ ನಿವಾಸಿ ಕೊಂಪುಳಿರ ದಯಾನಂದ (೪೯) ಮೃತ ದುರ್ದೈವಿ.

ದಯಾನಂದ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಬೆಳಿಗ್ಗೆ ಮರಗೋಡುವಿನಿಂದ ಕುಶಾಲನಗರಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ವಾಲ್ನೂರು ಸಮೀಪದ ಬಾಳೆಗುಂಡಿಯ

(ಮೊದಲ ಪುಟದಿಂದ) ಬಳಿ ಬೈಕ್ ಅಪಘಾತವಾಗಿದೆ. ಗಂಭೀರ ಗಾಯಗೊಂಡಿದ್ದ ದಯಾನಂದ ಅವರನ್ನು ಚಿಕಿತ್ಸೆಗೆ ಮೈಸೂರಿಗೆ ರವಾನಿಸುತ್ತಿದ್ದ ಸಂದರ್ಭ ಚಿಂತಾಜನಕ ಸ್ಥಿತಿಯಲ್ಲಿದ್ದ ದಯಾನಂದ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ಸಿದ್ದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿಮಹಜರು ಮಾಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸAತಾಪ : ದಯಾನಂದ ಅವರ ನಿಧನಕ್ಕೆ ಮಡಿಕೇರಿ ಪ್ರವಾಸಿಗರ ವಾಹನ ಮಾಲೀಕ ಹಾಗೂ ಚಾಲಕರ ಸಂಘದ ಅಧ್ಯಕ್ಷ ತೆಕ್ಕಡ ಸಂತು ಕಾರ್ಯಪ್ಪ ಹಾಗೂ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.