ಮಡಿಕೇರಿ, ಮಾ. ೨೮: ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿAದ ಆರಂಭವಾಗಿದ್ದು, ಮೊದಲ ದಿನ ಜಿಲ್ಲೆಯಾದ್ಯಂತ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಕೊಡಗಿನ ೩೭ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ೬೬೮೦ ವಿದ್ಯಾರ್ಥಿಗಳ ಪೈಕಿ ೬೪೪೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಇದರಲ್ಲಿ ಮರುಪರೀಕ್ಷೆ ಬರೆಯಬೇಕಿದ್ದ ೧೯ ಮಂದಿ ಪೈಕಿ ೧೧ ಮಂದಿ ಮಾತ್ರ ಹಾಜರಾಗಿ ಪರೀಕ್ಷೆ ಬರೆದರು. ೬ ಮಂದಿ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲಾಗಿತ್ತು. ಮೊದಲ ದಿನ ಒಟ್ಟು ೨೩೩ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರುಹಾಜ ರಾಗಿದ್ದರು. ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಯಿತು.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಂತಮೈಕಲರ ಶಾಲೆ, ಸಂತಜೋಸೆಫರ ಶಾಲೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಜಿಎಂಪಿ ಶಾಲೆಗಳಲ್ಲಿ ಪರೀಕ್ಷೆ ನಡೆಯಿತು. ಬೆಳಗ್ಗಿನಿಂದಲೇ ಪರೀಕ್ಷಾ ಕೇಂದ್ರಗಳ ಬಳಿ ಪೊಲೀಸ್ ಬಂದೋಬಸ್ತ್ ನೊಂದಿಗೆ ಶಿಕ್ಷಕ ವರ್ಗ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿತ್ತು. ವಿದ್ಯಾರ್ಥಿಗಳು ಕೂಡ ಪರೀಕ್ಷಾ ಕೇಂದ್ರದ ಆವರಣದಲ್ಲಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದುದು ಕಂಡು ಬಂತು. ಇತ್ತೀಚೆಗೆ ಉಂಟಾಗಿರುವ ಹಿಜಾಬ್ ವಿವಾದ ಸಂಬAಧ ಶಾಲೆಗಳಲ್ಲಿ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ನ್ಯಾಯಾಲ ಯದ ತೀರ್ಪು ಪ್ರಕಟಗೊಂಡಿದ್ದ ನಡುವೆಯೂ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗುವ

(ಮೊದಲ ಪುಟದಿಂದ) ಸಾಧ್ಯತೆ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆಯನ್ನು ಪರೀಕ್ಷಾ ಕೇಂದ್ರಗಳ ಬಳಿ ಕೈಗೊಳ್ಳಲಾಗಿತ್ತು.

ಆದರೆ ಜಿಲ್ಲೆಯ ಯಾವುದೇ ಶಾಲೆಗಳಲ್ಲೂ ಹಿಜಾಬ್ ಸಂಬAಧ ಯಾವುದೇ ಗೊಂದಲಗಳು ಸೃಷ್ಟಿಯಾಗಿಲ್ಲ. ಎಲ್ಲೆಡೆ ಶಾತಿಯುತವಾಗಿ ಪರೀಕ್ಷೆ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕಳೆದ ಬಾರಿ ಮಹತ್ವ ಕಳೆದುಕೊಂಡಿದ್ದ ೧೦ನೇ ತರಗತಿ ಪರೀಕ್ಷೆ ಈ ಬಾರಿ ವಿದ್ಯಾರ್ಥಿಗಳಲ್ಲಿ ಗಂಭೀರತೆಯನ್ನು ಸೃಷ್ಟಿಸಿತ್ತು. ಶಿಕ್ಷಕರು ಕೂಡ ಯಾವುದೇ ಆತಂಕಕ್ಕೆ ಒಳಗಾಗದೇ ಪರೀಕ್ಷೆ ಬರೆಯುವಂತೆ ಮಕ್ಕಳನ್ನು ಹುರಿದುಂಬಿಸುತ್ತಿದ್ದುದು ಅಲ್ಲಲ್ಲಿ ಕಂಡು ಬಂತು. ವಿದ್ಯಾರ್ಥಿಗಳು ಕೂಡ ಉತ್ಸಾಹದಿಂದ ಪರೀಕ್ಷೆಗೆ ಹಾಜರಾದರು. ನಾಪೋಕ್ಲುವಿನಲ್ಲಿ ಯಶಸ್ವಿ

೨೦೨೨ ರ ಎಸ್ಸೆಸೆಲ್ಸಿ ಪರೀಕ್ಷೆಗಳು ಸೋಮವಾರದಿಂದ ಆರಂಭಗೊAಡಿದ್ದು ಇಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆದವು. ಮಡಿಕೇರಿ ತಾಲೂಕಿನ ೧೩ ಪರೀಕ್ಷಾ ಕೇಂದ್ರಗಳ ಪೈಕಿ ನಾಪೋಕ್ಲುವಿನಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿತ್ತು. ಇಲ್ಲಿನ ಕೆಪಿಎಸ್ ನಲ್ಲಿ ೨೩೭ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದು ಇಬ್ಬರು ಗೈರು ಹಾಜರಾಗಿದ್ದರು.

ಶ್ರೀ ರಾಮ ಟ್ರಸ್ಟ್ ಪಬ್ಲಿಕ್ ಶಾಲೆಯಲ್ಲಿ ೧೪೭ ವಿದ್ಯಾರ್ಥಿಗಳು ನೋಂದಾಯಿಸಿದ್ದು ಐವರು ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಕಾರ್ಯ ನಿರ್ವಹಿಸಲಾಯಿತು. ಪೊಲೀಸ್ ಇಲಾಖೆಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕರು ಕರ್ತವ್ಯ ನಿರ್ವಹಿಸಿದರು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶವಿಲ್ಲದಂತೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೊದಲ ದಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಬರೆದರು. ಬೆಳಗ್ಗೆ ೮ ಗಂಟೆಯಿAದಲೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ಗುಂಪು ಗುಂಪಾಗಿ ನಿಂತು ಪರೀಕ್ಷೆಯ ಬಗ್ಗೆ ಚರ್ಚೆಯಲ್ಲಿ ತೊಡಗಿಕೊಂಡಿದ್ದುದು ಕಂಡು ಬಂತು. ಕೊರೊನಾ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ಮಾಡಿ, ಕೈಗಳಿಗೆ ಸ್ಯಾನಿಟೈಸರ್ ಸಿಂಪಡಿಸಿ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಯಿತು.

ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆ ಪರೀಕ್ಷಾ ಕೇಂದ್ರದಲ್ಲಿ, ಸಾಯಿ ಶಂಕರ್ ಪ್ರೌಢಶಾಲೆ, ನಿನಾದ ಪ್ರೌಢಶಾಲೆ, ಅಪ್ಪಚ್ಚ ಕವಿ ಪ್ರೌಢಶಾಲೆ, ಸಂತ ಅಂತೋಣಿ ಪ್ರೌಢಶಾಲೆ, ಬೆಕ್ಕೆಸೊಡ್ಲೂರು ಪ್ರೌಢಶಾಲೆ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ ಸೇರಿದಂತೆ ಒಟ್ಟು ೩೨೬ ವಿದ್ಯಾರ್ಥಿಗಳ ಪೈಕಿ ೩೧೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ೮ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಚಾಮರಾಜನಗರ ಡಯಟ್ ಪ್ರಾಂಶುಪಾಲ ಹೆಚ್.ಕೆ.ಪಾಂಡು ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಪರೀಕ್ಷಾ ಮುಖ್ಯ ಅಧೀಕ್ಷಕರಾಗಿ ಉಪ ಪ್ರಾಂಶುಪಾಲ ಚಂಗಪ್ಪ, ಕಸ್ಟೋಡಿಯನ್ ಆಗಿ ಬಿ.ಪಿ.ಉತ್ತಪ್ಪ, ಸಿಟ್ಟಿಂಗ್ ಸ್ಕಾ÷್ವಡ್ ಆಗಿ ಬಸವರಾಜು ಕಾರ್ಯನಿರ್ವಹಿಸಿದರು. ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಗೆ ಒಳಗೊಂಡ ಹೊಸಕೋಟೆ ಸರಕಾರಿ ಪ್ರೌಢಶಾಲೆ, ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲೆ, ಶಾಂತಿನೀಕೇತನ ಆಂಗ್ಲ ಮಾಧ್ಯಮ ಶಾಲೆ, ನಾಕೂರು ಶಿರಂಗಾಲ ವ್ಯಾಪ್ತಿಯ ಕಾನ್‌ಬೈಲ್ ಪ್ರೌಢಶಾಲೆ, ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಗಳ ಒಟ್ಟು ೩೨೫ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅರ್ಹತೆ ಪಡೆದುಕೊಂಡಿದ್ದರು.

ಸುಂಟಿಕೊಪ್ಪ ಸರಕಾರಿ ಪದವಿ ಕಾಲೇಜಿನ ಪ್ರೌಢಶಾಲೆ, ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಒಟ್ಟು ೩೨೪ ವಿದ್ಯಾರ್ಥಿ ವಿದ್ಯಾರ್ಥಿನಿಯರು ಆಗಮಿಸಿ ಪರೀಕ್ಷೆಯನ್ನು ಬರೆದರು. ಕೊಡಗು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೇದಮೂರ್ತಿಯವರ ನಿರ್ದೇಶನದೊಂದಿಗೆ ಆಯಾಯಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಪನ್ಮೂಲ ಶಿಕ್ಷಕರ ತಂಡ ಸಾಮೂಹಿಕವಾಗಿ ಶ್ರಮಿಸುವ ಮೂಲಕ ಶಾಲಾ ಮಕ್ಕಳಿಗೆ ಶಾಲಾ ತರಗತಿಗಳಲ್ಲಿ ಹಗಲು ರಾತ್ರಿ ಪಾಠವನ್ನು ಮಾಡಲಾಗಿತ್ತು. ಇದರ ಮೂಲಕ ಪರೀಕ್ಷಾ ಭಯವನ್ನು ಹೋಗಲಾಡಿಸಿದ್ದರು. ಅಲ್ಲದೇ ಕಲಿಕೆಯಲ್ಲೂ ಹೆಚ್ಚಿನ ಆಸಕ್ತಿಯನ್ನು ವಿದ್ಯಾರ್ಥಿಗಳು ವಹಿಸಿದ್ದರು. ಇದರ ಫಲವಾಗಿಯೇ ಸೋಮವಾರದಿಂದ ಸೋಮವಾರಪೇಟೆ ತಾಲೂಕಿನಾದ್ಯಂತ ೧೬ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊAಡಿದ್ದು, ಪ್ರಥಮ ದಿನದಂದು ಯಾವುದೇ ಗೊಂದಲಗಳಿಲ್ಲದೇ ಸುಸೂತ್ರವಾಗಿ ಕನ್ನಡ ಪರೀಕ್ಷೆ ನಡೆಯಿತು.

ತಾಲೂಕಿನಲ್ಲಿ ಒಟ್ಟು ೨೫೦೩ ಸಾಮಾನ್ಯ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಪಡೆದಿದ್ದು, ಇದರಲ್ಲಿ ೪೧ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಖಾಸಗಿಯಾಗಿ ೨೦೫ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಇವರುಗಳು ಮಡಿಕೇರಿಯಲ್ಲಿ ತೆರೆಯಲಾಗಿದ್ದ ಕೇಂದ್ರದಲ್ಲಿ ಪರೀಕ್ಷೆ ಬರೆದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಒಳಪಡುವ ನೆಲ್ಲಿಹುದಿಕೇರಿ, ಸಿದ್ದಾಪುರ ಭಾಗದ ಶಾಲೆಗಳಲ್ಲಿ ಹಿಜಾಬ್ ವಿವಾದ ಉಂಟಾಗಬಹುದು ಎಂದು ಅಂದಾಜಿಲಾಗಿತ್ತು. ಆದರೆ ವಿದ್ಯಾರ್ಥಿಗಳು ಸರ್ಕಾರದ ಆದೇಶದಂತೆಯೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ ಹತ್ತನೇ ತರಗತಿ ಪರೀಕ್ಷೆ ಬರೆದಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಶಿಕ್ಷಣಕ್ಕೆ ಮಹತ್ವ ನೀಡಿದ್ದಾರೆ. ಎಲ್ಲಿಯೂ ಅಪಸವ್ಯಗಳು ನಡೆದಿಲ್ಲ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಮಾಧಾನ ವ್ಯಕ್ತಪಡಿಸಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ವಿ. ಸುರೇಶ್ ಅವರು ನೆಲ್ಲಿಹುದಿಕೇರಿ, ಸಿದ್ದಾಪುರ, ಮಾದಾಪುರ, ಸುಂಟಿಕೊಪ್ಪ, ಸೋಮವಾರಪೇಟೆ ವ್ಯಾಪ್ತಿಯಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ತೆರಳಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.ಆರಂಭವಾದ ಪರೀಕ್ಷೆ ಯಶಸ್ವಿಯಾಗಿ ಮುನ್ನಡೆಯಿತು. ಕುಶಾಲನಗರ ತಾಲೂಕಿನಲ್ಲಿ ಈ ಬಾರಿ ೧೫೩೦ ವಿದ್ಯಾರ್ಥಿಗಳು ಹತ್ತನೆ ತರಗತಿಯ ಕನ್ನಡ ಪರೀಕ್ಷೆಯಲ್ಲಿ ಪಾಲ್ಗೊಂಡಿದ್ದರು.

ಕೂಡಿಗೆ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಸೋಮವಾರ ಕನ್ನಡ ಪರೀಕ್ಷೆಯಲ್ಲಿ ೧೩೯ ಮಕ್ಕಳು ಹಾಜರಿದ್ದರು. ಯಾವುದೇ ವಿದ್ಯಾರ್ಥಿಯು ಗೈರು ಹಾಜರಾಗಿರಲಿಲ್ಲ. ಪರೀಕ್ಷೆಯು ವ್ಯವಸ್ಥಿತವಾಗಿ ನಡೆಯಿತು. ಮಕ್ಕಳಿಗೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬಗ್ಗೆ ಭಯ ಹೊಂದದೇ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಪರೀಕ್ಷೆಗೂ ಮುನ್ನ ಧೈರ್ಯ ತುಂಬಲಾಯಿತು. ಆರಂಭದಲ್ಲಿ ಮಕ್ಕಳಿಗೆ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು ಮಕ್ಕಳ ದೈಹಿಕ ತಾಪಮಾನ ಮತ್ತು ಆರೋಗ್ಯ ಪರೀಕ್ಷೆ ನಡೆಸಿದರು.

ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಫಾತಿಮಾ ಪ್ರೌಢಶಾಲೆ ಮತ್ತು ಫಾತಿಮಾ ಕಾನ್ವೆಂಟ್ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದು ೬೪೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸರ್ಕಾರದ ಆದೇಶದಂತೆ ಎಲ್ಲಾ ಪರೀಕ್ಷಾರ್ಥಿಗಳು ಸಮವಸ್ತç ಧರಿಸಿ ಪರೀಕ್ಷೆಗೆ ಹಾಜರಾದರು. ಸಪ್ಲಿಮೆಂಟರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮಾತ್ರ ಸಮವಸ್ತçದಲ್ಲಿ ಇರಲಿಲ್ಲ. ಕುಶಾಲನಗರ ಪರೀಕ್ಷಾ ಕೇಂದ್ರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ, ಆರೋಗ್ಯ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಶನಿವಾರಸಂತೆ ಪಟ್ಟಣದಲ್ಲಿ ಭಾರತಿ ವಿದ್ಯಾಸಂಸ್ಥೆ ಹಾಗೂ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರವಾಗಿದ್ದು, ಸೋಮವಾರ ೨ ವಿದ್ಯಾಕೇಂದ್ರಗಳಲ್ಲಿ ೨೫೫ ವಿದ್ಯಾರ್ಥಿಗಳು ಕನ್ನಡ ಪರೀಕ್ಷೆ ಬರೆದರು.

ಭಾರತಿ ವಿದ್ಯಾಸಂಸ್ಥೆ, ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆ, ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆ, ಬಾಪೂಜಿ ವಿದ್ಯಾಸಂಸ್ಥೆ, ಕಾವೇರಿ ಪ್ರೌಢಶಾಲೆ, ಸುಪ್ರಜ ಗುರುಕುಲ, ನಿಡ್ತ, ಹಂಡ್ಲಿ, ಗೌಡಳ್ಳಿ ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾರತಿ ವಿದ್ಯಾಸಂಸ್ಥೆ ಕೇಂದ್ರದಲ್ಲಿ ೧೩೫ ಹಾಗೂ ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಯಲ್ಲಿ ೧೨೦ ವಿದ್ಯಾರ್ಥಿಗಳು ಥರ್ಮಲ್ ಸ್ಕಾö್ಯನರ್ ಪರೀಕ್ಷೆಗೆ ಒಳಗಾಗಿ, ಸ್ಯಾನಿಟೈಜರ್ ಸಿಂಪಡಿಸಿಕೊAಡು ಕೊಠಡಿಗಳಿಗೆ ಹಾಜರಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು ನಿರಾತಂಕವಾಗಿ ಪರೀಕ್ಷೆ ಬರೆದರು.

ಭಾರತಿ ವಿದ್ಯಾಸಂಸ್ಥೆಯಲ್ಲಿ ೧೨ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ಕೊಠಡಿಗೆ ಹಾಜರಾಗಿ ಪರೀಕ್ಷೆ ಬರೆದರು. ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ.

ತಹಶೀಲ್ದಾರ್ ಗೋವಿಂದ್‌ರಾಜ್, ಪೊಲೀಸ್ ಇನ್ಸ್ಪೆಕ್ಟರ್ ಎಸ್. ಪರಶಿವಮೂರ್ತಿ, ಸಿಬ್ಬಂದಿ ಲೋಕೇಶ್, ಬೋಪಣ್ಣ, ಸತೀಶ್, ಮುರುಳಿ ಭೇಟಿ ನೀಡಿ ಪರಿಶೀಲಿಸಿದರು. ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.