ಸ್ತಿçà ಸಬಲೀಕರಣಕ್ಕೆ ಮತ್ತಷ್ಟು ಒತ್ತು - ಮೋದಿ
ನವದೆಹಲಿ, ಮಾ. ೨೭: ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್' ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿಯವರು, ಸಾವಿತ್ರಿಬಾಯಿ ಫುಲೆ ಅವರು ಮಹಿಳೆಯರಲ್ಲಿ ಅನಕ್ಷರತೆ ಮತ್ತು ಹೆಣ್ಣು ಭ್ರೂಣ ಹತ್ಯೆಯಂತಹ ಸಾಮಾಜಿಕ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಿದರು. ಶಿಕ್ಷಣವನ್ನು ಪೂರ್ಣಗೊಳಿಸಲು ಸಾಧ್ಯವಾಗದ ಹೆಣ್ಣು ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ನಾವು 'ಕನ್ಯಾ ಶಿಕ್ಷಾ ಪ್ರವೇಶ ಉತ್ಸವ'ವನ್ನು ಪ್ರಾರಂಭಿಸಿದ್ದೇವೆ. ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ ಎಂದು ಹೇಳಿದರು. ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ಒತ್ತು ನೀಡಬೇಕಿದೆ. ಇದು ಆರ್ಥಿಕತೆಗೆ ಸಂಬAಧಿಸಿದ ವಿಷಯವಾದ್ರೂ ಆರ್ಥಿಕತೆಗಿಂತ ಹೆಚ್ಚು.. ಭಾರತದ ಸಾಮರ್ಥ್ಯದ ವಿಷಯವಾಗಿದೆ. ಭಾರತದ ಸಾಮರ್ಥ್ಯವು ವಿಶ್ವದಲ್ಲಿ ಗೋಚರಿಸುತ್ತಿದೆ. ಭಾರತದ ಉತ್ಪನ್ನಗಳು ವಿದೇಶಿ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿವೆ ಎಂದು ಪ್ರಧಾನಿ ಮೋದಿ ಹೇಳಿದರು. ಒಂದು ಕಾಲದಲ್ಲಿ ಭಾರತದಿಂದ ರಫ್ತು ಪ್ರಮಾಣ ೧೦೦ ಶತಕೋಟಿ, ಕೆಲವೊಮ್ಮೆ ೧೫೦ ಶತಕೋಟಿ, ಕೆಲವೊಮ್ಮೆ ೨೦೦ ಶತಕೋಟಿ ಇತ್ತು. ಇಂದು ಭಾರತ ೪೦೦ ಶತಕೋಟಿ ಡಾಲರ್ಗೆ ತಲುಪಿದೆ ಎಂದು ಹೇಳಿದರು. ಅಂದರೆ ಭಾರತದಲ್ಲಿ ತಯಾರಾದ ವಸ್ತುಗಳಿಗೆ ಪ್ರಪಂಚದಾದ್ಯAತ ಬೇಡಿಕೆ ಹೆಚ್ಚುತ್ತಿದೆ. ಎರಡನೆಯದಾಗಿ, ಭಾರತದ ಪೂರೈಕೆಯು ದಿನದಿಂದ ದಿನಕ್ಕೆ ಬಲಗೊಳ್ಳುತ್ತಿದೆ ಎಂದು ಹೇಳಿದರು.
ಮಹಿಳಾ ಕ್ರಿಕೆಟ್ ವಿಶ್ವಕಪ್ : ಭಾರತಕ್ಕೆ ಸೋಲು
ಕ್ರೆöÊಸ್ಟ್ಚರ್ಚ್, ಮಾ. ೨೭: ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ನಲ್ಲಿ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ವಿರೋಚಿತ ಸೋಲು ಕಂಡಿದೆ. ವಿಶ್ವಕಪ್ ಸೆಮಿಸ್ಗೆ ಲಗ್ಗೆ ಇಡಲು ಭಾರತಕ್ಕೆ ಈ ಪಂದ್ಯ ಬಹುಮುಖ್ಯವಾಗಿತ್ತು. ಇನ್ನು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ನಿಗದಿತ ಓವರ್ನಲ್ಲಿ ೭ ವಿಕೆಟ್ ನಷ್ಟಕ್ಕೆ ೨೭೪ ರನ್ ಪೇರಿಸಿತ್ತು. ಭಾರತ ನೀಡಿದ ೨೭೫ ರನ್ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೊನೆಯ ಎಸೆತದಲ್ಲಿ ಒಂದು ರನ್ ಪಡೆಯುವ ಮೂಲಕ ಗೆಲುವಿನ ನಗೆ ಬೀರಿದೆ. ಹೀಗಾಗಿ ಭಾರತ ಟೂರ್ನಿಯಿಂದ ಹೊರಬಿದ್ದಂತಾಗಿದೆ. ಭಾರತ ಪರ ಸ್ಮೃತಿ ಮಂದಾನ ೭೧, ಶಫಾಲಿ ವರ್ಮಾ ೫೩, ಮಿಥಾಲಿ ರಾಜ್ ೬೮ ಮತ್ತು ಹರ್ಮನ್ ಪ್ರೀತ್ ಕೌರ್ ೪೮ ರನ್ ಬಾರಿಸಿದ್ದು ಭಾರತ ಉತ್ತಮ ರನ್ ಕಲೆ ಹಾಕಲು ಸಾಧ್ಯವಾಗಿತ್ತು. ದಕ್ಷಿಣ ಆಫ್ರಿಕಾ ಪರ ಲೌರಾ ೮೦, ಲಾರಾ ಗೂಡಾಲ್ ೪೯, ಮಿಗನಾನ್ ಅಜೇಯ ೫೨ ರನ್ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ವಿಶ್ವಕಪ್ ಸೆಮಿಫೈನಲ್ಗೆ ನಾಲ್ಕು ತಂಡಗಳು ಪ್ರವೇಶಿಸಿವೆ. ಮೊದಲ ಸೆಮಿಫೈನಲ್ ಆಸ್ಟೆçÃಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವೆ ತಾ. ೩೦ ರಂದು ನಡೆಯಲಿದೆ. ಇನ್ನು ಎರಡನೇ ಸೆಮಿಫೈನಲ್ ತಾ. ೩೧ ರಂದು ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆAಡ್ ನಡುವೆ ನಡೆಯಲಿವೆ. ಏಪ್ರಿಲ್ ೩ರಂದು ಫೈನಲ್ ಪಂದ್ಯ ನಡೆಯಲಿದೆ.
ಪಿ.ವಿ. ಸಿಂಧುಗೆ ಗೆಲುವು - ಪ್ರಣವ್ಗೆ ಸೋಲು
ನವದೆಹಲಿ, ಮಾ. ೨೭: ಸ್ವಿಸ್ ಓಪನ್ ೨೦೨೨ರ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ಪಿ.ವಿ. ಸಿಂಧು ಚಾಂಪಿಯನ್ ಆಗಿದ್ದಾರೆ. ಒಲಿಂಪಿಕ್ ಪದಕ ವಿಜೇತೆ ಸಿಂಧು ೪೯ ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ನಾಲ್ಕನೇ ಶ್ರೇಯಾಂಕದ ಥಾಯ್ಲೆಂಡ್ ಆಟಗಾರ್ತಿಯನ್ನು ೨೧-೧೬, ೨೧-೮ ಸೆಟ್ಗಳಿಂದ ಮಣಿಸಿದರು. ಈ ಋತುವಿನಲ್ಲಿ ಇದು ಅವರ ಎರಡನೇ ಮಹಿಳಾ ಸಿಂಗಲ್ಸ್ ಪ್ರಶಸ್ತಿಯಾಗಿದೆ. ಅದೇ ಸಮಯದಲ್ಲಿ, ಪುರುಷರ ಸಿಂಗಲ್ಸ್ನ ಫೈನಲ್ನಲ್ಲಿ ಭಾರತದ ಹೆಚ್.ಎಸ್. ಪ್ರಣಯ್ ಸೋಲನ್ನು ಅನುಭವಿಸಿದ್ದಾರೆ. ಇಂಡೋನೇಷ್ಯಾದ ಜೊನಾಥನ್ ಕ್ರಿಸ್ಟಿ ೨೧-೧೨, ೨೧-೧೮ರಿಂದ ಪ್ರಣಯ್ ಸೋಲಿಸಿದರು.
ಬಸ್ ಪಲ್ಟಿ - ೭ ಮಂದಿ ದುರ್ಮರಣ
ಚಿತ್ತೂರು, ಮಾ. ೨೭: ಬಸ್ವೊಂದು ಮಗುಚಿ ಬಿದ್ದ ಪರಿಣಾಮ ೭ ಮಂದಿ ಸಾವನ್ನಪ್ಪಿ, ೪೫ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿ-ತಿರುಪತಿ ಹೆದ್ದಾರಿಯ ಬಳಿಯ ಬಕರಾಪೇಟ ಕಣುಮಾ ಎಂಬಲ್ಲಿ ಭಾನುವಾರ ನಡೆದಿದೆ. ಮದುವೆ ನಿಶ್ಚಿತಾರ್ಥಕ್ಕೆ ಜನರನ್ನು ಹೊತ್ತು ಸಾಗುತ್ತಿದ್ದ ಬಸ್ ಪಲ್ಟಿಯಾಗಿದೆ. ಖಾಸಗಿ ಬಸ್ನಲ್ಲಿ ಸುಮಾರು ೬೩ ಪ್ರಯಾಣಿಕರಿದ್ದರು. ಅತಿ ವೇಗದ ಚಾಲನೆಯೇ ದುರಂತಕ್ಕೆ ಕಾರಣವಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತರನ್ನು ಮಾಲಿಶೆಟ್ಟಿ ವೆಂಗಪ್ಪ (೬೦), ಮಾಲಿಶೆಟ್ಟಿ ಮುರಳಿ (೪೫), ಕಾಂತಮ್ಮ (೪೦), ಮಾಲಿಶೆಟ್ಟಿ ಗಣೇಶ್ (೪೦), ಜೆ. ಯಶಸ್ವಿನಿ (೮), ಚಾಲಕ ನಬಿ ರಸೂಲ್ ಮತ್ತು ಕ್ಲೀನರ್ ಎಂದು ಗುರುತಿಸಲಾಗಿದೆ. ಅನಂತಪುರ ಜಿಲ್ಲೆಯ ಧರ್ಮಾವರಂನ ರಾಜೇಂದ್ರ ನಗರದ ವೇಣು ಅವರ ನಿಶ್ಚಿತಾರ್ಥ ಚಿತ್ತೂರು ಜಿಲ್ಲೆಯ ನಾರಾಯಣವನಂ ಮೂಲದ ಯುವತಿ ಜೊತೆ ನಿಶ್ಚಯವಾಗಿತ್ತು. ಭಾನುವಾರ ಬೆಳಿಗ್ಗೆ ತಿರುಚಾನೂರಿನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವೇಣು (ವರ) ಕುಟುಂಬವು ಇತರ ೬೩ ಮಂದಿಯೊAದಿಗೆ ಖಾಸಗಿ ಬಸ್ನಲ್ಲಿ ಮಧ್ಯಾಹ್ನ ೩.೩೦ಕ್ಕೆ ಧರ್ಮಾವರಂನಿAದ ಹೊರಟಿತ್ತು. ಚಾಲಕ ವೇಗವಾಗಿ ವಾಹನ ಚಲಾಯಿಸಿದ್ದರಿಂದ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ, ಸುಮಾರು ೧೦೦ ಅಡಿಯ ಕಣಿವೆಗೆ ಉರುಳಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ೭ ಮಂದಿ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದು, ೪೫ ಮಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಭಯೋತ್ಪಾದಕರ ದಾಳಿಯಲ್ಲಿ ಗಾಯಗೊಂಡಿದ್ದ ಪೊಲೀಸ್ ಸಾವು
ಶ್ರೀನಗರ, ಮಾ. ೨೭: ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಗಾಯಗೊಂಡಿದ್ದ ವಿಶೇಷ ಪೊಲೀಸ್ ಅಧಿಕಾರಿಯ (ಎಸ್ಪಿಒ) ಸಹೋದರ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಎಸ್ಪಿಒನನ್ನು ಇಶ್ಫಾಕ್ ಅಹ್ಮದ್ ಹಾಗೂ ಅವರ ಸಹೋದರ ವಿದ್ಯಾರ್ಥಿಯಾಗಿದ್ದ ಉಮರ್ ಜಾನ್ ಎಂದು ಗುರುತಿಸಲಾಗಿದೆ. ಶನಿವಾರ ಬುದ್ಗಾಮ್ನ ಚಡಾಬಗ್ ಪ್ರದೇಶದಲ್ಲಿನ ಅವರ ನಿವಾಸದಲ್ಲಿ ಅವರಿಬ್ಬರನ್ನೂ ಭಯೋತ್ಪಾದಕರು ಗುಂಡಿಕ್ಕಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಉಮರ್ ಇಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಇಶ್ಫಾಕ್ ಸಾವನ್ನಪ್ಪಿದ್ದರು. ಕಳೆದ ನಾಲ್ಕು ದಿನಗಳಲ್ಲಿ ಕಾಶ್ಮೀರದಲ್ಲಿ ಹತ್ಯೆಯಾದ ಎರಡನೇ ಪೊಲೀಸ್ ಸಿಬ್ಬಂದಿ ಇಶ್ಫಾಕ್ ಆಗಿದ್ದಾರೆ. ತಾ. ೨೨ ರಂದು ಶ್ರೀನಗರದ ಜುನಿಮಾರ್ ಸೌರಾ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಹುತಾತ್ಮರಾಗಿದ್ದರು. ಘಟನೆಯನ್ನು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮತ್ತು ಇತರ ರಾಜಕೀಯ ಪಕ್ಷಗಳ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ.
ಬಸ್ ಡಿಕ್ಕಿಯಾಗಿ ಆನೆ ಸಾವು
ಬೆಂಗಳೂರು, ಮಾ. ೨೭: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ೨೦ ವರ್ಷದ ಆನೆಯೊಂದು ಸಾವನ್ನಪ್ಪಿರುವ ಘಟನೆ ಕನಕಪುರ ರಸ್ತೆಯಲ್ಲಿ ನಡೆದಿದೆ. ದೇವಿಕಾ ರಾಣಿ ಎಸ್ಟೇಟ್ ಬಳಿ ಈ ಘಟನೆ ತಡರಾತ್ರಿ ಸಂಭವಿಸಿದೆ. ತಲಘಟ್ಟಪುರದಲ್ಲಿ ಪ್ರಕರಣ ದಾಖಲಾಗಿದೆ. ಮುಂಜಾನೆ ಪ್ರಕರಣ ಬೆಳಕಿಗೆ ಬಂದಿದೆ. ಬಸ್ನಲ್ಲಿ ೧೩ ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬಸ್ ಮೆಜೆಸ್ಟಿಕ್ ನಿಲ್ದಾಣಕ್ಕೆ ತೆರಳುತ್ತಿತ್ತು. ಅಪಘಾತದಿಂದಾಗಿ ಚಾಲಕನಿಗೆ ಗಾಯಗಳಾಗಿದ್ದು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ರಸ್ತೆ ಮೇಲೆ ಬಸ್ ತೆರಳುತ್ತಿದ್ದ ಮಾರ್ಗದಲ್ಲೆ ಆನೆ ಏಕಾಏಕಿ ಓಡಿ ಬಂದಿದ್ದಾಗಿಯೂ, ಆ ಸಂದರ್ಭದಲ್ಲಿ ಬ್ರೇಕ್ ಹಾಕಿದರೂ ಬಸ್ ಆನೆಗೆ ಡಿಕ್ಕಿ ಹೊಡೆದಿದ್ದಾಗಿ ಚಾಲಕ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾನೆ. ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದೆ.