ಪೊನ್ನಂಪೇಟೆ, ಮಾ.೨೮: ತರಗತಿ ಕೊಠಡಿಯಲ್ಲಿ ನಾಲ್ಕು ಗೋಡೆಗಳ ಮಧ್ಯದಲ್ಲಿ ಕಲಿಯುವ ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಇನ್ನಿತರ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ತಮ್ಮ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಪಾಡಿಕೊಂಡು, ವ್ಯಕ್ತಿತ್ವ ವಿಕಸನವನ್ನು ಮಾಡಿಕೊಳ್ಳಬೇಕು ಎಂದು ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಭೋಗೋಳಶಾಸ್ತç ಉಪನ್ಯಾಸಕ ಎಸ್.ಆರ್. ತಿರುಮಲಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಪೊನ್ನಂಪೇಟೆ ಸ.ಪ.ಪೂ.ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದರು. ಗಾಯನದ ಮೂಲಕ ವಿದ್ಯಾರ್ಥಿಗಳನ್ನು ರಂಜಿಸಿದರು. ಮತ್ತೋರ್ವ ಅತಿಥಿ ಪದವಿಪೂರ್ವ ಶಿಕ್ಷಣ ಇಲಾಖೆಯ ನಿವೃತ್ತ ಪ್ರಭಾರ ಉಪನಿರ್ದೇಶಕಿ ಡಾ.ಕೆ.ಎಂ.ಭವಾನಿ ಮಾತನಾಡಿ ವಿದ್ಯಾರ್ಥಿಗಳು ಬದುಕಿನಲ್ಲಿ ಉತ್ತಮ ಚಾರಿತ್ರö್ಯವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದರು.

ಪ್ರಾಂಶುಪಾಲ ಶಿವಕುಮಾರ್ ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಪೊನ್ನಂಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮಂಡಚAಡ ದಿನೇಶ್ ಚಿಟ್ಟಿಯಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಮೂಕಳೇರ ಕುಶಾಲಪ್ಪ, ಪೊನ್ನಂಪೇಟೆ ಗ್ರಾ. ಪಂ. ಅಧ್ಯಕ್ಷೆ ಗಿರಿಜಾ ವೆಂಕಟೇಶ್, ಉಪಾಧ್ಯಕ್ಷೆ ಬೊಟ್ಟಂಗಡ ದಶಮಿ ದೇಚಮ್ಮ, ನಿವೃತ್ತ ಉಪನ್ಯಾಸಕ ವಿಶ್ವನಾಥ್, ಗ್ರಾ.ಪಂ.ಸದಸ್ಯ ರಾಮಕೃಷ್ಣ ಹಾಗೂ ಇನ್ನಿತರ ಉಪನ್ಯಾಸಕರು ಇದ್ದರು. ಕಾರ್ಯಕ್ರಮದಲ್ಲಿ ಡಾ.ಭವಾನಿ, ವಿಶ್ವನಾಥ್, ಶಿವಕುಮಾರ್, ಗಿರಿಜಾ ವೆಂಕಟೇಶ್, ದಶಮಿ ದೇಚಮ್ಮ, ಎಸ್.ಆರ್.ತಿರುಮಲಯ್ಯ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕ್ರೀಡೆ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ದತ್ತಿನಿಧಿ ವಿತರಿಸ ಲಾಯಿತು. ಉಪನ್ಯಾಸಕ ಡಾ.ರಾಜೇಂದ್ರ ಪ್ರಸಾದ್ ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು. ಗ್ರಂಥಪಾಲಕ ಬಿ. ಸಿದ್ದಲಿಂಗಸ್ವಾಮಿ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕ ವಸಂತಕುಮಾರ್ ಸ್ವಾಗತಿಸಿದರೆ, ಉಪನ್ಯಾಸಕಿ ಸೌಮ್ಯ ವಂದಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ನಡೆದವು.