ಮಡಿಕೇರಿ, ಮಾ. ೨೭: ಏಪ್ರಿಲ್ ೫ ರಂದು ಹಸಿರುಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಂ ಅವರ ಜನ್ಮ ದಿನಾಚರಣೆ ಮತ್ತು ಏಪ್ರಿಲ್ ೧೪ ರಂದು ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಆಚರಿಸುವ ಸಂಬAಧ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಹಸಿರುಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಂ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ಬಾರಿ ಕೋವಿಡ್ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆ ಇಬ್ಬರು ಮಹನೀಯರ ಜನ್ಮ ದಿನೋತ್ಸವವವನ್ನು ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕೊರೊನಾ ಪೂರ್ವದಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದ್ದ ಮಾದರಿಯಲ್ಲಿ ಈ ಬಾರಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಸಲಹೆ ಮಾಡಿದರು.

ಜಿಲ್ಲೆಯವರನ್ನು ಮುಖ್ಯ ಭಾಷಣಕಾರರನ್ನಾಗಿ ಆಹ್ವಾನಿಸುವುದು, ಸ್ತಬ್ಧಚಿತ್ರ ಹಾಗೂ ಕಲಾ ತಂಡಗಳ ಮೆರವಣಿಗೆ ಏರ್ಪಡಿಸುವುದು, ಕೋವಿಡ್ ಸಂದರ್ಭದಲ್ಲಿ ಉತ್ತಮ ಕೆಲಸ ನಿರ್ವಹಿಸಿದ ಪೌರಕಾರ್ಮಿಕರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರನ್ನು ಸನ್ಮಾನಿಸುವಂತೆ ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.

ಈ ಸಂದರ್ಭ ಮಾತನಾಡಿದ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಅವರು, ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಅಂಬೇಡ್ಕರ್ ಭವನ ಇದುವರೆಗೆ ನಿರ್ಮಿಸಿಲ್ಲ. ಆದ್ದರಿಂದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಾಗ ಒದಗಿಸುವಂತಾಗಬೇಕು ಎಂದು ಕೋರಿದರು.

ಜಿಲ್ಲಾ ಕೇಂದ್ರಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ರೂ. ೪ ಕೋಟಿ ಅನುದಾನ ಬಿಡುಗಡೆ ಆಗಲಿದೆ. ಆ ನಿಟ್ಟಿನಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯ ಸಹಕಾರಕ್ಕೆ ದಿವಾಕರ ಅವರು ಮನವಿ ಮಾಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು, ಮಡಿಕೇರಿ ನಗರ ಸುತ್ತಮುತ್ತ ಜಾಗ ಗುರುತಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಅವರು ಅಂಬೇಡ್ಕರ್ ಭವನ ನಿರ್ಮಾಣ ಸಂಬAಧ ಜಿಲ್ಲಾ ಕೇಂದ್ರಕ್ಕೆ ರೂ. ೪ ಕೋಟಿ, ತಾಲೂಕು ಕೇಂದ್ರದಲ್ಲಿ ರೂ. ೨ ಕೋಟಿ, ಹೋಬಳಿ ಮಟ್ಟದಲ್ಲಿ ರೂ. ೭೫ ಲಕ್ಷ, ಗ್ರಾಮೀಣ ಪ್ರದೇಶದಲ್ಲಿ ರೂ. ೨೦ ಲಕ್ಷ ಒದಗಿಸಲು ಅವಕಾಶವಿದೆ ಎಂದು ಮಾಹಿತಿ ನೀಡಿದರು.

ಪ್ರಮುಖರಾದ ಗಣೇಶ್ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಚರಿತ್ರೆ ಹಾಗೂ ಸಂವಿಧಾನ ಕುರಿತು ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ ಏರ್ಪಡಿಸಿ ಬಹುಮಾನ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.