ಸಿದ್ದಾಪುರ, ಮಾ. ೨೮: ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ನೆಲ್ಯಹುದಿಕೇರಿಯ ಸಿ.ಪಿ.ಐ(ಎಂ) ಪಕ್ಷದ ವತಿಯಿಂದ ನೆಲ್ಯಹುದಿಕೇರಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಿ.ಪಿ.ಐ(ಎಂ) ಪಕ್ಷದ ಮುಖಂಡ ಪಿ.ಆರ್. ಭರತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಪಕ್ಷದ ಪದಾಧಿಕಾರಿಗಳಾದ ಜೋಸ್, ಮೊಣಪ್ಪ, ಚಂದ್ರನ್, ಶಿವರಾಮನ್ ಇನ್ನಿತರರು ಹಾಜರಿದ್ದರು.