*ಗೋಣಿಕೊಪ್ಪ, ಮಾ. ೨೭: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಮಹಾ ಪೋಷಕರಾದ ಪುಟ್ಟಿಚಂಡ ಐಯ್ಯಣ್ಣ ಅವರ ನಿಧನಕ್ಕೆ ಪೊನ್ನಂಪೇಟೆ ಸ್ಥಳೀಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ಸಂತಾಪ ಸೂಚಿಸಲಾಯಿತು.
ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಪಾರಂಪರಿಕ ಪ್ರಾಥಮಿಕ ಶಾಲಾ ಕಟ್ಟಡದಲ್ಲಿನ ಸ್ಥಳೀಯ ಸಂಸ್ಥೆಯ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.
ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಕಾರ್ಯದರ್ಶಿ ವಾಮನ, ಸಹ ಕಾರ್ಯದರ್ಶಿ ಪುಷ್ಪಾ ಆಶೋಕ್, ವಿದ್ಯಾರ್ಥಿಗಳು ಹಾಗೂ ಇತರ ಪದಾಧಿಕಾರಿಗಳು ಹಾಜರಿದ್ದರು.