ಮಡಿಕೇರಿ, ಮಾ. ೨೯: ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುವ ‘ಪರೀಕ್ಷಾ ಪೆ ಚರ್ಚಾ' ವರ್ಚುವಲ್ ಸಂವಾದ ಕಾರ್ಯಕ್ರಮದ ೫ನೇ ಆವೃತ್ತಿಯು ಏಪ್ರಿಲ್ ೧ ರಂದು ನಡೆಯಲಿದ್ದು, ಪರೀಕ್ಷಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳು ವಂತೆ ಜಿಲ್ಲಾಧಿಕಾರಿ ಬಿ.ಸಿ. ಸತೀಶ ಅವರು ಕರೆ ನೀಡಿದರು.
ನಗರದ ಜಿಲ್ಲಾಡಳಿತ ಭವನದ ತಮ್ಮ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಹಂತದಲ್ಲಿ ಶೈಕ್ಷಣಿಕ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿ ಗಳಲ್ಲಿ ಭಯ ಹೋಗಲಾಡಿಸಿ ಆತ್ಮಸ್ಥೆöÊರ್ಯ ಮೂಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದರು. ಯಶಸ್ವಿಯಾಗಿ ೪ ಆವೃತ್ತಿ ಪೂರ್ಣ ಗೊಂಡಿದೆ. ವಿಶ್ವದಾ ದ್ಯಂತ ಏಕಕಾಲದಲ್ಲಿ ಕಾರ್ಯಕ್ರಮ ಏ. ೧ ರಂದು ನೇರಪ್ರಸಾರ ಗೊಳ್ಳಲಿದ್ದು, ಡಿಡಿ ನ್ಯಾಷನಲ್, ರೇಡಿಯೋ ಚಾನೆಲ್, ಯೂಟ್ಯೂಬ್ ಚಾನಲ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸ ಬಹುದಾಗಿದೆ ಎಂದು ವಿವರಿಸಿದರು.
ವಿದ್ಯಾರ್ಥಿಗಳೊಂದಿಗೆ ಪೋಷಕರು ಕೂಡ ಈ ಕಾರ್ಯಕ್ರಮ ವೀಕ್ಷಿಸಿ ಮಕ್ಕಳ ಶೈಕ್ಷಣಿಕ ಸಾಧನೆಗೆ ಪ್ರೋತ್ಸಾಹ ನೀಡಬೇಕು. ಜಿಲ್ಲೆಗಳ ಆಯಾ ಶಾಲೆಗಳಲ್ಲಿ ಕಾರ್ಯಕ್ರಮ ವೀಕ್ಷಣೆಗೆ ಅನುಕೂಲ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಜಿಲ್ಲೆಯ ವಿದ್ಯಾರ್ಥಿನಿ : ಮಡಿಕೇರಿಯ ಕೇಂದ್ರೀಯ ವಿದ್ಯಾಲಯದ ೯ನೇ ತರಗತಿ ವಿದ್ಯಾರ್ಥಿನಿ ಪದ್ಮಪ್ರಿಯ ವರ್ಚುವಲ್ ಮೂಲಕ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ದೇಶದ ೧೫ ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿ ಗಳು ಸಂವಾದದಲ್ಲಿ ಪಾಲ್ಗೊಳ್ಳುವ ಉದ್ದೇಶದಿಂದ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಇದರಲ್ಲಿ ಪದ್ಮಪ್ರಿಯ ಆಯ್ಕೆಗೊಂಡಿದ್ದಾರೆ. ಪ್ರಧಾನಿಗೆ ಪದ್ಮಪ್ರಿಯ ಪ್ರಶ್ನೆ ಕೇಳಲಿದ್ದಾರೆ. ಎಂದು ತಿಳಿಸಿದರು. ಗೋಷ್ಠಿಯಲ್ಲಿ ಜಿಲ್ಲಾ ಶಿಕ್ಷಣಾಧಿಕಾರಿ ವೇದಮೂರ್ತಿ, ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲ ಅರ್ಜುನ್ ಸಿಂಗ್, ನವೋದಯ ವಿದ್ಯಾಲಯದ ಪ್ರಾಂಶುಪಾಲ ಪಂಕಜಾಕ್ಷನ್ ಇದ್ದರು.