ಮಡಿಕೇರಿ, ಮಾ. ೨೯: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾಸಮಿತಿ ಕರೆ ನೀಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ ನಗರದಲ್ಲಿ ಕಾರ್ಮಿಕ ಸಂಘಟನೆಗಳಿAದ ಪ್ರತಿಭಟನೆ ನಡೆಯಿತು. ಸುದರ್ಶನ ವೃತ್ತದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.